Featured

ಭೂಮಿಯಲ್ಲಿದ್ದುಕೊಂಡೇ ಅಂತರಿಕ್ಷದಲ್ಲಿ ಸೆಲ್ಫಿ ತೆಗೆಯಿರಿ!

ವಾಷಿಂಗ್ಟನ್,: ವರ್ಚುವಲ್ ಸ್ಪೇಸ್‍ಸೂಟ್‍ನಲ್ಲಿ ಅದ್ಭುತ ನಕ್ಷತ್ರಪುಂಜಗಳ ನಡುವೆ ನಿಂತು ಸೆಲ್ಫಿ ಕ್ಲಿಕ್ಕಿಸಿಕೊಳ್ಳಲು ಅವಕಾಶ ಮಾಡಿಕೊಡುವ ವಿನೂತನ ಆಯಪ್ ಇದೀಗ ಲಭ್ಯವಿದೆ. ವಿಶ್ವದ ಅಗ್ರಗಣ್ಯ ಬಾಹ್ಯಾಕಾಶ ಸಂಸ್ಥೆಗಳಲ್ಲೊಂದಾದ ‘ನಾಸಾ’ ಇದನ್ನು ಬಿಡುಗಡೆ ಮಾಡಿದೆ. ಸೌರಮಂಡಲದ ವಿವಿಧ ಸ್ಥಳಗಳಲ್ಲಿ ಅಂದರೆ ‘ಒರಿಯನ್ ನೆಬುಲಾ’ ಅಥವಾ ಸೌರಮಂಡಲದ ಮಧ್ಯಭಾಗದಲ್ಲಿ ನಿಂತು ಸೆಲ್ಫಿ ತೆಗೆಸಿಕೊಂಡ ಅನುಭವವನ್ನು ಇದು ನೀಡುತ್ತದೆ.

NASA Selfies ಹೆಸರಿನ ಈ ಆಯಪ್ ಜತೆಗೆ, ಅಮೆರಿಕದ ಈ ಬಾಹ್ಯಾಕಾಶ ಸಂಸ್ಥೆ ಎಕ್ಸೋಪ್ಲಾನೆಟ್ ಎಕ್ಸ್‍ಕರ್‍ಷನ್ಸ್ ವರ್ಚುವಲ್ ರಿಯಾಲಿಟಿ (ವಿಆರ್) ಎಂಬ ಆಯಪ್ ಕೂಡಾ ಬಿಡುಗಡೆ ಮಾಡಿದೆ. ಇದು ವಿಆರ್ ಬಳಕೆದಾರರನ್ನು ಟ್ರಾಪಿಸ್ಟ್-1 ಗ್ರಹಮಂಡಲದಲ್ಲಿ ಮಾರ್ಗದರ್ಶನ ಸಹಿತ ಯಾನ ಕೈಗೊಳ್ಳಲು ಅವಕಾಶ ಮಾಡಿಕೊಡುತ್ತದೆ.

ಸ್ಪಿಟ್ಸರ್ ಬಾಹ್ಯಾಕಾಶ ಟೆಲೆಸ್ಕೋಪ್‍ಗೆ ಚಾಲನೆ ನೀಡಿದ 15ನೇ ವರ್ಷಾಚರಣೆಗಾಗಿ ಈ ಡಿಜಿಟಲ್ ಉತ್ಪನ್ನಗಳನ್ನು ಸೃಷ್ಟಿಸಲಾಗಿದೆ ಎಂದು ನಾಸಾ ಹೇಳಿದೆ.

ಸೆಲ್ಫಿ ಆಯಪ್‍ನ ಸರಳ ಇಂಟರ್‍ಫೇಸ್, ನೀವು ಫೋಟೊ ಕ್ಲಿಕ್ಕಿಸಿಕೊಂಡು, ನಿಮ್ಮ ಆಯ್ಕೆಯ ಹಿನ್ನೆಲೆಯನ್ನು ಸೃಷ್ಟಿಸಲು ಮತ್ತು ಸಾಮಾಜಿಕ ಜಾಲತಾಣಗಳಲ್ಲಿ ಅದನ್ನು ಶೇರ್ ಮಾಡಲು ಅವಕಾಶ ಮಾಡಿಕೊಡುತ್ತದೆ. ಐಒಎಸ್ ಮತ್ತು ಆಯಂಡ್ರಾಯ್ಡ್ ಡಿವೈಸ್ ಗಳಿಗೆ ಈ ಆಯಪ್ ಲಭ್ಯವಿದೆ.

Vishwa News 24

Recent Posts

ಕುಂದಾಪುರ: ನಿಂತ ಲಾರಿಗಳಿಗೆ ಬಸ್ ಢಿಕ್ಕಿ: ಎರಡು ಸಾವು, ಹಲವರಿಗೆ ಗಾಯ – vishwanews24

ಕುಂದಾಪುರ: ನಿಂತ ಲಾರಿಗಳಿಗೆ ಬಸ್ ಢಿಕ್ಕಿ: ಎರಡು ಸಾವು, ಹಲವರಿಗೆ ಗಾಯ ಕುಂದಾಪುರ: ಮರವಂತೆ ಸಮುದ್ರ ಕಿನಾರೆಯ ಎದುರಿನ‌ ರಾಷ್ಟ್ರೀಯ…

20 hours ago

ರೇಣುಕಾಸ್ವಾಮಿ ಹತ್ಯೆ ಪ್ರಕರಣ : ಜಾಮೀನಿಗಾಗಿ ಸುಪ್ರೀಂ ಕೋರ್ಟ್‌ ಮೊರೆ ಹೋದ ದರ್ಶನ್‌ – vishwanews24

ರೇಣುಕಾಸ್ವಾಮಿ ಹತ್ಯೆ ಪ್ರಕರಣ : ಜಾಮೀನಿಗಾಗಿ ಸುಪ್ರೀಂ ಕೋರ್ಟ್‌ ಮೊರೆ ಹೋದ ದರ್ಶನ್‌ ನವದೆಹಲಿ : ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಜೈಲು…

20 hours ago

ದ. ಕ, ಉಡುಪಿ ಸೇರಿದಂತೆ  5 ದಿನಗಳ ಕಾಲ ಭಾರೀ ಮಳೆಯ ಮುನ್ಸೂಚನೆ ; 25 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ – vishwanews24

ದ. ಕ, ಉಡುಪಿ ಸೇರಿದಂತೆ  5 ದಿನಗಳ ಕಾಲ ಭಾರೀ ಮಳೆಯ ಮುನ್ಸೂಚನೆ ; 25 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ …

20 hours ago

ಉಡುಪಿ ಶ್ರೀಕೃಷ್ಣ ದರ್ಶನಕ್ಕೆ ನೂತನ ಸರತಿ ಸಾಲು ಹಾಗೂ ಐಡಿ ಆಧಾರಿತ ಪ್ರವೇಶ ವ್ಯವಸ್ಥೆ ಉದ್ಘಾಟನೆ – vishwanews24

ಉಡುಪಿ ಶ್ರೀಕೃಷ್ಣ ದರ್ಶನಕ್ಕೆ ನೂತನ ಸರತಿ ಸಾಲು ಹಾಗೂ ಐಡಿ ಆಧಾರಿತ ಪ್ರವೇಶ ವ್ಯವಸ್ಥೆ ಉದ್ಘಾಟನೆ ಉಡುಪಿ : ಶ್ರೀ…

23 hours ago

ಮಂಗಳೂರು: ಸ್ಕೂಟರ್‌ ಸವಾರನಿಗೆ ಖಾರದ ಪುಡಿ ಎರಚಿ ದರೋಡೆ; ಪ್ರಕರಣ ದಾಖಲು – vishwanews24

ಮಂಗಳೂರು: ಸ್ಕೂಟರ್‌ ಸವಾರನಿಗೆ ಖಾರದ ಪುಡಿ ಎರಚಿ ದರೋಡೆ; ಪ್ರಕರಣ ದಾಖಲು ಮಂಗಳೂರು: ಗುರುಪುರ ಬಂಗ್ಲಗುಡ್ಡೆ ಬಳಿ ಸ್ಕೂಟರ್ ಸವಾರರೊಬ್ಬರಿಗೆ…

23 hours ago

ಪಿಯು ವಿದ್ಯಾರ್ಥಿನಿಯರ ನಾಪತ್ತೆ ಪ್ರಕರಣ: ಸಿಐಡಿ ತನಿಖೆಗೆ ಆದೇಶ – vishwanews24

ಪಿಯು ವಿದ್ಯಾರ್ಥಿನಿಯರ ನಾಪತ್ತೆ ಪ್ರಕರಣ: ಸಿಐಡಿ ತನಿಖೆಗೆ ಆದೇಶ 8 ತಿಂಗಳ ಹಿಂದೆ ನಾಪತ್ತೆಯಾಗಿದ್ದ ವಿದ್ಯಾರ್ಥಿಗಳು ಬೆಂಗಳೂರು: ನಗರದ ವಿದ್ಯಾರಣ್ಯಪುರ…

23 hours ago