ಹೊಸದಿಲ್ಲಿ,: ಪ್ರಧಾನಿಗಳ ವಿರುದ್ಧ ಒಂದಲ್ಲ ಒಂದು ಆರೋಪಗಳನ್ನು ಮಾಡುತ್ತಿದ್ದ ರಾಹುಲ್ ಗಾಂಧಿ ಇದೀಗ ಹೊಸ ಆರೋಪವೊಂದನ್ನು ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಮಾಡಿದ್ದಾರೆ. ಪ್ರಧಾನಿ ಮೋದಿ ಅವರು ತಮ್ಮ ಭ್ರಷ್ಟ ಶ್ರೀಮಂತ ಗೆಳೆಯರಿಗೆ ಸಹಾಯ ಮಾಡಲೆಂದು ನೋಟು ಅಮಾನ್ಯೀಕರಣ ಮಾಡಿದ್ದರು ಎಂದು ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಆರೋಪಿಸಿದ್ದಾರೆ.
ನವದೆಹಲಿಯ ಕಾಂಗ್ರೆಸ್ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಕಪ್ಪುಹಣದ ವಿರುದ್ಧ ಹೋರಾಡಲು ನೋಟು ರದ್ಧತಿ ಮಾಡುತ್ತಿರುವುದಾಗಿ ಹೇಳಿದ್ದರು. ಆದರೆ ಆರ್‌ಬಿಐ ಪ್ರಕಾರ ಬಹುತೇಕ ಎಲ್ಲಾ ನೋಟುಗಳು ಆರ್‌ಬಿಐಗೆ ವಾಪಸ್ ಬಂದಿವೆ. ಹಾಗಿದ್ದರೆ ಕಪ್ಪುಹಣ ಎಲ್ಲಿ ಹೋಯಿತು ಎಂದು ಅವರು ಪ್ರಶ್ನಿಸಿದ್ದಾರೆ. ಆರ್‌ಬಿಐ ಇತ್ತೀಚೆಗಷ್ಟೆ ಬಿಡುಗಡೆ ಮಾಡಿದ ವರದಿಯಲ್ಲಿ 99.60% ನೋಟುಗಳು ವಾಪಸ್ ಬಂದಿದ್ದಾಗಿ ವರದಿ ನೀಡಿದೆ. ಅಮಿತ್ ಶಾ ಬ್ಯಾಂಕಿನಲ್ಲಿ 700 ಕೋಟಿ ಬದಲು ನೋಟು ರದ್ಧತಿ ಭಾರತದ ಅತಿದೊಡ್ಡ ಹಗರಣ ಎಂದ ರಾಹುಲ್, ಮೋದಿ ಅವರ ಕೆಲವು ಶ್ರೀಮಂತ ಸ್ನೇಹಿತರ ಕಪ್ಪು ಹಣವನ್ನು ಬಿಳಿ ಮಾಡಲು ನೋಟು ರದ್ಧತಿ ಮಾಡಲಾಗಿತ್ತು. ನೋಟು ಅಮಾನ್ಯೀಕರಣ ದೇಶದ ಅತಿ ದೊಡ್ಡ ಹಗರಣ ಎಂದರು.
ಉಡುಪಿ ಜಿಲ್ಲೆಯ ನಿರ್ಲಕ್ಷ್ಯ : ಮೇ 16ರಂದು ಜಿಲ್ಲಾ ಉಸ್ತುವಾರಿ ಸಚಿವರಿಗೆ ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ : ಪೃಥ್ವಿರಾಜ್…
ಸಾಂಪ್ರದಾಯಿಕ ಧಾರ್ಮಿಕ ಸಂಕೇತಗಳನ್ನು ಧರಿಸಬಹುದು, ಹೊಸದಾಗಿ ಮಾಡುವಂತಿಲ್ಲ : ಸಿಎಂ ಸ್ಪಷ್ಟನೆ ಮೈಸೂರು : "ಪ್ರಾಥಮಿಕ ತರಗತಿಯಿಂದ 12ನೇ ತರಗತಿಯವರೆಗೆ…
ಮದ್ಯ ಖರೀದಿ, ಮಾರಾಟ ಮಾಡಲು 21 ವರ್ಷ ಕಡ್ಡಾಯ : ಸಿಎಂ ವಿಜಯ್ ಸರ್ಕಾರ ಆದೇಶ ಚೆನ್ನೈ: ಇನ್ನು ಮುಂದೆ…
ಇಂದಿರಾ ಗಾಂಧಿ ನಂತರ ಯಾರಾದ್ರೂ ಮಾಸ್ ಲೀಡರ್ ಇದ್ರೆ, ಅದು ಮೋದಿ ಮಾತ್ರ: ಕೆ.ಎನ್ ರಾಜಣ್ಣ ನಾನು ಮೋದಿಯವರನ್ನು ಹೊಗಳುತ್ತಿಲ್ಲ.…
ಸಕ್ಕರೆ ರಫ್ತಿಗೆ ಸೆ.30 ರವರೆಗೆ ಸಂಪೂರ್ಣ ನಿಷೇಧ ಹೇರಿದ ಸರ್ಕಾರ ನವದೆಹಲಿ: ದೇಶೀಯ ಮಾರುಕಟ್ಟೆಯಲ್ಲಿ ಸಕ್ಕರೆ ಬೆಲೆಯನ್ನು ನಿಯಂತ್ರಿಸಲು ಮತ್ತು…
ಹಿಜಬ್ ಬಗ್ಗೆ ಮಾತಾಡುವ ಬಿಜೆಪಿಯವರು ನೀಟ್ ಬಗ್ಗೆ ಮಾತಾಡಲಿ : ಮಧು ಬಂಗಾರಪ್ಪ ಆಕ್ರೋಶ ಬೆಂಗಳೂರು: ಹಿಜಬ್ ಬಗ್ಗೆ ಮಾತಾಡುವ…