Featured

ಭೂ ಮಸೂದೆ ಸುವರ್ಣ ವರ್ಷಾಚರಣೆ ಕಾರ್ಯಕ್ರಮ ಯಶಸ್ವಿಗೊಳಿಸಲು ಜಿಲ್ಲಾ ಕಾಂಗ್ರೆಸ್ ಕರೆ  – Vishwanews24

ಭೂ ಮಸೂದೆ ಸುವರ್ಣ ವರ್ಷಾಚರಣೆ ಕಾರ್ಯಕ್ರಮ ಯಶಸ್ವಿಗೊಳಿಸಲು ಜಿಲ್ಲಾ ಕಾಂಗ್ರೆಸ್ ಕರೆ  – Vishwanews24

ಭೂ ಸುಧಾರಣಾ ಕಾನೂನು ಜಾರಿಯಾಗಿ ಪ್ರಸ್ತುತ ೫೦ ವರ್ಷಗಳಾದ ಪ್ರಯುಕ್ತ ಉಡುಪಿ ಜಿಲ್ಲಾ ಕಾಂಗ್ರೆಸ್ ತಾ. ೧೯.೦೩.೨೦೨೨ರಂದು ಹಿರಿಯಡ್ಕ ಗಾಂಧಿ ಮೈದಾನದಲ್ಲಿ ಹಮ್ಮಿಕೊಂಡ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕೆಂದು ಜಿಲ್ಲಾ ಕಾಂಗ್ರೆಸ್ ಕಾರ್ಯಕಾರಿ ಸಮಿತಿ ತುರ್ತು ಸಭೆಯಲ್ಲಿ ಅಧ್ಯಕ್ಷರಾದ ಅಶೋಕ್ ಕುಮಾರ್ ಕೊಡವೂರು ಕರೆ ನೀಡಿದರು.

ಮಾಜಿ ಸಚಿವರಾದ ಶ್ರೀ ವಿನಯ ಕುಮಾರ್ ಸೊರಕೆಯವರು ಮಾತನಾಡಿ ಉಳುವವನೇ ಹೊಲದೊಡೆಯನಾಗಬೇಕೆಂಬ ಉದ್ದೇಶದಿಂದ ೫೦ ವರ್ಷಗಳ ಹಿಂದೆ ತಂದ ಭೂ ಮಸೂದೆ ಕಾಯ್ದೆ ರಾಜ್ಯದಲ್ಲಿ ಕ್ರಾಂತಿಗೆ ಕಾರಣವಾಯ್ತು. ಈ ಮಸೂದೆಯಿಂದ ಹಲವಾರು ಕುಟುಂಬಗಳ ಆರ್ಥಿಕ ಸ್ಥಿತಿ ಸುಧಾರಣೆಗೊಂಡಿರುವುದನ್ನು ಮರೆಯಲಾಗದು. ಈ ಹಿನ್ನಲೆಯಲ್ಲಿ ಮಸೂದೆಯ ಫಲಾನುಭವಿಗಳು ಇಂದಿಗೂ ಕೃಷಿಯನ್ನು ನೆಚ್ಚಿಕೊಂಡು ಘೋಷಣೆಯನ್ನು ಸಾಕಾರಗೊಳಿಸಿದ ಕುಟುಂಬವನ್ನು ಗುರುತಿಸುವ ಕಾರ್ಯಕ್ರಮ ಇದೆ ಎಂದರು.

ಸಭೆಯಲ್ಲಿ ಮುಖಂಡರಾದ ದಿನೇಶ್ ಪುತ್ರನ್, ಪ್ರಖ್ಯಾತ್ ಶೆಟ್ಟಿ, ನೀರೆ ಕೃಷ್ಣ ಶೆಟ್ಟಿ, ಶಶಿಧರ ಶೆಟ್ಟಿ ಎಲ್ಲೂರು, ಕೃಷ್ಣಮೂರ್ತಿ ಕಾರ್ಕಳ, ಕಿಶನ್ ಹೆಗ್ಡೆ ಕೊಳ್ಕೆಬೈಲ್, ಅಲೆವೂರು ಹರೀಶ್ ಕಿಣಿ, ಜ್ಯೋತಿ ಹೆಬ್ಬಾರ್, ಯತೀಶ್ ಕರ್ಕೇರಾ, ಕೀರ್ತಿ ಶೆಟ್ಟಿ, ಪ್ರಶಾಂತ್ ಜತ್ತನ್ನ, ಬಾಲಕೃಷ್ಣ ಪೂಜಾರಿ, ಕಿಶೋರ್ ಎರ್ಮಾಳ್, ಸೌರಭ್ ಬಲ್ಲಾಲ್, ರಮೇಶ್ ಕಾಂಚನ್, ದಿನಕರ್ ಹೇರೂರು, ದೀಪಕ್ ಕೋಟ್ಯಾನ್, ಉದ್ಯಾವರ ನಾಗೇಶ್ ಕುಮಾರ್, ಉಪೇಂದ್ರ ಮೆಂಡನ್, ದೀವಾ ನಂಬಿಯಾರ್, ಸತೀಶ್ ಕುಮಾರ್ ಮಂಚಿ, ಸಂಜಯ್ ಆಚಾರ್ಯ ಉಪಸ್ಥಿತರಿದ್ದರು.

ವಕ್ತಾರ ಭಾಸ್ಕರ್ ರಾವ್ ಕಿದಿಯೂರು ಅವರು ಸ್ವಾಗತಿಸಿ, ಪ್ರಧಾನ ಕಾರ್ಯದರ್ಶಿ ಕೆ. ಅಣ್ಣಯ್ಯ ಸೇರಿಗಾರ್ ಕಾರ್ಯಕ್ರಮ ನಿರ್ವಹಿಸಿದರು.

Vishwa News 24

Recent Posts

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು: ಯು.ಟಿ.ಖಾದರ್ – vishwanews24

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು ,  ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…

4 days ago

ಉಚ್ಚಿಲ : ಮೊಗವೀರ ಕುಲಗುರು ಕೀರ್ತಿಶೇಷ ಶ್ರೀ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ – vishwanews24

ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…

4 days ago

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ : ಅ. 18-19ರಂದು ವಿಜಯ ದಶಮಿ ಕರೆಯಲ್ಲಿ ಜೋಡುಕರೆ ಕಂಬಳ – vishwanews24

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…

4 days ago

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ – vishwanews24

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…

4 days ago

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ – vishwanews24

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…

4 days ago

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ – vishwanews24

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…

4 days ago