Featured

ಭ್ರಷ್ಟಚಾರದ ವಿರುದ್ಧ ಹೋರಾಡಲು ನಾನು ಶಾಸಕನಾಗಬೇಕಿದೆ , ನನ್ನನ್ನು ಈ ಚುನಾವಣೆಯಲ್ಲಿ ಗೆಲ್ಲಿಸಿ : ವಾಟಾಳ್​​ ನಾಗರಾಜ್​​ -Vishwanews24

ಬೆಂಗಳೂರು:”ಕಾಂಗ್ರೆಸ್​​-ಜೆಡಿಎಸ್​​ನಿಂದ ಬಿಜೆಪಿಗೆ ಸೇರಿದ ಪಕ್ಷಾಂತರಿಗಳನ್ನು ಸೋಲಿಸಬೇಕೆಂದು ಕನ್ನಡಪರ ಹೋರಾಟಗಾರ ವಾಟಾಳ್​​ ನಾಗರಾಜ್​​ ಆಗ್ರಹಿಸಿದ್ದಾರೆ.

ಕರ್ನಾಟಕದ ಉಪಚುನಾವಣೆಯಲ್ಲಿ ಯಾವುದೇ ಕಾರಣಕ್ಕೂ ಪಕ್ಷಾಂತರಿಗಳಿಗೆ ಮತ ಹಾಕಬಾರದು. ಈ ಬಾರಿ ಉಪಚುನಾವಣೆಯಲ್ಲಿ ಸೋಲಿಸಿ ಬುದ್ದಿ ಕಲಿಸಬೇಕೆಂದು” ಜನತೆಗೆ ಮನವಿ ಮಾಡಿದರು.

ಭಾನುವಾರ  ಮೈಸೂರಿನಲ್ಲಿ ವಾಟಾಳ್​​ ನಾಗರಾಜ್​​ ನೇತೃತ್ವದಲ್ಲಿ ಕಾಂಗ್ರೆಸ್​​ ಮತ್ತು ಜೆಡಿಎಸ್​​​​ ಅನರ್ಹ ಶಾಸಕರ ವಿರುದ್ಧ ವಿನೂತನ ಪ್ರತಿಭಟನೆ ಹಮ್ಮಿಕೊಂಡಿದ್ದರು. ಇಲ್ಲಿನ ರೈಲು ನಿಲ್ದಾಣದ ಮುಂಭಾಗ ಹಮ್ಮಿಕೊಂಡಿದ್ದ ವಿನೂತನ ಪ್ರತಿಭಟನೆಯಲ್ಲಿ ಕನ್ನಡಪರ ಹೋರಾಟಗಾರ ವಾಟಾಳ್​​ ನಾಗರಾಜ್​​​ ಪಕ್ಷಾಂತರಿಗಳನ್ನು ಸೋಲಿಸುವಂತೆ ಕರೆ ನೀಡಿದರು. ಒಂದು ಪಕ್ಷದಿಂದ ಮತ್ತೊಂದು ಪಕ್ಷಕ್ಕೆ ಹೋಗುವ ಪಕ್ಷಾಂತರಿಗಳಿಂದ ಪ್ರಜಾಪ್ರಭುತ್ವ ಹಾಳಾಗಿದೆ. ತಮ್ಮ ಸ್ವಹಿತಾಸಕ್ತಿಗಾಗಿ ಹೀಗೆ ಪಕ್ಷಾಂತರ ಮಾಡುತ್ತಿದ್ದಾರೆ. ಇದೊಂದು ರೀತಿ ಥೇಟ್​​ ದರೋಡೆ ಮಾಡಿದಾಗೇ. ಸುಪ್ರೀಂಕೋರ್ಟ್​​ ಅನರ್ಹ ಶಾಸಕರು ಚುನಾವಣೆಗೆ ನಿಲ್ಲಬಹುದು ಎಂದು ತೀರ್ಪು ನೀಡಿದೆ. ಮತ್ತೊಮ್ಮೆ ತನ್ನ ತೀರ್ಪು ಮರು ಪರಿಶೀಲಿಸುವಂತೆ ಸುಪ್ರೀಂಕೋರ್ಟ್​​ನಲ್ಲಿ ಅರ್ಜಿ ಸಲ್ಲಿಸಬೇಕೆಂದು ಎಂದರು.

ಅನರ್ಹ ಶಾಸಕರನ್ನು ಜನ ತಿರಸ್ಕರಿಸಬೇಕು. ಇಂತಹ ರಾಜಕಾರಣಿಗಳು ಸಂಸದೀಯ ವ್ಯವಸ್ಥೆಗೆ ಕಪ್ಪುಚುಕ್ಕೆ ತರುತ್ತಿದ್ದಾರೆ. ಹಾಗಾಗಿ ಈ ಚುನಾವಣೆಯಲ್ಲಿ ಪಕ್ಷಾಂತರಿಗಳನ್ನು ಸೋಲಿಸುವ ಮುಖೇನ ಬುದ್ದಿ ಕಲಿಸಬೇಕೆಂದು ಒತ್ತಾಯಿಸಿದರು. ಇಂತಹ ಅಪ್ರಾಮಾಣಿಕ ರಾಜಕಾರಣಿಗಳ ವಿರುದ್ಧ ಹೋರಾಟಕ್ಕೆ ನಾನು ಸದಾ ಸಿದ್ದ ಎಂದು ಹೇಳಿದರು. ಭ್ರಷ್ಟಚಾರದ ವಿರುದ್ಧ ಹೋರಾಡಲು ನಾನು ಶಾಸಕನಾಗಬೇಕಿದೆ. ಹಾಗಾಗಿ ಶಿವಾಜಿನಗರ ಮತ್ತು ಮಹಾಲಕ್ಷ್ಮೀ ಲೇಔಟ್​​ನಿಂದ ಸ್ಪರ್ಧೆ ಮಾಡುತ್ತಿದ್ದೇನೆ. ಮುಖ್ಯಮಂತ್ರಿ ಬಿ.ಎಸ್​​ ಯಡಿಯೂರಪ್ಪ ಎಂದರೆ ಯಡವಟ್ಟು ಎಂಬ ಸ್ಥಿತಿ ನಿರ್ಮಾಣವಾಗಿದೆ. ಆದ್ದರಿಂದ ನನ್ನನ್ನು ಈ ಚುನಾವಣೆಯಲ್ಲಿ ಗೆಲ್ಲಿಸಿ ಎಂದು ವಿನಂತಿಸಿದರು.

Vishwa News 24

Recent Posts

ಮೈಸೂರು: ಕಾಲೇಜು ಕ್ಯಾಂಪಸ್‌ನಲ್ಲೇ ಹೃದಯಾಘಾತ ; ಕುಸಿದುಬಿದ್ದು ವಿದ್ಯಾರ್ಥಿ ಸಾವು – vishwanews24

ಮೈಸೂರು: ಕಾಲೇಜು ಕ್ಯಾಂಪಸ್‌ನಲ್ಲೇ ಹೃದಯಾಘಾತ ; ಕುಸಿದುಬಿದ್ದು ವಿದ್ಯಾರ್ಥಿ ಸಾವು ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನ ಖ್ಯಾತ ಮರಿಮಲ್ಲಪ್ಪ ಕಾಲೇಜು…

2 days ago

ಅಡ್ಡ ಮತದಾನ ಮೂಲಕ ಪಕ್ಷಕ್ಕೆ ಹಾಗೂ ಮೈತ್ರಿಗೆ ದ್ರೋಹ ಬಗೆದವರನ್ನು ಯಾವುದೇ ಕಾರಣಕ್ಕೂ ಕ್ಷಮಿಸುವುದಿಲ್ಲ : ವಿಜಯೇಂದ್ರ ಆಕ್ರೋಶ – vishwanews24

ಅಡ್ಡ ಮತದಾನ ಮೂಲಕ ಪಕ್ಷಕ್ಕೆ ಹಾಗೂ ಮೈತ್ರಿಗೆ ದ್ರೋಹ ಬಗೆದವರನ್ನು ಯಾವುದೇ ಕಾರಣಕ್ಕೂ ಕ್ಷಮಿಸುವುದಿಲ್ಲ : ವಿಜಯೇಂದ್ರ ಆಕ್ರೋಶ ಬೆಂಗಳೂರು:…

2 days ago

ಭಟ್ಕಳ ಲವ್ ಜಿಹಾದ್ ಆರೋಪ : ಯುವಕ ಅರೆಸ್ಟ್‌ – vishwanews24

ಭಟ್ಕಳ ಲವ್ ಜಿಹಾದ್ ಆರೋಪ : ಯುವಕ ಅರೆಸ್ಟ್‌ ಕಾರವಾರ: ಉತ್ತರ ಕನ್ನಡ  ಜಿಲ್ಲೆಯ ಭಟ್ಕಳದಲ್ಲಿ ಕಿಚ್ಚು ಹಚ್ಚಿದ ಹಿಂದೂ,…

2 days ago

ಪರಿಷತ್ ಚುನಾವಣೆಯಲ್ಲಿ ನಮಗೆ ಮತ ನೀಡಿದ ಬೇರೆ ಪಕ್ಷದ ವಿಶ್ವಾಸವನ್ನುನಾವು ಉಳಿಸಿಕೊಳ್ಳುತ್ತೇವೆ: ಡಿ.ಕೆ.ಶಿವಕುಮಾರ್‌ – vishwanews24

ಪರಿಷತ್ ಚುನಾವಣೆಯಲ್ಲಿ ನಮಗೆ ಮತ ನೀಡಿದ ಬೇರೆ ಪಕ್ಷದ ವಿಶ್ವಾಸವನ್ನುನಾವು ಉಳಿಸಿಕೊಳ್ಳುತ್ತೇವೆ: ಡಿ.ಕೆ.ಶಿವಕುಮಾರ್‌ ಬೆಂಗಳೂರು: ವಿಧಾನ ಪರಿಷತ್‌ ಚುನಾವಣೆಯಲ್ಲಿ ನಮ್ಮ…

2 days ago

ವಚನಾನಂದ ಸ್ವಾಮೀಜಿ ವಿರುದ್ಧ ಪೋಕ್ಸೋ ಪ್ರಕರಣ: ಜೂ. 30ಕ್ಕೆ ಮುಂದೂಡಿಕೆ – vishwanews24

ವಚನಾನಂದ ಸ್ವಾಮೀಜಿ ವಿರುದ್ಧ ಪೋಕ್ಸೋ ಪ್ರಕರಣ: ಜೂ. 30ಕ್ಕೆ ಮುಂದೂಡಿಕೆ ದಾವಣಗೆರೆ: ಹರಿಹರದ  ವಚನಾನಂದ ಸ್ವಾಮೀಜಿ ಪೋಕ್ಸೋ ಪ್ರಕರಣ ಆದೇಶವನ್ನು…

3 days ago

ವಿಟ್ಲ : ಲಾರಿಯಲ್ಲಿ ತಾಂತ್ರಿಕ ವೈಫಲ್ಯ – ಸರಿಪಡಿಸುವ ವೇಳೆ ಚಕ್ರಗಳ ಅಡಿಗೆ ಸಿಲುಕಿ ಚಾಲಕ ಸ್ಥಳದಲ್ಲೇ ಮೃತ್ಯು – vishwanews24

ವಿಟ್ಲ : ಲಾರಿಯಲ್ಲಿ ತಾಂತ್ರಿಕ ವೈಫಲ್ಯ - ಸರಿಪಡಿಸುವ ವೇಳೆ ಚಕ್ರಗಳ ಅಡಿಗೆ ಸಿಲುಕಿ ಚಾಲಕ ಸ್ಥಳದಲ್ಲೇ ಮೃತ್ಯು ವಿಟ್ಲ:…

3 days ago