Featured

ಭೀಕರ ಅಪಘಾತ : ಡಿವೈಡರ್ ಗೆ ಢಿಕ್ಕಿ ಹೊಡೆದ ಕಾರು ಮುಂದಿದ್ದ ಲಾರಿಗೆ ಡಿಕ್ಕಿ ; ಒಂಬತ್ತು ಮಂದಿ ವಿದ್ಯಾರ್ಥಿಗಳು ಸ್ಥಳದಲ್ಲೇ ಸಾವು -Vishwanews24

ಪುಣೆ: ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಡಿವೈಡರ್ ಗೆ ಢಿಕ್ಕಿ ಹೊಡೆದು ಬಳಿಕ ಮುಂದಿದ್ದ ಟ್ರಕ್‍ ಗುದ್ದಿದ ಪರಿಣಾಮ ಸ್ಥಳದಲ್ಲಿಯೇ 9 ಮಂದಿ ವಿದ್ಯಾರ್ಥಿಗಳು ಮೃತಪಟ್ಟಿರುವ ಘಟನೆ ಪುಣೆ-ಸೊಲ್ಲಾಪುರ ಹೆದ್ದಾರಿಯಲ್ಲಿ ಬರುವ ಕದಂವಕ್​ ವಸ್ತಿ ಗ್ರಾಮದ ಬಳಿ ಜು.20 ರ ಶುಕ್ರವಾರ ತಡರಾತ್ರಿ ನಡೆದಿದೆ.

ಮೃತ ವಿದ್ಯಾರ್ಥಿಗಳನ್ನು ದತ್ತ ಗಣೇಶ್​ ಯಾದವ್​, ಜುಬೇರ್ ಅಜೀಜ್ ಮುಲಾನಿ,ನಿಖಿಲ್​ ಚಂದ್ರಕಾಂತ್​, ಅಕ್ಷಯ್​ ಭರತ್​ ವೈಕರ್​, ವಿಶಾಲ್​ ಸುಭಾಷ್​ ಯಾದವ್​, ಪರ್ವೇಜ್​ ಅತ್ತರ್​, ನೂರ್​ ಮಹಮ್ಮದ್​ ಅಬ್ಬಾಸ್​ ದಯಾ, ಶುಭಂ ರಾಮ್​ದಾಸ್​ ಭಿಸೆ, ಅಕ್ಷಯ್​ ಚಂದ್ರಕಾಂತ್​ ಎಂದು ಗುರುತಿಸಲಾಗಿದೆ. ವಿದ್ಯಾರ್ಥಿಗಳೆಲ್ಲರೂ ಪುಣೆಯ ಯಾವತ್ ಗ್ರಾಮದವರಾಗಿದ್ದಾರೆ ಎಂದು ತಿಳಿದುಬಂದಿದೆ.

ವಿದ್ಯಾರ್ಥಿಗಳು ಪುಣೆಯಿಂದ ರಾಯ್‍ಗಢ್‍ಗೆ ತೆರಳಿ ವಾಪಸ್ ಆಗುತ್ತಿದ್ದ ಸಂದರ್ಭ ಕಾರಿನ ಚಾಲಕನ ನಿಯಂತ್ರಣ ತಪ್ಪಿ ಈ ಅಪಘಾತ ಸಂಭವಿಸಿದೆ. ಅಪಘಾತದ ತೀವ್ರತೆಗೆ ಕಾರಿನಲ್ಲಿದ್ದ 9 ವಿದ್ಯಾರ್ಥಿಗಳೂ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ.

ಘಟನೆಯ ಬಳಿಕ ಕೆಲಕಾಲ ಸಂಚಾರ ಅಸ್ತವ್ಯಸ್ತವಾಗಿತ್ತು. ಈ ಕುರಿತು ಪುಣೆ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Vishwa News 24

Recent Posts

ತುಳುನಾಡಿನ ಸಾಂಪ್ರದಾಯಿಕ ಆಚರಣೆಗಳಲ್ಲಿ ಒಂದಾದ ಪ್ರೇತ ಮದುವೆ : ಸತ್ತು 25 ವರ್ಷ ಆದ್ಮೇಲೆ ಒಂದಾದ ಜೋಡಿ – vishwanews24

ತುಳುನಾಡಿನ ಸಾಂಪ್ರದಾಯಿಕ ಆಚರಣೆಗಳಲ್ಲಿ ಒಂದಾದ ಪ್ರೇತ ಮದುವೆ : ಸತ್ತು 25 ವರ್ಷ ಆದ್ಮೇಲೆ ಒಂದಾದ ಜೋಡಿ ತುಳುನಾಡಿನ ಸಾಂಪ್ರದಾಯಿಕ…

1 hour ago

ಮಂಗಳೂರಿಗೆ ಆಗಮಿಸಿದ ಬಾಲಿವುಡ್ ನಟ ಶಾರುಖ್ ಖಾನ್ – vishwanews24

ಮಂಗಳೂರಿಗೆ ಆಗಮಿಸಿದ ಬಾಲಿವುಡ್ ನಟ ಶಾರುಖ್ ಖಾನ್ ಮಂಗಳೂರು: ನಗರದಲ್ಲಿ ಆಯೋಜಿಸಲಾಗಿರುವ ಕಾರ್ಯಕ್ರಮದಲ್ಲಿ ಭಾಗವಹಿಸಲು ಬಾಲಿವುಡ್ ನಟ ಶಾರುಖ್ ಖಾನ್…

2 hours ago

ರಾಜ್ಯದ 13 ಸಚಿವರಿಗೆ ಜಿಲ್ಲಾ ಉಸ್ತುವಾರಿ ಹಂಚಿಕೆ: ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳ ಉಸ್ತುವಾರಿಯಾಗಿ ಯು.ಟಿ ಖಾದರ್ – vishwanews24

ರಾಜ್ಯದ 13 ಸಚಿವರಿಗೆ ಜಿಲ್ಲಾ ಉಸ್ತುವಾರಿ ಹಂಚಿಕೆ.. ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಮತ್ತು ಕೊಡಗು ಜಿಲ್ಲೆಗಳ ಉಸ್ತುವಾರಿಯಾಗಿ…

2 hours ago

ಪಠ್ಯಪುಸ್ತಕ ವಿವಾದದ ಬೆನ್ನಲ್ಲೇ NCERT ಸ್ಪಷ್ಟನೆ – vishwanews24

ಪಠ್ಯಪುಸ್ತಕ ವಿವಾದದ ಬೆನ್ನಲ್ಲೇ NCERT ಸ್ಪಷ್ಟನೆ ನವದೆಹಲಿ: 6ನೇ ತರಗತಿಯ ಕನ್ನಡ ಪಠ್ಯಪುಸ್ತಕ ‘ಕೃಷ್ಣ’ ಕುರಿತು ಎದ್ದಿರುವ ವಿವಾದಕ್ಕೆ NCERT(ರಾಷ್ಟ್ರೀಯ…

2 hours ago

ಮುಲ್ಕಿ : ಗಾಂಜಾ ಮಾರಾಟ ಹಾಗೂ ಸಾಗಾಟ ಮಾಡುತ್ತಿದ್ದ ಆರೋಪಿಯ ಬಂಧನ ; 4 ಕೆ.ಜಿ ಗಾಂಜಾ ವಶ – vishwanews24

ಮುಲ್ಕಿ : ಗಾಂಜಾ ಮಾರಾಟ ಹಾಗೂ ಸಾಗಾಟ ಮಾಡುತ್ತಿದ್ದ ಆರೋಪಿಯ ಬಂಧನ ; 4 ಕೆ.ಜಿ ಗಾಂಜಾ ವಶ ಮುಲ್ಕಿ:…

2 hours ago

ಎನ್‌ಸಿಇಆರ್‌ಟಿ ಬಿಡುಗಡೆ ಮಾಡಿದ ಕನ್ನಡ ಪಠ್ಯಪುಸ್ತಕಕ್ಕೆ ಮಧು ಬಂಗಾರಪ್ಪ ವಿರೋಧ – vishwanews24

ಎನ್‌ಸಿಇಆರ್‌ಟಿ ಬಿಡುಗಡೆ ಮಾಡಿದ ಕನ್ನಡ ಪಠ್ಯಪುಸ್ತಕಕ್ಕೆ ಮಧು ಬಂಗಾರಪ್ಪ ವಿರೋಧ ಬೆಂಗಳೂರು: 6ನೇ ತರಗತಿಗಾಗಿ ಎನ್‌ಸಿಇಆರ್‌ಟಿ (ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ…

3 hours ago