ಮಂಗಳೂರು : ಸಕಲೇಶಪುರದ ಎಡಕುಮೇರಿ ಮತ್ತು ಕಡಗರಳ್ಳಿ ನಡುವಿನ ದೋಣಿಗಲ್‌ನಲ್ಲಿ ಭೂಕುಸಿತದಿಂದ ಸ್ಥಗಿತಗೊಂಡಿರುವ ಮಂಗಳೂರು-ಬೆಂಗಳೂರು ನಡುವಿನ ರೈಲು ಸಂಚಾರ ಆಗಸ್ಟ್ 8ರ ನಂತರವೇ ಪುನರಾರಂಭಗೊಳ್ಳಲಿದೆ ಎಂದು ಮೈಸೂರು ರೈಲ್ವೆ ವಿಭಾಗ ಮಾಹಿತಿ ನೀಡಿದೆ.
ಭಾರೀ ಭೂಕುಸಿತದಿಂದ ಹಳಿಯ ಮೇಲೆ ಮಣ್ಣು ಬಿದ್ದಿತ್ತು. ಪರಿಣಾಮ 12 ರೈಲುಗಳ ಸೇವೆಗಳನ್ನು ರದ್ದುಗೊಳಿಸಲಾಗಿದೆ. ಜೊತೆಗೆ ಕೆಲವು ರೈಲುಗಳ ಸಂಚಾರ ಮಾರ್ಗವನ್ನು ಬದಲಾವಣೆ ಮಾಡಲಾಗಿತ್ತು.
ಘಟನಾ ಸ್ಥಳದ ಪಕ್ಕದಲ್ಲಿ ರಿಟೈನರ್ ವಾಲ್ ನಿರ್ಮಾಣ ಕಾರ್ಯವು ತ್ವರಿತ ಗತಿಯಲ್ಲಿ ಸಾಗುತ್ತಿದೆ. ಟ್ರ‍್ಯಾಕ್ ಕಂಡೀಷನಿಂಗ್ ಕೆಲಸ ಬಹುತೇಕ ಪೂರ್ಣಗೊಂಡಿದೆ. ದುರಸ್ತಿ ಮಾಡಿದ ಹಳಿಯ ಮೇಲೆ ಗೂಡ್ಸ್ ರೈಲುಗಳ ಪ್ರಾಯೋಗಿಕವಾಗಿ ಓಡಿಸಲಾಗುತ್ತದೆ. ಆದಾಗ್ಯೂ, ಪ್ಯಾಸೆಂಜರ್ ರೈಲಿಗೆ ಹೆಚ್ಚಿನ ಸುರಕ್ಷತಾ ಕ್ರಮಗಳನ್ನು ಪರಿಶೀಲಿಸಲಾಗುತ್ತಿದೆ. ಈ ಹಿನ್ನೆಲೆ ಆಗಸ್ಟ್ 8 ರವರೆಗೆ ಮಂಗಳೂರು ಮತ್ತು ಬೆಂಗಳೂರು ನಡುವೆ ಯಾವುದೇ ರೈಲು ಸೇವೆ ಇರುವುದಿಲ್ಲ ಎಂದು ರೈಲ್ವೆ ಅಧಿಕಾರಿಗಳು ತಿಳಿಸಿದ್ದಾರೆ.
ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡ ಟೆನಿಸ್ ಆಟಗಾರ ಲಿಯಾಂಡರ್ ಪೇಸ್ ಹೊಸದಿಲ್ಲಿ: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಗೆ ಮುನ್ನ ಟೆನಿಸ್ ಆಟಗಾರ…
ಬೀದರ್ : ಮಳೆ ಆರ್ಭಟ - ಸಿಡಿಲು ಬಡಿದು ಯುವಕ ಸಾವು ಬೀದರ್: ಸಿಡಿಲು ಬಡಿದು ಯುವಕನೊಬ್ಬ ಮೃತಪಟ್ಟ ಘಟನೆ ಔರಾದ್…
ಬೆಳ್ತಂಗಡಿ: ಏಕಾಏಕಿ ತೆರೆಯಲ್ಪಟ್ಟ ಬಸ್ಸಿನ ಬಾಗಿಲು ; ನಿಯಂತ್ರಣ ತಪ್ಪಿ ರಸ್ತೆಗೆ ಎಸೆಯಲ್ಪಟ್ಟು ಇಬ್ಬರು ವಿದ್ಯಾರ್ಥಿನಿಯರಿಗೆ ಗಾಯ ಬೆಳ್ತಂಗಡಿ: ಚಲಿಸುತ್ತಿದ್ದ ಬಸ್ಸಿನಿಂದ…
ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿಯಲು ಯತ್ನ; ಯುವಕನ ರಕ್ಷಣೆ ಉಡುಪಿ: ಟಿಕೆಟ್ ಇಲ್ಲದೆ ಪ್ರಯಾಣಿಸುತ್ತಿದ್ದ ಯುವಕನೊಬ್ಬ ರೈಲಿನಿಂದ ಜಿಗಿಯಲು ಯತ್ನಿಸುತ್ತಿದ್ದ…
ಕಾಸರಗೋಡು : ಕೆಟ್ಟು ನಿಂತಿದ್ದ ಪಿಕಪ್ ವ್ಯಾನ್ ಗೆ ಬೈಕ್ ಢಿಕ್ಕಿ: ಸವಾರ ಮೃತ್ಯು ಕಾಸರಗೋಡು : ರಾಷ್ಟ್ರೀಯ ಹೆದ್ದಾರಿಯ ಬದಿಯಲ್ಲಿ…
ಪ್ರಥಮ ಪಿಯುಸಿ ಫಲಿತಾಂಶ ಪ್ರಕಟ ; ಆನ್‌ಲೈನ್‌ನಲ್ಲಿ ವೀಕ್ಷಿಸುವುದು ಹೇಗೆ? ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯು…