ತಿರುಚಿ: ನಿಂತಿದ್ದ ಟ್ರಕ್ಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಮೂವರು ಹೆಂಗಸರು ಹಾಗೂ ಮಕ್ಕಳಿಬ್ಬರು ಸೇರಿದಂತೆ ಒಂದೇ ಕುಟುಂಬದ 8 ಮಂದಿ ದಾರುಣವಾಗಿ ಸಾವಿಗೀಡಾಗಿರುವ ಘಟನೆ ತಮಿಳುನಾಡಿನ ತಿರುಚಿಯಲ್ಲಿ ಭಾನುವಾರ ಬೆಳಗ್ಗೆ ನಡೆದಿದೆ.
ಸಮಯಪುರಂ ಬಳಿಯಿರುವ ರಾಷ್ಟ್ರೀಯ ಹೆದ್ದಾರಿ 45ರಲ್ಲಿ ಈ ಅವಘಡ ಸಂಭವಿಸಿದೆ.
ಎಸ್ಯುವಿ ಕಾರಿನಲ್ಲಿ ಒಟ್ಟು 12 ಮಂದಿ ಪ್ರಯಾಣಿಸುತ್ತಿದ್ದರು. ಚೆನ್ನೈನ ಮೆದವಕ್ಕಮ್ನಿಂದ ತಿರುಚಿ-ಕರೂರು ಹೆದ್ದಾರಿ ಮಾರ್ಗವಾಗಿ ಪೆಟ್ಟವೈತಲಯ್ ಕಡೆ ಪ್ರಯಾಣಿಸುತ್ತಿದ್ದರು. ಈ ವೇಳೆ ಸಮಯಪುರಂನಲ್ಲಿರುವ ಟೋಲ್ ಸಂಗ್ರಹ ಕೇಂದ್ರದ ಬಳಿ ಚಾಲಕನ ನಿಯಂತ್ರಣ ಕಳೆದುಕೊಂಡ ಕಾರು ಭರ್ತಿಯಾಗಿ ನಿಂತಿದ್ದ ಟ್ರಕ್ಗೆ ಡಿಕ್ಕಿ ಹೊಡೆದಿದೆ.
ಘಟನೆ ನಡೆಯುತ್ತಿದ್ದಂತೆ ಸ್ಥಳೀಯರು ರಕ್ಷಣಾ ಕಾರ್ಯದಲ್ಲಿ ತೊಡಗಿ, ಸಮಯಪುರಂ ಪೊಲೀಸ್ ಠಾಣೆಗೆ ಮಾಹಿತಿ ನೀಡಿದರು. ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಮೂವರನ್ನು ತಿರುಚಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಕುಂದಾಪುರ: ಹೋಂ ಸ್ಟೇ ಎನ್ ಒಸಿ ನೀಡಲು ಲಂಚ ಪಡೆದ ಆರೋಪ ; ಗ್ರಾಮ ಲೆಕ್ಕಿಗ ಲೋಕಾಯುಕ್ತ ಬಲೆಗೆ ಕುಂದಾಪುರ…
ಉಡುಪಿ ಉಚ್ಚಿಲ ದಸರಾದಲ್ಲಿ ಮಹಿಳಾ ದಸರಾ ಉದ್ಘಾಟಿಸಿದ ಸಿಎಂ ಕರಾವಳಿ ಕರ್ನಾಟಕ ‘ಜಾಗತಿಕ ಟೂರಿಸಂ ಹಬ್’ ಆಗಿ ಅಭಿವೃದ್ಧಿ :…
ಮಂಗಳೂರು: ಅಪ್ರಾಪ್ತ ಬಾಲಕನಿಗೆ ಲೈಂಗಿಕ ಕಿರುಕುಳ ಆರೋಪ : ಚರ್ಚ್ ಫಾದರ್ ವಿರುದ್ಧ ಪೋಕ್ಸೋ ಪ್ರಕರಣ ದಾಖಲು ಮಂಗಳೂರು: ಮಂಗಳೂರು…
ಉಡುಪಿ: ಪಡಿತರ ಚೀಟಿಯ ಫಲಾನುಭವಿಗಳಿಗೆ ಇ-ಕೆವೈಸಿ ಮಾಡಿಸಲು ಅ. 20 ರ ವರೆಗೆ ಅವಕಾಶ ಉಡುಪಿ: ಸಾರ್ವಜನಿಕ ವಿತರಣಾ ವ್ಯವಸ್ಥೆಯಡಿ…
ಈ ಬಾರಿ ದಸರಾ ಮಹೋತ್ಸವದಲ್ಲಿ ಅಂಬಾರಿ ಹೊತ್ತು ಸಾಗಲಿರುವ ದುಬಾರೆ ವೀರ ಪ್ರಶಾಂತ ಆನೆ ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು…
ಬೆಳ್ತಂಗಡಿ: ನಾವೂರಿನ ಆರೋಗ್ಯ ಕ್ಲಿನಿಕ್ಗೆ ಬೆಂಕಿ ಹಚ್ಚಿದ ಪ್ರಕರಣ; ಓರ್ವನ ಬಂಧನ, ಇಬ್ಬರು ವಶಕ್ಕೆ ಬೆಳ್ತಂಗಡಿ: ನಾವೂರು ಗ್ರಾಮದ ಸ್ವಾತಿ…