ಬೆಂಗಳೂರು: ಓಮ್ನಿಗೆ ಹಿಂದಿನಿಂದ ಬಂದ ಇನ್ನೋವಾ ಕಾರು ಡಿಕ್ಕಿ ಹೊಡೆದ ಪರಿಣಾಮ ನಾಲ್ವರು ಮೃತಪಟ್ಟ ಘಟನೆ ದೇವನಹಳ್ಳಿ ತಾಲೂಕಿನ ಕನ್ನಮಂಗಲಪಾಳ್ಯ ಬಳಿ ನಡೆದಿದೆ.
ಮಧ್ಯರಾತ್ರಿ ಸುಮಾರು 1.30ಗಂಟೆಗೆ ಅಪಘಾತ ಸಂಭವಿಸಿದ್ದು, ಓಮ್ನಿಯಲ್ಲಿದ್ದ ಸುಂದರ್(25), ಸತೀಶ್(24), ವೆಂಕಟೇಶ್(28), ವಿಕಾಸ್(23) ಮೃತರು. ಮೃತರೆಲ್ಲ ಬೆಂಗಳೂರು ನಿವಾಸಿಗಳಾಗಿದ್ದು, ಫ್ಲವರ್ ಡೆಕೋರೇಶನ್ ಕೆಲಸ ಮಾಡುತ್ತಿದ್ದರು ಎಂದು ತಿಳಿದು ಬಂದಿದೆ.
ಹೇಮಂತ್, ಅಜಿತ್, ರವಿ ಹಾಗೂ ಇನ್ನೋವಾ ಕಾರಿನಲ್ಲಿದ್ದ ಅವಿನಾಶ್, ಮನೋಜ್, ಹಿಂದೂಧರ್, ಮಧು ಎಂಬುವವರು ಗಾಯಗೊಂಡಿದ್ದು, ಅವರನ್ನು ದೇವನಹಳ್ಳಿ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ನೇಹಿತನ ಜನ್ಮದಿನದ ಪಾರ್ಟಿ ಮುಗಿಸಿ ಓಮ್ನಿಯಲ್ಲಿ ನಂದಿಹಿಲ್ಸ್ ರಸ್ತೆಯಲ್ಲಿ ಬರುತ್ತಿದ್ದಾಗ ಹಿಂದಿನಿಂದ ಬಂದ ಇನ್ನೋವಾ ಕಾರು ಡಿಕ್ಕಿ ಹೊಡೆದು ಈ ದುರ್ಘಟನೆ ಸಂಭವಿಸಿದೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…