Featured

ಭೂಗತ ದೊರೆ ರವಿ ಪೂಜಾರಿ ಬಂಧನಕ್ಕೆ ಸಮ್ಮಿಶ್ರ ಸರ್ಕಾರ ಕಾರಣ : ಸಿಎಂ – Vishwanews24

ಬೆಂಗಳೂರು: ಸೆನೆಗಲ್ ನಲ್ಲಿ ಭೂಗತ ದೊರೆ ರವಿ ಪೂಜಾರಿ ಬಂಧನದಲ್ಲಿ ಸಮ್ಮಿಶ್ರ ಸರ್ಕಾರ  ಕಾರಣ ಎಂದು ಮುಖ್ಯಮಂತ್ರಿ ಕುಮಾರಸ್ವಾಮಿ ಹೇಳಿದ್ದಾರೆ.
ಸರ್ಕಾರ ರಚನೆ ಆದ ಆರಂಭದಲ್ಲೇ ಪೊಲೀಸ್ ಅಧಿಕಾರಿಗಳ ಜೊತೆ ಸಭೆ ನಡೆಸಿ ಸೂಕ್ತ ಕ್ರಮ ಕೈಗೊಳ್ಳಲು ಸೂಚನೆ ನೀಡಲಾಗಿತ್ತು. ಆದರಲ್ಲಿ ರಾಜ್ಯ ಪೊಲೀಸ್ ಇಲಾಖೆ ಯಶಸ್ವಿಯಾಗಿದೆ ಹಾಗೂ ಭಾರತದ ವಿದೇಶಾಂಗ ಇಲಾಖೆ ಪ್ರತಿನಿಧಿಗಳು ಉತ್ತಮವಾಗಿ ಕಾರ್ಯನಿರ್ವಹಿಸಿದೆ. ಇದು ನಮ್ಮ ಯಶಸ್ಸು ಎಂದು ಸಿಎಂ ಕುಮಾರಸ್ವಾಮಿ ತಿಳಿಸಿದ್ದಾರೆ.
ರವಿ ಪೂಜಾರಿ ದೂರವಾಣಿ ಮೂಲಕ ಉದ್ಯಮಿಗಳಿಗೆ ಹಾಗೂ ಗಣ್ಯರಿಗೆ ಬೆದರಿಕೆ ಹಾಕಿ ಹಣ ವಸೂಲಿ ಮಾಡಿ ಭಯದ ವಾತಾವರಣ ನಿರ್ಮಾಣ ಮಾಡಿದ್ದ. ಇದರಲ್ಲಿ 2006 ರಿಂದಲೇ ನಮಗೇ ಕೃತ್ಯ ಎಸಗುವ ಬಗ್ಗೆ ಮಾಹಿತಿ ಲಭಿಸಿತ್ತು. ಆದ್ದರಿಂದ ಸರ್ಕಾರ ರಚನೆಯಾದ ಕೂಡಲೇ ಪೊಲೀಸರಿಗೆ ಕ್ರಮಕೈಗೊಳ್ಳಲು ಸೂಚಿಸಿದೆ. ಕೇಂದ್ರದ ಸಹಕಾರ ಪಡೆದು ಹೆಚ್ಚಿನ ಮಾಹಿತಿ ಕಲೆ ಹಾಕಲಾಯಿತು. ಫೋನ್ ಕರೆ ಮಾಹಿತಿ ಮೇರೆಗೆ ಆತ ಸೆನೆಗಲ್‌ನಲ್ಲಿದ್ದಾನೆ ಎಂಬ ಮಾಹಿತಿ ಲಭಿಸಿತ್ತು. ಆ ಬಳಿಕ ಅಲ್ಲಿನ ಸರ್ಕಾರದೊಂದಿಗೆ ಉತ್ತಮ ಸಂಪರ್ಕ ಏರ್ಪಡಿಸಿ ಆತನ ಬಂಧನಕ್ಕೆ ಕ್ರಮಕೈಗೊಳ್ಳಲಾಗಿದೆ ಎಂದು ಸ್ಪಷ್ಟನೆ ನೀಡಿದರು.
ರವಿ ಪೂಜಾರಿ ಬಂಧನ ವಿಚಾರದಲ್ಲಿ ಯಾವುದೇ ತಪ್ಪು ಮಾಹಿತಿ ಹೋಗುವುದು ಬೇಡ. ಆತ ಸೆನೆಗಲ್ ನಲ್ಲಿ ಡಿಸೆಂಬರ್ 31 ರಂದು ಕ್ರಿಕೆಟ್ ಪಂದ್ಯಗಳನ್ನ ಏರ್ಪಡಿಸುವ ಬಗ್ಗೆ ಫೋಟೋ ಹಾಗೂ ಮಾಹಿತಿ ಲಭಿಸಿತ್ತು. ಇದರ ಆದರ ಮೇಲೆ ನಮ್ಮಲಿನ ಮಾಹಿತಿ ಅಲ್ಲಿನ ಪೊಲೀಸರಿಗೆ ಮಾಹಿತಿ ನೀಡಿದ್ದೇವು. ಆ ಬಳಿಕ ಜನವರಿ 19 ರಂದೇ ರವಿ ಪೂಜಾರಿಯ ಬಂಧನವಾಗಿದೆ. ಅಲ್ಲದೇ ಆತನನ್ನು ಭಾರತ ವಶಕ್ಕೆ ನೀಡಲು ಬೇಕಾದ ಕಾನೂನು ಪ್ರಯತ್ನಗಳನ್ನು ಮಾಡಲಾಗುತ್ತಿದೆ ಎಂದರು.
ರವಿ ಪೂಜಾರಿ ಬಂಧನದಲ್ಲಿ ನಮ್ಮ ಪೊಲೀಸರ ಸಾಧನೆ ಮೆಚ್ಚುವಂತಹದ್ದು, ಅಲ್ಲದ ಅಲ್ಲಿನ ವಿದೇಶಾಂಗ ಇಲಾಖೆ ಅಧಿಕಾರಿಗಳು ಈ ಬಗ್ಗೆ ಕರೆ ಮಾಡಿ ಅಭಿನಂದನೆ ಸಲ್ಲಿಸಿದ್ದೇನೆ ಎಂದು ಹೇಳಿದ್ದಾರೆ.

Vishwa News 24

Recent Posts

ಕುಂದಾಪುರ: ನಿಂತ ಲಾರಿಗಳಿಗೆ ಬಸ್ ಢಿಕ್ಕಿ: ಎರಡು ಸಾವು, ಹಲವರಿಗೆ ಗಾಯ – vishwanews24

ಕುಂದಾಪುರ: ನಿಂತ ಲಾರಿಗಳಿಗೆ ಬಸ್ ಢಿಕ್ಕಿ: ಎರಡು ಸಾವು, ಹಲವರಿಗೆ ಗಾಯ ಕುಂದಾಪುರ: ಮರವಂತೆ ಸಮುದ್ರ ಕಿನಾರೆಯ ಎದುರಿನ‌ ರಾಷ್ಟ್ರೀಯ…

2 hours ago

ರೇಣುಕಾಸ್ವಾಮಿ ಹತ್ಯೆ ಪ್ರಕರಣ : ಜಾಮೀನಿಗಾಗಿ ಸುಪ್ರೀಂ ಕೋರ್ಟ್‌ ಮೊರೆ ಹೋದ ದರ್ಶನ್‌ – vishwanews24

ರೇಣುಕಾಸ್ವಾಮಿ ಹತ್ಯೆ ಪ್ರಕರಣ : ಜಾಮೀನಿಗಾಗಿ ಸುಪ್ರೀಂ ಕೋರ್ಟ್‌ ಮೊರೆ ಹೋದ ದರ್ಶನ್‌ ನವದೆಹಲಿ : ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಜೈಲು…

2 hours ago

ದ. ಕ, ಉಡುಪಿ ಸೇರಿದಂತೆ  5 ದಿನಗಳ ಕಾಲ ಭಾರೀ ಮಳೆಯ ಮುನ್ಸೂಚನೆ ; 25 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ – vishwanews24

ದ. ಕ, ಉಡುಪಿ ಸೇರಿದಂತೆ  5 ದಿನಗಳ ಕಾಲ ಭಾರೀ ಮಳೆಯ ಮುನ್ಸೂಚನೆ ; 25 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ …

2 hours ago

ಉಡುಪಿ ಶ್ರೀಕೃಷ್ಣ ದರ್ಶನಕ್ಕೆ ನೂತನ ಸರತಿ ಸಾಲು ಹಾಗೂ ಐಡಿ ಆಧಾರಿತ ಪ್ರವೇಶ ವ್ಯವಸ್ಥೆ ಉದ್ಘಾಟನೆ – vishwanews24

ಉಡುಪಿ ಶ್ರೀಕೃಷ್ಣ ದರ್ಶನಕ್ಕೆ ನೂತನ ಸರತಿ ಸಾಲು ಹಾಗೂ ಐಡಿ ಆಧಾರಿತ ಪ್ರವೇಶ ವ್ಯವಸ್ಥೆ ಉದ್ಘಾಟನೆ ಉಡುಪಿ : ಶ್ರೀ…

5 hours ago

ಮಂಗಳೂರು: ಸ್ಕೂಟರ್‌ ಸವಾರನಿಗೆ ಖಾರದ ಪುಡಿ ಎರಚಿ ದರೋಡೆ; ಪ್ರಕರಣ ದಾಖಲು – vishwanews24

ಮಂಗಳೂರು: ಸ್ಕೂಟರ್‌ ಸವಾರನಿಗೆ ಖಾರದ ಪುಡಿ ಎರಚಿ ದರೋಡೆ; ಪ್ರಕರಣ ದಾಖಲು ಮಂಗಳೂರು: ಗುರುಪುರ ಬಂಗ್ಲಗುಡ್ಡೆ ಬಳಿ ಸ್ಕೂಟರ್ ಸವಾರರೊಬ್ಬರಿಗೆ…

5 hours ago

ಪಿಯು ವಿದ್ಯಾರ್ಥಿನಿಯರ ನಾಪತ್ತೆ ಪ್ರಕರಣ: ಸಿಐಡಿ ತನಿಖೆಗೆ ಆದೇಶ – vishwanews24

ಪಿಯು ವಿದ್ಯಾರ್ಥಿನಿಯರ ನಾಪತ್ತೆ ಪ್ರಕರಣ: ಸಿಐಡಿ ತನಿಖೆಗೆ ಆದೇಶ 8 ತಿಂಗಳ ಹಿಂದೆ ನಾಪತ್ತೆಯಾಗಿದ್ದ ವಿದ್ಯಾರ್ಥಿಗಳು ಬೆಂಗಳೂರು: ನಗರದ ವಿದ್ಯಾರಣ್ಯಪುರ…

5 hours ago