ಬೆಂಗಳೂರು: ರಾಜ್ಯದ ಹಿರಿಯ ಪೊಲೀಸ್ ಅಧಿಕಾರಿಗಳ ತಂಡ ದಕ್ಷಿಣ ಆಫ್ರಿಕಾದ ಸೆನೆಗಲ್ ನಲ್ಲಿ ಬಂಧಿತನಾಗಿದ್ದ ಭೂಗತ ಪಾತಕಿ ರವಿ ಪೂಜಾರಿಯನ್ನು ಸೋಮವಾರ ನಸುಕಿನಲ್ಲಿ ನಗರಕ್ಕೆ ಕರೆದುಕೊಂಡು ಬಂದಿದ್ದಾರೆ.
ರವಿ ಪೂಜಾರಿಯನ್ನು ಎಡಿಜಿಪಿ ಅಮರ್ ಕುಮಾರ್ ಪಾಂಡೆ, ಸಿಸಿಬಿ ಜಂಟಿ ಕಮಿಷನರ್ ಸಂದೀಪ್ ಪಾಟೀಲ ನೇತೃತ್ವದ ತಂಡ ಬೆಂಗಳೂರಿಗೆ ಕರೆದುಕೊಂಡು ಬಂದಿದ್ದಾರೆ.
ಇಂದು ರವಿ ಪೂಜಾರಿಯನ್ನು ಕೋರ್ಟ್ ಮುಂದೆ ಹಾಜರುಪಡಿಸಲಾಗುತ್ತದೆ. ಶಾಸಕರಾದ ತನ್ವೀರ್ ಸೇಠ್, ಹೆಚ್‍ಎಂ ರೇವಣ್ಣ, ಮಾಜಿ ಶಾಸಕ ಅನಿಲ್ ಲಾಡ್‍ಗೆ ಹಣಕ್ಕೆ ಬೆದರಿಕೆ ಇಟ್ಟು, ಜೀವ ಬೆದರಿಕೆ ಹಾಕಿದ್ದ. ಮಲ್ಪೆ ಮೂಲದ ಈ ಗ್ಯಾಂಗ್‍ಸ್ಟರ್ ವಿರುದ್ಧ ಮಂಗಳೂರಿನಲ್ಲಿ 39, ಬೆಂಗಳೂರಿನಲ್ಲಿ 38 ಕೇಸ್ ಇವೆ.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹಲವು ಪ್ರಕರಣಗಳು ಪೂಜಾರಿ ವಿರುದ್ದ ದಾಖಲಾಗಿದ್ದು ಮಂಗಳೂರು ನಗರ, ಮುಲ್ಕಿ, ಮೂಡಬಿದರೆ, ಬರ್ಕೆ, ಕೋಣಾಚೆ, ಊರ್ವ, ಕಾವೂರು ಸೇರಿದಂತೆ ವಿವಿಧ ಪೊಲೀಸ್ ಠಾಣೆಗಳಲ್ಲಿ 33ಕ್ಕೂ ಹೆಚ್ಚು ಪ್ರಕರಣಗಳಿವೆ. ಸುಮಾರು ಒಂದು ವರ್ಷದಿಂದ ರಾಜ್ಯ ಪೊಲೀಸ್ ಇಲಾಖೆ ಹಾಗೂ ಕೇಂದ್ರದ ತನಿಖಾ ಸಂಸ್ಥೆಗಳು ನಿರಂತರವಾಗಿ ರವಿ ಪೂಜಾರಿಯನ್ನು ಭಾರತಕ್ಕೆ ಕರೆತರಲು ಪ್ರಯತ್ನ ನಡೆಸಿತ್ತು.
ಉಡುಪಿ: ಡೇವಿಡ್ ಡಿಸೋಜಾ ಕೊಲೆ ಪ್ರಕರಣ: ಉತ್ತರಾಖಂಡದಲ್ಲಿ ಮತ್ತೊಬ್ಬ ಆರೋಪಿ ಬಂಧನ ಉಡುಪಿ : ಕಾಪು ಜಿಲ್ಲೆಯ ಮುದರಂಗಡಿಯ ಸೇಂಟ್…
ಬ್ರಹ್ಮಾವರ: ಖಾಸಗಿ ಬಸ್ ಬೆಂಕಿಗಾಹುತಿ ; ಅದೃಷ್ಟವಶಾತ್ ಏಳು ಪ್ರಯಾಣಿಕರು ಪಾರು ಉಡುಪಿ: ಉಡುಪಿಯಿಂದ ಸಾಗರಕ್ಕೆ ತೆರಳುತ್ತಿದ್ದ ಖಾಸಗಿ ಬಸ್ಸೊಂದು…
ಸುರತ್ಕಲ್ : ಕಾಲೇಜು ವಿದ್ಯಾರ್ಥಿಗಳಿಗೆ ಗಾಂಜಾ ಸರಬರಾಜು ಆರೋಪ: ವ್ಯಕ್ತಿಯ ಬಂಧನ 1.206 ಕೆ.ಜಿ. ಗಾಂಜಾ, KTM ಮೋಟಾರ್ ಸೈಕಲ್…
ಸಕಲೇಶಪುರ–ಸುಬ್ರಹ್ಮಣ್ಯ ಮಾರ್ಗದಲ್ಲಿ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಪರಿಶೀಲನೆ ಕಡಬ : ಸಕಲೇಶಪುರ–ಸುಬ್ರಹ್ಮಣ್ಯ ರೋಡ್ ರೈಲು ಮಾರ್ಗದಲ್ಲಿ ನಡೆದ…
ಉಡುಪಿ : ಆ. 20 ರಂದು ನೇರ ಸಂದರ್ಶನ ಉಡುಪಿ : ನಗರದ ಅಂಬಲಪಾಡಿ ಕರಾವಳಿ ಬೈಪಾಸ್ ಬಳಿಯ ರೀಗಲ್…
ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ ಗೃಹ ಜ್ಯೋತಿ ಯೋಜನೆಯ ಫಲಾನುಭವಿಗಳ ಮನೆಗಳ ಮರುಪರಿಶೀಲನೆಗೆ…