ಭೀಕರ ರಸ್ತೆ ಅಪಘಾತ : ಟ್ರ್ಯಾಕ್ಟರ್‌ಗೆ KSRTC ಡಿಕ್ಕಿ ; ಬಸ್ ಚಾಲಕ ಸ್ಥಳದಲ್ಲೇ ಸಾವು – vishwanews24

Featured, ರಾಜ್ಯ ನ್ಯೂಸ್

ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಭೀಕರ ಅಪಘಾತ : ಟ್ರ್ಯಾಕ್ಟರ್‌ಗೆ ಬಸ್ ಡಿಕ್ಕಿ 

KSRTC ಚಾಲಕ ಸ್ಥಳದಲ್ಲೇ ಸಾವು – ಹಲವು ಪ್ರಯಾಣಿಕರಿಗೆ ಗಂಭೀರ ಗಾಯ

ಮಂಡ್ಯ: ಬೆಂಗಳೂರು-ಮಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಕೆಎಸ್‌ಆರ್‌ಟಿಸಿ ಬಸ್ ಚಾಲಕ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ದೇವಿರಹಳ್ಳಿ ಜಂಕ್ಷನ್ ಬಳಿ ನಡೆದಿದೆ.

ಕಬ್ಬಿಣದ ಕಂಬಗಳನ್ನು ತುಂಬಿಕೊಂಡು ಸಾಗುತ್ತಿದ್ದ ಟ್ರ್ಯಾಕ್ಟರ್‌ ಅನ್ನು ಕೆಎಸ್‌ಆರ್‌ಟಿಸಿ ಬಸ್ ಓವರ್‌ಟೇಕ್ ಮಾಡಲು ಯತ್ನಿಸಿದಾಗ ಈ ದುರಂತ ಸಂಭವಿಸಿದೆ. ಡಿಕ್ಕಿಯ ರಭಸಕ್ಕೆ ಟ್ರ್ಯಾಕ್ಟರ್‌ನಲ್ಲಿದ್ದ ಕಬ್ಬಿಣದ ಕಂಬಗಳು ಬಸ್ಸಿನ ಒಳಭಾಗಕ್ಕೆ ನುಗ್ಗಿದ್ದು, ಪರಿಣಾಮವಾಗಿ ಬಸ್ ಚಾಲಕ ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾನೆ.

ಇದನ್ನೂ ಓದಿ: 

ಸತೀಶ್​​ ಜಾರಕಿಹೊಳಿಗೆ ಇಡಿ ದಾಳಿ ರಾಜಕೀಯ ಪ್ರೇರಿತ ; ಅವರು ಯಾವುದೇ ತಪ್ಪು ಮಾಡಿಲ್ಲ : ಸಿಎಂ ಡಿಕೆಶಿ – vishwanews24

ಬಸ್ಸಿನಲ್ಲಿದ್ದ ಹಲವು ಪ್ರಯಾಣಿಕರಿಗೆ ಗಂಭೀರ ಗಾಯಗಳಾಗಿದ್ದು, ಗಾಯಾಳುಗಳನ್ನು ತಕ್ಷಣವೇ ಸಮೀಪದ ಬೆಳ್ಳೂರಿನ ಏಮ್ಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಧಾವಿಸಿದ ಪೊಲೀಸರು ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ಬೆಳ್ಳೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಕೇಸ್‌ ದಾಖಲಾಗಿದೆ.

Leave a Reply