ಭೀಕರ ರಸ್ತೆ ಅಪಘಾತ: ಕುಂಭ ಮೇಳದಿಂದ ಹಿಂದಿರುಗುತ್ತಿದ್ದ ಬೆಳಗಾವಿಯ 6 ಮಂದಿ ಮೃತ್ಯು – vishwanews24

Featured, ರಾಜ್ಯ ನ್ಯೂಸ್

ಭೀಕರ ರಸ್ತೆ ಅಪಘಾತ: ಕುಂಭ ಮೇಳದಿಂದ ಹಿಂದಿರುಗುತ್ತಿದ್ದ  ಬೆಳಗಾವಿಯ 6 ಮಂದಿ ಮೃತ್ಯು

ಮಧ್ಯಪ್ರದೇಶ: ಪ್ರಯಾಗ್‌ರಾಜ್‌ನ ಮಹಾ ಕುಂಭ ಮೇಳಕ್ಕೆ ತೆರಳಿ ಹಿಂದಿರುಗುತ್ತಿದ್ದ ಬೆಳಗಾವಿ ಗೋಕಾಕ್ ನಗರದ 6 ಮಂದಿ ಭೀಕರ ರಸ್ತೆ ಅಪಘಾತದಲ್ಲಿ ಮೃತಪಟ್ಟ ಘಟನೆ ಇಂದು ಸಂಭವಿಸಿದೆ.

ಮಧ್ಯಪ್ರದೇಶದ ಜಬಲಪೂರ ಪೆಹರಾ ಟೋಲ್ ನಾಕಾ ಬಳಿ ಇಂದು ಮುಂಜಾನೆ 4.30ರ ಸುಮಾರಿಗೆ ಕ್ರೂಸರ್ ವಾಹನ ಹಾಗೂ ಬಸ್ ನಡುವೆ ಈ ಅವಘಡ ಸಂಭವಿಸಿದೆ. ಘಟನೆಯಲ್ಲಿ 6 ಮಂದಿ ಮೃತಪಟ್ಟು ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಜಬಲ್‌ಪುರದ ವೈದ್ಯಕೀಯ ಕಾಲೇಜಿಗೆ ದಾಖಲಿಸಲಾಗಿದೆ.

ಇನ್ನೂ 8 ದಿನಗಳಲ್ಲಿ ʻಗೃಹಲಕ್ಷ್ಮಿʼ ಯೋಜನೆ ಹಣ ಬಿಡುಗಡೆ : ಲಕ್ಷ್ಮಿ ಹೆಬ್ಬಾಳ್ಕರ್‌ ಭರವಸೆ – vishwanews24

ಗೋಕಾಕ್ ತಾಲೂಕಿನ ಲಕ್ಷ್ಮಿ ಬಡಾವಣೆ ನಿವಾಸಿಗಳಾದ ಬಾಲಚಂದ್ರ ಗೌಡರ (50), ಸುನೀಲ್ ಶೇಡಶ್ಯಾಳೆ (45), ಬಸವರಾಜ್ ಕುರ್ತಿ (63), ಬಸವರಾಜ್ ದೊಡಮಾಳ್ (49), ಈರಣ್ಣ ಶೇಬಿನಕಟ್ಟಿ (27), ವಿರೂಪಾಕ್ಷ ಗುಮತಿ (61) ಮೃತರು ದುರ್ದೈವಿಗಳು. ಹಾಗೂ ಗಂಭೀರವಾಗಿ ಮುಸ್ತಾಕ್ ಶಿಂಧಿಕುರಬೇಟ, ಸದಾಶಿವನನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

Leave a Reply