Featured

ಭೀಕರ ರಸ್ತೆ ಅಪಘಾತದಲ್ಲಿ ಸೇವೆಗೆ ತೆರಳುತ್ತಿದ್ದ ಯೋಧ ಸೇರಿ ನಾಲ್ವರು ಸಾವು

ಬಂಗಾರಪೇಟೆ, :- ಭಾರತೀಯ ಸೇನೆಯಲ್ಲಿ ಸೇವೆ ಸಲ್ಲಿಸುತ್ತಿದ್ದ ಯೋಧನನ್ನು ವಿಮಾನ ನಿಲ್ದಾಣಕ್ಕೆ ಬಿಡಲು ಹೋಗುತ್ತಿದ್ದ ಸಂದರ್ಭದಲ್ಲಿ ಅವರ ಕಾರು ಅಪಘಾತಕ್ಕೀಡಾಗಿ ಯೋಧ, ಮಾಜಿ ಯೋಧ ಸೇರಿ ನಾಲ್ವರು ಮೃತಪಟ್ಟಿರುವ ದಾರುಣ ಘಟನೆ ಇಲ್ಲಿನ ಅನಿಗಾನಹಳ್ಳಿ ಬಳಿ ಕಳೆದ ರಾತ್ರಿ ನಡೆದಿದೆ.

ಕೆಜಿಎಫ್ ನಗರದ ಚಾಂಪಿಯನ್ ರೀಫ್ ನಿವಾಸಿಗಳಾದ ಯೋಧ ಭರತ್ (38), ಮಾಜಿ ಯೋಧ ರಮೇಶ್ ಬಾಬು (39), ಬಾಬು (39) ಹಾಗೂ ಕಾರು ಚಾಲಕ ರಿಗೋ (30) ಮೃತಪಟ್ಟವರು. ಯೋಧ ಭರತ್ ಶ್ರೀನಗರದಲ್ಲಿ ಭಾರತೀಯ ಸೇನೆಯಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ. ಅವರನ್ನು ಬೀಳ್ಕೊಡಲು ರಾತ್ರಿ 11.45ರ ವೇಳೆ ಟಾಟಾ ಇಂಡಿಕಾ ಕಾರಿನಲ್ಲಿ ನಾಲ್ವರು ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಪ್ರಯಾಣಿಸುತ್ತಿದ್ದರು. ಕಾರು ಅನಿಗಾನಹಳ್ಳಿ ತಲುಪಿದಾಗ ಎದುರಿನಿಂದ ವೇಗವಾಗಿ ಬರುತ್ತಿದ್ದ ಟಾಟಾ ಸುಮೋಗೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ನಾಲ್ವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಟಾಟಾ ಸುಮೋದಲ್ಲಿದ್ದ ಇಬ್ಬರಿಗೂ ಗಂಭೀರ ಗಾಯಗಳಾಗಿವೆ. ಗಾಯಾಳುಗಳನ್ನು ಕೋಲಾರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಭರತ್ ಹಾಗೂ ರಿಗೋ ವಿವಾಹಿತರಾಗಿದ್ದಾರೆ. ಮೃತದೇಹಗಳನ್ನು ರಾಬರ್ಟ್‍ಸನ್‍ಪೇಟೆಯ ಸರ್ಕಾರಿ ಸಾರ್ವಜನಿಕ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆಗಾಗಿ ರವಾನಿಸಲಾಗಿದೆ. ತಮ್ಮವರನ್ನು ಕಳೆದುಕೊಂಡ ಕುಟುಂಬದ ಸದಸ್ಯರ ಆಕ್ರಂದನ ಮುಗಿಲು ಮುಟ್ಟಿತ್ತು. ಬಂಗಾರಪೇಟೆ ಪೊಲೀಸರು ಘಟನಾ ಸ್ಥಳಕ್ಕೆ ಭೈೀಟಿ ನೀಡಿ ಪರಿಶೀಲನೆ ನಡೆಸಿ, ಪ್ರಕರಣ ದಾಖಲಿಸಿಕೊಂಡಿದ್ದಾರೆ.

 

Vishwa News 24

Recent Posts

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು: ಯು.ಟಿ.ಖಾದರ್ – vishwanews24

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು ,  ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…

2 days ago

ಉಚ್ಚಿಲ : ಮೊಗವೀರ ಕುಲಗುರು ಕೀರ್ತಿಶೇಷ ಶ್ರೀ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ – vishwanews24

ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…

2 days ago

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ : ಅ. 18-19ರಂದು ವಿಜಯ ದಶಮಿ ಕರೆಯಲ್ಲಿ ಜೋಡುಕರೆ ಕಂಬಳ – vishwanews24

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…

2 days ago

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ – vishwanews24

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…

2 days ago

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ – vishwanews24

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…

2 days ago

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ – vishwanews24

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…

2 days ago