Featured

ಭ್ರಷ್ಟಾಚಾರ ಬಿಟ್ಟು ಕಾಂಗ್ರೆಸ್ ಇಲ್ಲ , ಕಾಂಗ್ರೆಸ್ ಬಿಟ್ಟು ಭ್ರಷ್ಟಾಚಾರ ಇಲ್ಲ : ಸಿ.ಟಿ. ರವಿ ಆರೋಪ – vishwanews24

ಕಾಂಗ್ರೆಸ್ ಮತ್ತು ಭ್ರಷ್ಟಾಚಾರ ಒಂದು ನಾಣ್ಯದ ಎರಡು ಮುಖಗಳು : ಸಿ.ಟಿ. ರವಿ ಆರೋಪ

ಬೆಂಗಳೂರು: ಭ್ರಷ್ಟಾಚಾರ ಬಿಟ್ಟು ಕಾಂಗ್ರೆಸ್ ಇಲ್ಲ; ಕಾಂಗ್ರೆಸ್ ಬಿಟ್ಟು ಭ್ರಷ್ಟಾಚಾರ ಇಲ್ಲ. ಕಾಂಗ್ರೆಸ್ ಮತ್ತು ಭ್ರಷ್ಟಾಚಾರ ಒಂದು ನಾಣ್ಯದ ಎರಡು ಮುಖಗಳು ಎಂದು ಬಿಜೆಪಿ ನಿಕಟಪೂರ್ವ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಮತ್ತು ವಿಧಾನಪರಿಷತ್ ಸದಸ್ಯ ಸಿ.ಟಿ. ರವಿ ಅವರು ಆರೋಪಿಸಿದ್ದಾರೆ.

ನಗರದಲ್ಲಿ ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಅಂಗೈ ಹುಣ್ಣಿಗೆ ಕನ್ನಡಿ ಹಿಡಿಯುವ ಅವಶ್ಯಕತೆ ಇಲ್ಲವೋ ಹಾಗೆ ಕಾಂಗ್ರೆಸ್ ಭ್ರಷ್ಟಾಚಾರ ನೋಡುವುದಕ್ಕೆ ನಾವು ಸ್ಕ್ಯಾನ್ ಮಾಡುವ ಅವಶ್ಯಕತೆ ಇಲ್ಲ; ಕಣ್ಣಿಗೆ ಕಾಣುತ್ತದೆ ಎಂದು ನುಡಿದರು.

ಕಾಂಗ್ರೆಸ್ ಶಾಸಕರಾದ ಬಿ.ಆರ್ ಪಾಟೀಲ್ ಅವರ ಹೇಳಿಕೆಯಲ್ಲದೆ ಎಲ್ಲ ವಿಷಯವು ಕಣ್ಣಿಗೆ ಕಾಣುತ್ತದೆ. ಮೋಹನ್ ದಾಸ್ ಪೈ ರವರು ಹೇಳಿಕೆ ನೀಡಿದ್ದಾರೆ. ಬೆಂಗಳೂರಿನಲ್ಲಿ ಬಿಲ್ಡರ್ಸ್‍ಗಳ ಕಷ್ಟ ಏನು ಎನ್ನುವುದನ್ನು ಅವರಿಗೆ ಆದ ಅನುಭವದ ಆಧಾರದಲ್ಲಿ ವ್ಯಕ್ತಪಡಿಸಿದರು. ಇವತ್ತು ಪ್ಲಾನ್ ಮಂಜೂರು ಮಾಡಬೇಕಾದರೆ ಒಂದು ಅಡಿಗೆ 100 ರೂ ಕೊಡಬೇಕು, ಭೂ ಬದಲಾವಣೆ ಮಾಡಬೇಕಾದರೆ 25 ಲಕ್ಷ ರೂ ಅನ್ನು ಒಂದು ಎಕರೆ ಜಮೀನಿಗೆ ಕೊಡಬೇಕು. ಕಾಂಗ್ರೆಸ್ ಸರ್ಕಾರ ಎಲ್ಲದರಲ್ಲೂ ಲಂಚ ಪಡೆಯುತ್ತಿದೆ ಎಂದು ಆರೋಪಿಸಿದರು.

ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಲ್ಲಿ ಲಂಚ ಕೊಟ್ಟರೆ ಮಾತ್ರ ಮೊದಲು ಅನುದಾನ ಸಿಗುತ್ತದೆ. ಇದು ಕೇವಲ ಅಡ್ವಾನ್ಸ್; ಬಿಲ್ಲು ಮಾಡಿಸಿಕೊಳ್ಳಲು ಪ್ರತ್ಯೇಕ, ಎನ್‍ಓಸಿ ತೆಗೆದುಕೊಳ್ಳುವುದಕ್ಕೆ ಪ್ರತ್ಯೇಕ, ಕಾಮಗಾರಿ ತೆಗೆದುಕೊಳ್ಳಲು ಲಂಚ ಕೊಡಬೇಕು. ಯಾವ ಇಲಾಖೆಯಲ್ಲೂ ಭ್ರಷ್ಟಾಚಾರ ಬಿಟ್ಟಿಲ್ಲ. ರಕ್ತ ಹೀರುತ್ತಿದ್ದಾರೆ, ಜಿಗಣೆಯಾದರೆ ರಕ್ತವನ್ನು ಹೀರಿ ಬಿಡುತ್ತದೆ. ಆದರೆ ಇವರು ಹೀರುತ್ತಲೇ ಇದ್ದಾರೆ ಎಂದು ಟೀಕಿಸಿದರು.

ಕಾಂಗ್ರೆಸ್ಸಿನ ಹಲವಾರು ಶಾಸಕರು ನಮ್ಮ ಕ್ಷೇತ್ರದಲ್ಲಿ ಕಲ್ಲು ಇಡಲು ಆಗುತ್ತಿಲ್ಲ, ಚರಂಡಿ ಮಾಡಲು ಆಗುತ್ತಿಲ್ಲ ಎಂದು ತಮ್ಮ ಅಳಲನ್ನು ತೋಡಿಕೊಳ್ಳುತ್ತಿದ್ದಾರೆ ಎನ್ನುವ ಪ್ರಶ್ನೆಗೆ ಉತ್ತರಿಸಿದ ಅವರು, ಬಹುತೇಕ ಶಾಸಕರ ಒಳ ಸಂಕಟವಿದು. ಕೆಲವರು ಬಾಯಿ ಬಿಟ್ಟು ಹೇಳುತ್ತಾರೆ; ಕೆಲವರು ಬಾಯಿಬಿಟ್ಟು ಹೇಳುವುದಿಲ್ಲ ಇದು ಒಳ ಸಂಕಟ. ಇಂತಹ ಬಹುತೇಕ ಶಾಸಕರು ಇದ್ದಾರೆ. ಆಡಳಿತ ಪಕ್ಷದ ಶಾಸಕರ ಈ ಪರಿಪಾಠ ಆದರೆ ಇನ್ನು ವಿಪಕ್ಷ ಶಾಸಕರ ಗತಿ ಏನು ಆಗಬೇಕೆಂದು ಯೋಚನೆ ಮಾಡಿ ಎಂದು ಹೇಳಿದರು.

ಆಡಳಿತ ಪಕ್ಷದ ಶಾಸಕರೇ ಈ ಪರಿ ಪರಿತಾಪ ಪಡುತ್ತಿದ್ದಾರೆ. ಇನ್ನು ವಿಪಕ್ಷ ಶಾಸಕರ ಗೋಳು ಇದೆ. ಆದರೆ ಅವರ ಗೋಳು ಹೇಳಿಕೊಂಡರೆ ಪ್ರಯೋಜನವಿಲ್ಲ. ಗೋರ್ಕಲ್ಲ ಮೇಲೆ ಮಳೆ ಸುರಿದಂತೆ- ಸರ್ವಜ್ಞ ಎಂಬಂತೆ ಆಗಿದೆ ಎಂದು ಟೀಕಿಸಿದರು.

Vishwa News 24

Recent Posts

ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ – vishwanews24

ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ ಬೆಳ್ತಂಗಡಿ: ಕಲೆಯ ಪ್ರದರ್ಶನದಲ್ಲಿ ಕೆಲವೊಮ್ಮೆ ಪ್ರೇಕ್ಷಕರ ವರ್ತನೆ…

5 hours ago

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ – vishwanews24

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ ಮಂಗಳೂರು: ಯಕ್ಷಗಾನ…

1 day ago

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ – vishwanews24

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…

1 day ago

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ – vishwanews24

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…

1 day ago

ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಮಂಗಳೂರು ವಿವಿ ಗೌರವ ಡಾಕ್ಟರೇಟ್ – vishwanews24

ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ  :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ  ಗೌರವ ಡಾಕ್ಟರೇಟ್ ಮಂಗಳೂರು…

1 day ago

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ – vishwanews24

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…

1 day ago