ತುಮಕೂರು: ಕಾರಿಗೆ ಇನ್ನೊಂದು ಕಾರು ಢಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ 12 ಮಂದಿ ಸಾವನ್ನಪ್ಪಿರುವ ಘಟನೆ ತುಮಕೂರು ಜಿಲ್ಲೆಯಲ್ಲಿ ಇಂದು ಮುಂಜಾನೆ ನಡೆದಿದೆ.
ಬೆಳಗ್ಗೆ ನಾಲ್ಕು ಗಂಟೆಯ ವೇಳೆಗೆ ಬೆಂಗಳೂರು ಮೂಲದ ಮೂರು ಮಂದಿ ಯುವಕರಿದ್ದ ಬ್ರಿಜಾ ಕಾರು ನಿಯಂತ್ರಣ ತಪ್ಪಿ ರಸ್ತೆ ಡಿವೈಡರಿಗೆ ಡಿಕ್ಕಿ ಹೊಡೆದಿದೆ. ಡಿಕ್ಕಿ ಹೊಡೆದ ನಂತರ ಈ ಕಾರು ಡಿವೈಡರ್ ದಾಟಿ ಮುಂದುಗಡೆ ಬರುತ್ತಿದ್ದ ಟವೇರಾಗೆ ಡಿಕ್ಕಿ ಹೊಡೆದಿದೆ. ಡಿಕ್ಕಿ ರಭಸಕ್ಕೆ ಬ್ರಿಜಾ ಕಾರಿನಲ್ಲಿದ್ದ 3 ಮಂದಿ ಮೃತಪಟ್ಟರೆ ಟವೇರಾದಲ್ಲಿದ್ದ 9 ಮಂದಿ ಮೃತಪಟ್ಟಿದ್ದಾರೆ.
ಕಾರು ಬೆಂಗಳೂರಿನಿಂದ ಧರ್ಮಸ್ಥಳಕ್ಕೆ ತೆರಳುತ್ತಿದ್ದು ಕುಣಿಗಲ್ ಸಮೀಪದ ಬ್ಯಾಲದಕೆರೆ ಬಳಿ ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದಿದೆ. ಬಳಿಕ ಎದುರಿನಿಂದ ಬರುತ್ತಿದ್ದ ಟವೇರಾಕ್ಕೆ ಡಿಕ್ಕಿ ಹೊಡೆದಿದೆ. ಈ ಅಪಘಾತದಿಂದಾಗಿ ಟವೇರಾದಲ್ಲಿದ್ದ 10 ಜನರು ಹಾಗೂ ಕಾರಿನಲ್ಲಿದ್ದ 3 ಜನರು ಸ್ಥಳದಲ್ಲಿಯೇ ದಾರುಣವಾಗಿ ಮೃತಪಟ್ಟಿದ್ದಾರೆ.
ಟವೇರಾದ ಪ್ರಯಾಣಿಕರಾದ ಮಂಜುನಾಥ್ (35), ತನುಜಾ (25), 8 ತಿಂಗಳ ಹೆಣ್ಣು ಮಗು, ಗೌರಮ್ಮ (60), ರತ್ನಮ್ಮ (52), ಸೌಂದರರಾಜ್ (48), ರಾಜೇಂದ್ರ (27), ಸರಳಾ (31), ಪ್ರಶನ್ಯಾ (14) ಕಾರಿನಲ್ಲಿದ್ದ ಲಕ್ಷ್ಮೀಕಾಂತ್ (24), ಸಂದೀಪ (35), ಮಧು (28) ಮೃತರೆಂದು ಪೊಲೀಸರು ತಿಳಿಸಿದ್ದಾರೆ.
ಟವೇರಾದಲ್ಲಿದ್ದ ಪ್ರಯಾಣಿಕರು ತಮಿಳುನಾಡಿನ ಹೊಸೂರಿನವರಾಗಿದ್ದು ಅವರೂ ಕೂಡಾ ಧರ್ಮಸ್ಥಳ ಪ್ರವಾಸ ಮುಗಿಸಿ ಹೊಸೂರಿಗೆ ವಾಪಸ್ ತೆರಳುತ್ತಿದ್ದರು ಎಂದು ತಿಳಿದು ಬಂದಿದೆ.
ಎಂಆರ್‌ಪಿಎಲ್ ನಲ್ಲಿ ಭಾರೀ ಸ್ಫೋಟ : ಸುಟ್ಟು ಕರಕಲಾದ ಸ್ಥಿತಿಯಲ್ಲಿ ಓರ್ವನ ಮೃತದೇಹ ಪತ್ತೆ ಮಂಗಳೂರು: ಎಂಆರ್‌ಪಿಎಲ್‌ನಲ್ಲಿ ಬುಧವಾರ ಮಧ್ಯಾಹ್ನದ…
MRPLನಲ್ಲಿ ಭಾರೀ ಸ್ಫೋಟ : ಎಂಟು ಮಂದಿಗೆ ಗಾಯ ಘಟನಾ ಸ್ಥಳದಲ್ಲಿ ಮಹಿಳಾ ಸಿಬ್ಬಂದಿ ಹಾಜರಿರಲಿಲ್ಲ ಹಾಗೂ ಗಾಯಗೊಂಡಿಲ್ಲ :…
ಬಂಟ್ವಾಳ: ದನಗಳನ್ನು ಸಾಗಿಸುತ್ತಿದ್ದ ಲಾರಿ ವಶಕ್ಕೆ ಬಂಟ್ವಾಳ: ಕಲ್ಲಡ್ಕ ಫ್ಲೈಓವರ್ ಮೇಲೆ ದನಗಳನ್ನು ಸಾಗಿಸುತ್ತಿದ್ದ ಲಾರಿಯೊಂದನ್ನು ಹಿಂದೂ ಸಂಘಟನೆಯ ಕಾರ್ಯಕರ್ತರು…
ಮಂಗಳೂರು: ಎಂಆರ್‌ಪಿಎಲ್ ತೈಲ ಸ್ಥಾವರದಲ್ಲಿ ಭಾರೀ ಸ್ಫೋಟ.. ಬೈಕಂಪಾಡಿ, ಸುರತ್ಕಲ್, ಜೋಕಟ್ಟೆಯಲ್ಲಿ ಕಂಪಿಸಿದ ಕಟ್ಟಡಗಳು ಮಂಗಳೂರು: ಎಂಆರ್‌ಪಿಎಲ್ ತೈಲ ಸ್ಥಾವರದಲ್ಲಿ…
ಕುಂದಾಪುರ: ಪತ್ನಿಗೆ ವಿಷ ನೀಡಿ ಕೊಲೆ ಯತ್ನ ಪ್ರಕರಣ; ಪತಿ, ಸ್ನೇಹಿತೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಕುಂದಾಪುರ : ಪತ್ನಿಗೆ…
ಕಾಪು: ಆಟೋ-ಟೆಂಪೋ ನಡುವೆ ಭೀಕರ ಡಿಕ್ಕಿ; ಚಿಕಿತ್ಸೆ ಫಲಿಸದೇ ಮಗು ಸಾವು ಕಾಪು : ಕಾಪು ಫ್ಲೈಓವರ್ ಬಳಿ ಶನಿವಾರ…