ಮುಂಬೈ: ನೆರೆಯ ಭೂತಾನ್ ರಾಷ್ಟ್ರಕ್ಕೆ ಉಡುಗೊರೆಯಾಗಿ ಭಾರತ ಕೋವಿಡ್-19 ಲಸಿಕೆಯನ್ನು ರವಾನಿಸಿದೆ. ಮುಂಬೈನ ಛತ್ರಪತಿ ಶಿವಾಜಿ ಮಹಾರಾಜ್ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಬುಧವಾರ ಮುಂಜಾನೆ 1.5 ಲಕ್ಷ ಕೋವಿಡ್-19 ಲಸಿಕೆಯ ‘ಕೋವಿಶೀಲ್ಡ್’ ಡೋಸೇಜ್‌ಗಳನ್ನು ರವಾನಿಸಲಾಯಿತು.
ಮುಂಬೈನ ಛತ್ರಪತಿ ಶಿವಾಜಿ ಮಹಾರಾಜ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಕೋವಿಶೀಲ್ಡ್ ಲಸಿಕೆಯ 1.5 ಲಕ್ಷ ಡೋಸೇಜ್‌ಗಳನ್ನು ಬುಧವಾರ ಭೂತಾನ್‌ಗೆ ರವಾನಿಸಲಾಗಿದ್ದು ಕೊರೊನಾ ಲಸಿಕೆಯನ್ನು ಉಡುಗೊರೆಯಾಗಿ ಪಡೆದ ಮೊದಲ ರಾಷ್ಟ್ರ ಎಂಬ ಗೌರವಕ್ಕೆ ಭೂತಾನ್ ಪಾತ್ರವಾಗಿದೆ.
ಭಾರತ ಹಾಗೂ ಭೂತಾನ್ ಅನ್ಯೋನ್ಯ ಬಾಂಧವ್ಯವನ್ನು ಹೊಂದಿದ್ದು, ಕೊರೊನಾ ಸಂದರ್ಭದಲ್ಲೂ ಅಗತ್ಯ ವಸ್ತುಗಳ ಪೂರೈಕೆ ಮಾಡಿದೆ. ಕೊರೊನಾ ಸಂದರ್ಭದಲ್ಲೂ ಭಾರತದಿಂದ ಭೂತಾನ್‌ಗೆ 2.8 ಕೋಟಿ ರೂ.ಗಿಂತಲೂ ಅಧಿಕ ಮೌಲ್ಯದ ಪಿಪಿಇ ಕಿಟ್, ಎನ್95 ಮಾಸ್ಕ್ ಸೇರಿದಂತೆ ಅಗತ್ಯ ಔಷಧಿ ಹಾಗೂ ವೈದ್ಯಕೀಯ ಸಾಮಾಗ್ರಿಗಳನ್ನು ಭಾರತದಿಂದ ಸಾಗಾಟ ಮಾಡಲಾಗಿದೆ. ಹಾಗೆಯೇ ಇಲ್ಲಿದ್ದ ೨ ಸಾವಿರ ಭೂತಾನ್ ಪ್ರಜೆಗಳನ್ನು ಕೂಡಾ ಸುರಕ್ಷಿತವಾಗಿ ಸರ್ಕಾರ ಕಳುಹಿಸಿಕೊಟ್ಟಿದೆ.
ಕೋವಿಡ್-19 ಲಸಿಕೆ ಉಡುಗೊರೆಯಾಗಿ ಪಡೆದ ಮೊದಲ ರಾಷ್ಟ್ರವೆಂಬ ಗೌರವಕ್ಕೆ ಭೂತಾನ್ ಪಾತ್ರವಾಗಿದೆ. ಭೂತಾನ್ ಜೊತೆಗೆ ಅನ್ಯೋನ್ಯ ಬಾಂಧವ್ಯ ಕಾಪಾಡಿರುವ ಭಾರತ, ಕೋವಿಡ್-19 ನಿರ್ಬಂಧಗಳ ಹೊರತಾಗಿಯೂ ನಿರಂತರ ಅಗತ್ಯ ವಸ್ತುಗಳನ್ನು ಪೂರೈಸುವ ಮೂಲಕ ಬದ್ಧತೆಯನ್ನು ಪ್ರದರ್ಶಿಸಿದೆ.
ಆಕ್ಸ್‌ಫರ್ಡ್ ವಿಶ್ವವಿದ್ಯಾಲಯ ಹಾಗೂ ಆಸ್ಟ್ರಾಜೆನೆಕಾ ಸಂಸ್ಥೆಗಳು ಅಭಿವೃದ್ಧಿಪಡಿಸಿದ ಕೋವಿಶೀಲ್ಡ್ ಲಸಿಕೆಯನ್ನು ಪುಣೆಯ ಸೀರಂ ಇನ್‌ಸ್ಟಿಟ್ಯೂಟ್ ಆಫ್ ಇಂಡಿಯಾ ತಯಾರಿಸುತ್ತಿದೆ. ಈ ಮೊದಲು ವಿಶ್ವದ ಅತಿ ದೊಡ್ಡ ಕೋವಿಡ್-19 ಲಸಿಕೆ ವಿತರಣೆ ಅಭಿಯಾನಕ್ಕೆ ಚಾಲನೆ ನೀಡಿರುವ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೂತಾನ್ ಪ್ರಧಾನಿ ಲೊಟೆ ಶೆರಿಂಗ್ ಅಭಿನಂದಿಸಿದ್ದರು.
ಕಾರ್ಕಳ: ಎಣ್ಣೆಹೊಳೆ ಸೇತುವೆಯ ಕೆಳಭಾಗದ ನದಿಯಲ್ಲಿ ನಾಪತ್ತೆಯಾಗಿದ್ದ ವ್ಯಕ್ತಿಯ ಮೃತದೇಹ ಪತ್ತೆ ಕಾರ್ಕಳ: ಮರ್ಣೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಎಣ್ಣೆಹೊಳೆ…
ಕಾರ್ಕಳ: ನಾಪತ್ತೆಯಾಗಿದ್ದ ಎಣ್ಣೆಹೊಳೆ ಸೇತುವೆಯ ಕೆಳಭಾಗದ ನದಿಯಲ್ಲಿ ವ್ಯಕ್ತಿಯ ಮೃತದೇಹ ಪತ್ತೆ ಕಾರ್ಕಳ: ಮರ್ಣೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಎಣ್ಣೆಹೊಳೆ…
ಕಿರುಕುಳ ಆರೋಪ : ಇಬ್ಬರು ಮಕ್ಕಳೊಂದಿಗೆ ತಾಯಿ ಆತ್ಮಹತ್ಯೆ ಬಳ್ಳಾರಿ: ಗಂಡನ ಕಿರುಕುಳ ತಾಳಲಾರದೆ ತಾಯಿಯೊಬ್ಬಳು ತನ್ನ ಇಬ್ಬರು ಮಕ್ಕಳನ್ನು…
ಮಂಗಳೂರಿನಿಂದ ಅಗತ್ತಿ ದ್ವೀಪಕ್ಕೆ ವಿಮಾನಯಾನ ಸೇವೆ ;ನೂತನ 'ಚಳಿಗಾಲದ ವೇಳಾಪಟ್ಟಿ ಪ್ರಕಟ ಮಂಗಳೂರು : ಕರಾವಳಿಯ ಪ್ರಯಾಣಿಕರಿಗೆ ದೇಶೀಯ ಹಾಗೂ…
ಕಾಂಗ್ರೆಸ್ನಿಂದ ಆಹ್ವಾನ ಬಂದಿರುವುದು ನಿಜ .. ಪಕ್ಷ ಬದಲಾವಣೆಯಂತಹ ನಿರ್ಧಾರವನ್ನು ಏಕಾಏಕಿ ತೆಗೆದುಕೊಳ್ಳಲು ಸಾಧ್ಯವಿಲ್ಲ .. 2028ರ ವಿಧಾನಸಭಾ ಚುನಾವಣೆಯಲ್ಲಿ…
ಉಡುಪಿ: ಕಾಮಗಾರಿ ಹಿನ್ನೆಲೆ ಸಂಚಾರಕ್ಕೆ ಬದಲಿ ಮಾರ್ಗ ಉಡುಪಿ: ಉಡುಪಿ ನಗರಸಭಾ ವ್ಯಾಪ್ತಿಯ ತೆಂಕಪೇಟೆ ವಾರ್ಡಿನ ಬಡಗುಪೇಟೆ ರಸ್ತೆಯಲ್ಲಿ ಒಳಚರಂಡಿ…