ಪುದುಕೋಟ್ಟೈ, – ತಮಿಳುನಾಡಿನ ಪುದುಕೋಟ್ಟೈ ಜಿಲ್ಲೆಯ ತಿರುಮಯಂ ಬಳಿ ಭೀಕರ ಅಪಘಾತ ಸಂಭವಿಸಿದ್ದು, ಘಟನೆಯಲ್ಲಿ ಒಂಭತ್ತು ಶಬರಿಮಲೆ ಯಾತ್ರಿಗಳು ಹಾಗೂ ವ್ಯಾನ್ ಚಾಲಕ ಮೃತಪಟ್ಟಿದ್ದಾರೆ.
ತೆಲಂಗಾಣದ ಯಾತ್ರಿಗಳು ಶಬರಿಮಲೆ ಅಯ್ಯಪ್ಪಸ್ವಾಮಿ ದರ್ಶನ ಪಡೆದು, ರಾಮೇಶ್ವರಂಗೆ ಭೇಟಿ ನೀಡಿ ವಾಪಸ್ ಬರುತ್ತಿದ್ದಾಗ ಈ ಅಪಘಾತ ಸಂಭವಿಸಿದೆ.
ಅಯ್ಯಪ್ಪ ಭಕ್ತರು ಪ್ರಯಾಣಿಸುತ್ತಿದ್ದ ವ್ಯಾನ್ ಗೆ ಎದುರಿನಿಂದ ಬಂದ ಟ್ರೇಲರ್ ಲಾರಿಯೊಂದು ಡಿಕ್ಕಿ ಹೊಡೆದಿದೆ.
ಘಟನೆಯಲ್ಲಿ ಏಳು ಮಂದಿ ಸ್ಥಳದಲ್ಲೇ ಮೃತಪಟ್ಟಿದ್ದು, ಗಂಭೀರವಾಗಿ ಗಾಯಗೊಂಡಿದ್ದ ಮೂವರನ್ನು ಪುದುಕೋಟ್ಟೈ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ.
ಅಪಘಾತದ ಬಳಿಕ ಲಾರಿ ಚಾಲಕ, ಲಾರಿಯನ್ನು ಸ್ಥಳದಲ್ಲಿ ಬಿಟ್ಟು, ಪರಾರಿಯಾಗಿದ್ದಾನೆ. ಪುದುಕೋಟ್ಟೈ ಜಿಲ್ಲಾಧಿಕಾರಿ ಎಸ್.ಗಣೇಶ್, ಎಸ್ ಪಿ ಸೆಲ್ವರಾಜ್ ಅಪಘಾತ ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ತಿರುಮಯಂ ಪೊಲೀಸರು ಈ ಸಂಬಂಧ ಪ್ರಕರಣ ದಾಖಲಿಸಿದ್ದಾರೆ.
ಸೆ.25ರಂದು ಉಚ್ಚಿಲದಲ್ಲಿ ಮೊಗವೀರ ಕುಲಗುರು ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಡುಪಿ: ದಕ್ಷಿಣ ಕನ್ನಡ ಮೊಗವೀರ ಮಹಾಜನ…
ಕಾಲೇಜು ಶೈಕ್ಷಣಿಕ ಪ್ರವಾಸದಲ್ಲಿ ಸೆಲ್ಫಿ, ರೀಲ್ಸ್‌ಗೆ ಸಂಪೂರ್ಣ ನಿಷೇಧ - ಶಿಕ್ಷಣ ಇಲಾಖೆಯಿಂದ ಕಟ್ಟುನಿಟ್ಟಿನ ಮಾರ್ಗಸೂಚಿ! ಬೆಂಗಳೂರು : ವಿದ್ಯಾರ್ಥಿಗಳ…
ಕರ್ನಾಟಕದಲ್ಲಿ ಸೆ.30ರಿಂದ ಸಿನೆಮಾ ಟಿಕೆಟ್ ದರ ಏರಿಕೆ ಬೆಂಗಳೂರು: ಕರ್ನಾಟಕ ಸಿನಿ ಮತ್ತು ಸಾಂಸ್ಕೃತಿಕ ಕಾರ್ಯಕರ್ತರ (ಕ್ಷೇಮಾಭಿವೃದ್ಧಿ) ಕಾಯ್ದೆ ಜಾರಿಗೊಂಡಿರುವ…
ಶೃಂಗೇರಿ: ತುಂಗಾ ನದಿಯಲ್ಲಿ ಈಜಲು ತೆರಳಿದ್ದ ಇಂಜಿನಿಯರಿಂಗ್ ವಿದ್ಯಾರ್ಥಿ ನೀರುಪಾಲು ಬೆಂಗಳೂರಿನಿಂದ ಆಗಮಿಸಿದ್ದ ನಾಲ್ವರು ಸ್ನೇಹಿತರು ಚಿಕ್ಕಮಗಳೂರು: ತುಂಗಾ ನದಿಯಲ್ಲಿ…
ಸಂಪಾದನೆ ಮಾಡಿರೋ ಹಣವನ್ನ ಜನರಿಗೆ ಕೊಟ್ರೆ 2028ಕ್ಕೂ ಡಿಕೆ ಶಿ ಸಿಎಂ ಆಗಬಹುದು : ಹೆಚ್.ಡಿ ಕುಮಾರಸ್ವಾಮಿ ಬೆಂಗಳೂರು: ಡಿಕೆ…
ತುಳು ಭಾಷೆಗೆ ಅಧಿಕೃತ ಮಾನ್ಯತೆ: ದಶಕಗಳ ಹೋರಾಟಕ್ಕೆ ಡಿ.ಕೆ. ಶಿವಕುಮಾರ್ ಅವರಿಂದ ಫಲ ಸಿಕ್ಕಿದೆ : ರಮೇಶ್ ಕಾಂಚನ್ ಉಡುಪಿ:…