ಬಿಹಾರ್ : ಬಿಹಾರದ ಭಾಗಲ್‌ಪುರದಲ್ಲಿರುವ ತಮ್ಮ ಅಪಾರ್ಟ್‌ಮೆಂಟ್‌ನಲ್ಲಿ ಭೋಜ್‌ಪುರಿ ನಟಿ ಅಮೃತಾ ಪಾಂಡೆ ಶವವಾಗಿ ಪತ್ತೆಯಾಗಿದ್ದಾರೆ. ಅಮೃತಾ ತನ್ನ ಸೀರೆಯಿಂದ ತಮ್ಮ ನಿವಾಸದ ಸೀಲಿಂಗ್ ಫ್ಯಾನ್‌ಗೆ ನೇಣು ಹಾಕಿಕೊಂಡು ಜೀವಾಂತ್ಯ ಮಾಡಿಕೊಂಡಿದ್ದಾರೆ.
ಅಮೃತಾ ಪಾಂಡೆ ಅವರು ತನ್ನ ಪತಿಯೊಂದಿಗೆ ನೆಲೆಸಿದ್ದರು. ಕೆಲ ದಿನಗಳ ಹಿಂದೆ ಸಂಬಂಧಿಕರ ಮದುವೆಯ ಹಿನ್ನೆಲೆಯಲ್ಲಿ ಬಿಹಾರದ ಭಾಗಲ್‌ಪುರಕ್ಕೆ ಭೇಟಿ ನೀಡಿದ್ದರು. ಆದರೆ ಭಾಗಲ್‌ಪುರದಲ್ಲಿರುವ ಅಪಾರ್ಟ್‌ಮೆಂಟ್‌ನಲ್ಲಿ ಅಮೃತಾ ಪಾಂಡೆ ನೇಣಿಗೆ ಶರಣಾಗಿದ್ದಾರೆ.
ಅಮೃತಾ ಪಾಂಡೆ ಅವರು ಅಪಾರ್ಟ್‌ಮೆಂಟ್‌ನಲ್ಲಿ ಸಾವನ್ನಪ್ಪಿದ್ದು ಹಲವು ಅನುಮಾನಗಳಿಗೆ ಎಡೆಮಾಡಿಕೊಟ್ಟಿತ್ತು. ಆದರೆ, ಆತ್ಮಹತ್ಯೆ ಮಾಡಿಕೊಳ್ಳುವುದಕ್ಕಿಂತ ಕೆಲವೇ ಗಂಟೆ ಮುಂಚೆ ಅಮೃತಾ ಪಾಂಡೆ ವಾಟ್ಸ್‌ಆ್ಯಪ್‌ನಲ್ಲಿ ಸ್ಟೇಟಸ್ ಹಾಕಿದ್ದು, ಹೊಸ ಟ್ವಿಸ್ಟ್ ಕೊಟ್ಟಿದ್ದಾರೆ. ವಾಟ್ಸ್‌ಆ್ಯಪ್‌ನಲ್ಲಿ ಸ್ಟೇಟಸ್ ಹಾಕಿದ ಮೇಲೆ ತನ್ನ ರೂಮಿಗೆ ಹೋಗಿ ನೇಣಿಗೆ ಶರಣಾಗಿದ್ದಾರೆ.
ಆಕೆಯ ಅಪಾರ್ಟ್‌ಮೆಂಟ್‌ನಿಂದ ಯಾವುದೇ ಸೂಸೈಡ್ ನೋಟ್ ಪತ್ತೆಯಾಗಿಲ್ಲವಾದರೂ, ಅಮೃತ ಪಾಂಡೆ ಅವರು ವಾಟ್ಸ್‌ಆ್ಯಪ್ ಸ್ಟೇಟಸ್‌ನಲ್ಲಿ “ಎರಡು ದೋಣಿಗಳಲ್ಲಿ ಜೀವನ ಸಾಗುತ್ತಿತ್ತು, ನಾವು ದೋಣಿಯನ್ನು ಮುಳುಗಿಸಿ ಪ್ರಯಾಣವನ್ನು ಸುಲಭಗೊಳಿಸಿದೆವು” ಎನ್ನುವ ಹಿಂದಿ ಸಾಲುಗಳನ್ನು ಹಾಕಿದ್ದರು ಎಂದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ.
ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…