Featured

ಭೀಕರ ರಸ್ತೆ ಅಪಘಾತ : ಆಂಬುಲೆನ್ಸ್​ ಮತ್ತು ಲಾರಿ ಡಿಕ್ಕಿ ; ಮೂವರ ದುರ್ಮರಣ

ಉಡುಪಿ: ಅಂಬುಲೆನ್ಸ್ ಮತ್ತು ಲಾರಿ ನಡುವೆ ಭೀಕರ ಅಪಘಾತ ಸಂಭವಿಸಿದೆ. ಪರಿಣಾಮ ಸ್ಥಳದಲ್ಲಿಯೇ ಮೂರು ಮಂದಿ ಮೃತಪಟ್ಟಿದ್ದು, ಓರ್ವ ಮಹಿಳೆ ಗಂಭೀರವಾಗಿ ಗಾಯವಾಗಿರುವ ಘಟನೆ ಜಿಲ್ಲೆಯಲ್ಲಿ ನಡೆದಿದೆ.

ಉಡುಪಿ ಜಿಲ್ಲೆಯ ಕೋಟ ಮಣೂರು ಎಂಬಲ್ಲಿ ಈ ಘಟನೆ ನಡೆದಿದ್ದು, ಮೃತರನ್ನು ಉತ್ತರಕನ್ನಡ ಮೂಲದವರು ಎಂದು ಗುರುತಿಸಲಾಗಿದೆ.

ಉತ್ತರಕನ್ನಡ ಮೂಲದ ಉಲ್ಲಾಸ್ ತಳೇಕರ್ ಅವರಿಗೆ ಅನಾರೋಗ್ಯವಿದ್ದ ಕಾರಣ, ಉಲ್ಲಾಸ್ ಜೊತೆ ಕುಟುಂಬಸ್ಥರು ಮಣಿಪಾಲ ಕೆಎಂಸಿ ಆಸ್ಪತ್ರೆಗೆ ಬರುತ್ತಿದ್ದರು. ಈ ವೇಳೆ ಉಡುಪಿಯ ಕೋಟ ಮಣೂರು ಬಳಿ ಲಾರಿ ಮತ್ತು ಅಂಬುಲೆನ್ಸ್ ಡಿಕ್ಕಿ ಹೊಡೆದಿದೆ. ಪರಿಣಾಮ ಮೂವರು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ.

ಇಂದು ಮುಂಜಾನೆ ನಡೆದ ಈ ಅಪಘಾತದಲ್ಲಿ ಸಾಧನಾ ಉಲ್ಲಾಸ್ ತಳೇಕರ್ ಅವರಿಗೆ ಗಂಭೀರ ಗಾಯವಾಗಿದ್ದು, ಅವರನ್ನು ಮಣಿಪಾಲ ಕೆಎಂಸಿ ಆಸ್ಪತ್ರೆಗೆ ರವಾನಿಸಲಾಗಿದೆ. ಕುಂದಾಪುರ ಸರ್ಕಾರಿ ಆಸ್ಪತ್ರೆಗೆ ಮೂರು ಮೃತದೇಹಗಳನ್ನು ರವಾನೆ ಮಾಡಲಾಗಿದೆ.

ಈ ಕುರಿತು ಕೋಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮಾತ್ರವಲ್ಲ, ಘಟನಾ ಸ್ಥಳದಲ್ಲಿ ಕೋಟ ಪೊಲೀಸರು ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

 

Vishwa News 24

Recent Posts

ಎಸ್‌ಟಿಪಿಯನ್ನು ಮೂಳೂರಿನಿಂದ ಬೆಳಪು ಪ್ರದೇಶಕ್ಕೆ ಸ್ಥಳಾಂತರ ಮಾಡಿದರೆ ಕಾಪು ಪುರಸಭೆಗೆ ಸಂಪೂರ್ಣ ಸ್ವಾಗತ : ದೇವಿಪ್ರಸಾದ್ ಶೆಟ್ಟಿ – vishwanews24

ಬೆಳಪು ಪ್ರದೇಶದಲ್ಲಿ ಎಲ್ಲಾ ಅಗತ್ಯ ಸೌಲಭ್ಯಗಳೊಂದಿಗೆ ಘಟಕ ನಿರ್ಮಿಸಿದರೆ ನಮ್ಮಿಂದ ಯಾವುದೇ ವಿರೋಧ ಇರುವುದಿಲ್ಲ : ದೇವಿಪ್ರಸಾದ್ ಶೆಟ್ಟಿ ಮೂಳೂರು…

2 days ago

ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ – vishwanews24

ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ ಬೆಳಗಾವಿ: ಪ್ರಿಯಕರನ ಜೊತೆ…

2 days ago

ಬಿಜೆಪಿ ನಡೆಸಿರುವ ಅಪವಿತ್ರ ಮೈತ್ರಿ ಇತಿಹಾಸವನ್ನು ದೇಶ ಮರೆತಿಲ್ಲ : ಬಿ.ಕೆ.ಹರಿಪ್ರಸಾದ್ – vishwanews24

ದೇಶದ ಜಾತ್ಯತೀತ ಮೌಲ್ಯಗಳನ್ನು ರಕ್ಷಿಸಲು ಕಾಂಗ್ರೆಸ್ ಪಕ್ಷ ಸದಾ ಸಮಾನ ಚಿಂತನೆಯ ಪಕ್ಷಗಳೊಂದಿಗೆ ಕೈಜೋಡಿಸಿದೆ : ಬಿ.ಕೆ.ಹರಿಪ್ರಸಾದ್ ಬೆಂಗಳೂರು: ‘ಬಿಜೆಪಿ…

2 days ago

ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ – vishwanews24

ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ ಪಡುಬಿದ್ರಿ: ಸನಾತನ ಫೌಂಡೇಶನ್‌ನ ಅಧ್ಯಕ್ಷ,…

2 days ago

ವಿವಾಹಿತ ಮಹಿಳೆ  ಜತೆ ಲಿವ್ ಇನ್ ರಿಲೇಶನ್‌ ಶಿಪ್‌ನಲ್ಲಿದ್ದ ಯುವಕ ಶವವಾಗಿ ಪತ್ತೆ  – vishwanews24

ವಿವಾಹಿತ ಮಹಿಳೆ ಜತೆ ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ಶವವಾಗಿ ಪತ್ತೆ  ಬೆಂಗಳೂರು: ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ನೇಣುಬಿಗಿದ…

2 days ago

ಬಿಜೆಪಿ ನಾಯಕ ಸುವೇಂದು ಅಧಿಕಾರಿ ಬಂಗಾಳದ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕಾರ – vishwanews24

ಪಶ್ಚಿಮ ಬಂಗಾಳದ ರಾಜಕೀಯ ಇತಿಹಾಸದಲ್ಲಿ ಹೊಸ ಪರ್ವ.. ಬಿಜೆಪಿ ಮೊದಲ ಸಿಎಂ ಆಗಿ ಪ್ರಮಾಣ ಸ್ವೀಕಾರ.. ಐತಿಹಾಸಿಕ ಕ್ಷಣಕ್ಕೆ ಮೋದಿ,…

2 days ago