ಭ್ರಷ್ಟಾಚಾರ ಆರೋಪ ಹೊಂದಿದ್ದ 22 ತೆರಿಗೆ ಅಧಿಕಾರಿಗಳನ್ನು ವಜಾ ಮಾಡಿದ ಕೇಂದ್ರ ಸರ್ಕಾರ -Vishwanews24

Featured, ರಾಷ್ಟ್ರ ನ್ಯೂಸ್

ನವದೆಹಲಿ : ಭ್ರಷ್ಟಾಚಾರ ಆರೋಪದ ಹಿನ್ನೆಲೆಯಲ್ಲಿ 22 ತೆರಿಗೆ ಅಧಿಕಾರಿಗಳಿಗೆ ಕೇಂದ್ರ ಸರ್ಕಾರವು ಬಿಗ್ ಶಾಕ್ ನೀಡಿದ್ದು, 22 ಹಿರಿಯ ಅಧಿಕಾರಿಗಳಿಗೆ ಕಡ್ಡಾಯ ನಿವೃತ್ತಿ ನೀಡಲಾಗಿದೆ.

ಭ್ರಷ್ಟಾಚಾರ, ಇತರೆ ಗಂಭೀರ ಅರೋಪಗಳು ಹಾಗೂ ಸಿಬಿಐ ತನಿಖೆ ಎದುರಿಸುತ್ತಿರುವ ಸೂಪರಿಟೆಂಡೆಂಟ್ ದರ್ಜೆಯ 22 ಹಿರಿಯ ಅಧಿಕಾರಿಗಳಿಗೆ ಕೇಂದ್ರೀಯ ಪರೋಕ್ಷ ತೆರಿಗೆಗಳು ಮತ್ತು ಸೀಮಾ ಸುಂಕ ಮಂಡಳಿ ಕಡ್ಡಾಯ ನಿವೃತ್ತಿ ನೀಡಿದೆ. ಈ ಮೊದಲು ಹಣಕಾಸು ಸಚಿವಾಲಯ ಆದಾಯ ತೆರಿಗೆ ಇಲಾಖೆಯ 12 ಅಧಿಕಾರಿಗಳು ಸೇರಿದಂತೆ ಒಟ್ಟು 27 ಭಾರತೀಯ ಸೇವೆಯ ಅಧಿಕಾರಿಗಳಿಗೆ ಕಡ್ಡಾಯ ನೀಡಿತ್ತು.

ಭ್ರಷ್ಟಾಚಾರ ಆರೋಪ ಎದುರಿಸುತ್ತಿರುವ ಅಧಿಕಾರಿಗಳು ಉದ್ಯಮಿಗಳಿಗೆ ನೋಟಿಸ್ ಅಥವಾ ಸಮನ್ಸ್ ನೀಡಿ ಅವರಿಂದ ಹಣ ವಸೂಲಿ ಮಾಡುವುದನ್ನು ತಡೆಯಲು ಕೇಂದ್ರ ಸರ್ಕಾರ ಈ ಕ್ರಮ ತೆಗೆದುಕೊಂಡಿದೆ ಎನ್ನಲಾಗಿದೆ.

ಈ ಮೂಲಕ ಭ್ರಷ್ಟಾಚಾರ ಹಾಗೂ ಇತರ ಗಂಭೀರ ಆರೋಪಗಳನ್ನು ಮಾಡಿದ ಅಧಿಕಾರಿಗಳಿಗೆ ಕೇವಲ ನೋಟಿಸ್ ಹಾಗೂ ಸಮನ್ಸ್ ನೀಡುವ ಸಂಸ್ಕೃತಿಗೆ ಸರ್ಕಾರ ತಿಲಾಂಜಲಿ ಹಾಡಿದ್ದು, ಭ್ರಷ್ಟಾಚಾರದಲ್ಲಿ ತೊಡಗುವ ಅಧಿಕಾರಿಗಳ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲು ಮುಂದಾಗಿದೆ.