ಕಾಬೂಲ್: ಭೀಕರ ಭೂಕಂಪದಿಂದ ತತ್ತರಿಸಿರುವ ಅಫ್ಘಾನಿಸ್ತಾನದ ಜನತೆಗೆ ಭಾರತ ನೆರವಿನ ಹಸ್ತ ಚಾಚಿದೆ. ಭಾರತವು ಶುಕ್ರವಾರ ಎರಡನೇ ಬಾರಿಗೆ ಅಗತ್ಯ ವಸ್ತುಗಳನ್ನು ಅಫ್ಘಾನ್ ಸಂತ್ರಸ್ತರಿಗಾಗಿ ರವಾನಿಸಿದೆ.
ಅಫ್ಘಾನಿಸ್ತಾನದ ಪೂರ್ವ ಭಾಗದಲ್ಲಿ ಭಾರಿ ಭೂಕಂಪ ಸಂಭವಿಸಿ 1,000ಕ್ಕೂ ಹೆಚ್ಚು ಜನರನ್ನು ಬಲಿಪಡೆದಿದೆ. ಭೂಕಂಪದಿಂದಾಗಿ ಸಾವಿರಾರು ಮಂದಿ ಸಂಕಷ್ಟಕ್ಕೆ ಸಿಲುಕಿದ್ದಾರೆ. ಅವರಿಗೆ ನೆರವು ನೀಡಲು ಭಾರತ ಮುಂದಾಗಿದ್ದು, ಈಗಾಗಲೇ ತಂಡವೊಂದು ಕಾಬೂಲ್ ತಲುಪಿದೆ. ವಿದೇಶಾಂಗ ವ್ಯವಹಾರಗಳ ಸಚಿವಾಲಯದ ವಕ್ತಾರ ಅರಿಂದಮ್ ಬಾಗ್ಚಿ ಈ ಕುರಿತು ಟ್ವೀಟ್ ಮಾಡಿ ಮಾಹಿತಿ ಹಂಚಿಕೊಂಡಿದ್ದಾರೆ.
ರಿಡ್ಜ್ ಟೆಂಟ್‌ಗಳು, ಸ್ಲೀಪಿಂಗ್ ಬ್ಯಾಗ್ಸ್, ಹೊದಿಕೆಗಳು, ಸ್ಲೀಪಿಂಗ್ ಮ್ಯಾಟ್ ಸೇರಿದಂತೆ ಇತ್ಯಾದಿ ಅಗತ್ಯ ವಸ್ತುಗಳನ್ನು ಅಪ್ಘಾನ್ ಜನತೆಗೆ ನೆರವಿಗಾಗಿ ರವಾನಿಸಲಾಗಿದೆ. ಪರಿಹಾರ ಸರಕನ್ನು ವಿಶ್ವಸಂಸ್ಥೆಯ ಮಾನವೀಯ ವ್ಯವಹಾರಗಳ ಸಮನ್ವಯ ಕಚೇರಿ (UNOCHA) ಮತ್ತು ಕಾಬೂಲ್‌ನಲ್ಲಿರುವ ಅಫ್ಘಾನ್ ರೆಡ್ ಕ್ರೆಸೆಂಟ್ ಸೊಸೈಟಿ (ARCS)ಗೆ ಹಸ್ತಾಂತರಿಸಲಾಗುವುದು.
ಜೂನ್ 22, 2022 ರಂದು ಅಫ್ಘಾನಿಸ್ತಾನದಲ್ಲಿ ಸಂಭವಿಸಿದ ಭೂಕಂಪದಿಂದಾಗಿ ಸಾವಿರಕ್ಕೂ ಹೆಚ್ಚು ಮಂದಿ ಮೃತಪಟ್ಟರು, ಸಾವಿರಾರು ಮಂದಿ ತೊಂದರೆಗೆ ಸಿಲುಕಿದ್ದಾರೆ. ಸಂತ್ರಸ್ತರಿಗಾಗಿ ಭಾರತ ಸರ್ಕಾರವು ಎರಡು ವಿಮಾನಗಳಲ್ಲಿ 27 ಟನ್ ತುರ್ತು ಪರಿಹಾರ ರವಾನಿಸಿದೆ ಎಂದು ಎಂಇಎ ತಿಳಿಸಿದೆ.
ಅಫ್ಘಾನಿಸ್ತಾನಕ್ಕೆ ಮಾನವೀಯ ಸಹಾಯ ಒದಗಿಸಲು ತನ್ನ ತಾಂತ್ರಿಕ ತಂಡವನ್ನು ಕಳುಹಿಸಿದ ಭಾರತದ ನಿರ್ಧಾರವನ್ನು ತಾಲಿಬಾನ್ ಸ್ವಾಗತಿಸಿದೆ. ಸಂಕಷ್ಟಕ್ಕೆ ಸಿಲುಕಿರುವ ಆಫ್ಘನ್ನರ ರಕ್ಷಣೆಗೆ ರಾಜತಾಂತ್ರಿಕರು ಮತ್ತು ತಾಂತ್ರಿಕ ತಂಡವನ್ನು ಕಾಬೂಲ್‌ನಲ್ಲಿರುವ ರಾಯಭಾರಿ ಕಚೇರಿಗೆ ಕಳುಹಿಸಿರುವ ಭಾರತದ ನಿರ್ಧಾರ ಸ್ವಾಗತಾರ್ಹ ಎಂದು ತಾಲಿಬಾನ್ ವಕ್ತಾರ ಅಬ್ದುಲ್ ಕಹರ್ ಬಾಲ್ಚಿ ತಿಳಿಸಿದ್ದಾರೆ.
ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…