ರಾಜ್ಯ ನ್ಯೂಸ್

ಭ್ರಷ್ಟಾಚಾರ ಮುಕ್ತವಾದ 4 ವರ್ಷಗಳ ಪ್ರಧಾನಿ ಮೋದಿಯವರ ಆಡಳಿತವನ್ನು ನಾನೇಕೆ ಟೀಕಿಸಲಿ..?

ಈ ಹಿಂದೆ ಮೋದಿ ನಾಯಕತ್ವದ ಸರ್ಕಾರದ ಮೇಲೆ ಬಹಳ ನಿರೀಕ್ಷೆಗಳಿತ್ತು. ಆದರೆ ಗಂಗಾ ಶುದ್ದೀಕರಣದಂತಹ ವಿಷಯದಲ್ಲಿ ಅವರು ನಮ್ಮ ನಿರೀಕ್ಷೆ ಮಟ್ಟವನ್ನು ಮುಟ್ಟಲು ವಿಫಲರಾಗಿದ್ದಾರೆ ಎಂಬ ಹೇಳಿಕೆಗಳನ್ನು ಕಳೆದ ವಾರವಷ್ಟೇ ಪೇಜಾವರ ಶ್ರೀಗಳು ಹೇಳಿಕೆ‌ ನೀಡಿದ್ದರು. ಅದು ಮಾಧ್ಯಮಗಳಲ್ಲಿ ಭಾರಿ ಸುದ್ದಿಯಾಗಿತ್ತು.

ಇಂದು ಮೈಸೂರಿನಲ್ಲಿ ಮಾತನಾಡಿರುವ ಉಡುಪಿ ಮಠದ ವಿಶ್ವೇಶತೀರ್ಥ ಪೇಜಾವರ ಶ್ರೀಗಳು ನಾನು ಪ್ರಧಾನಿಯವರನ್ನು ಟೀಕಿಸಿಲ್ಲ ಬದಲಾಗಿ ಹೊಗಳಿದ್ದೇನೆ. ಭ್ರಷ್ಟಾಚಾರ ನಿಯಂತ್ರಣಕ್ಕೆ, ಹೊಸ ಹೊಸ ಕಾಯಿದೆ, ಕಾನೂನು ರೂಪಸಿದ್ದಾರೆ. ನನ್ನ ಹೇಳಿಕೆಯನ್ನು ತಪ್ಪಾಗಿ ಅರ್ಥೈಸಲಾಗಿದೆ. ನಾಲ್ಕು ವರ್ಷಗಳ ಆಡಳಿತವನ್ನು ಭ್ರಷ್ಟಾಚಾರ ಮುಕ್ತವಾಗಿ ನಡೆಸಿದ್ದಾರೆ. ಅನ್ಯ ದೇಶಗಳ ಜೊತೆಗೆ ಉತ್ತಮ ಸಂಬಂಧ ವೃದ್ದಿಸಿದ್ದಾರೆ. ದೇಶದ ಆರ್ಥಿಕತೆಯನ್ನು ಸರಿದಾರಿಯಲ್ಲಿ ತರಲು ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಶಕ್ತಿ ಮೀರಿ ಶ್ರಮಿಸುತಿದ್ದಾರೆ. ಗಂಗಾ ಶುದ್ಧೀಕರಣದ ಬಗ್ಗೆ ಸ್ಥಳಿಯರ ಅಭಿಪ್ರಾಯ ಉಲ್ಲೇಖಿಸಿದ್ದೇನೆ. ವಿದೇಶದಲ್ಲಿನ ಕಪ್ಪು ಹಣ ತರುವ ವಿಚಾರದಲ್ಲಿ ಪ್ರಗತಿಯಾಗಿಲ್ಲ. ಈ ಎರಡೂ ವಿಚಾರಗಳನ್ನು ಹೇಳಿರುವುದು ಮಾತ್ರ ಸತ್ಯ. ಆದರೆ ಪ್ರಧಾನಿಯವರನ್ನು ನಾನು ಎಲ್ಲಿಯೂ ಟೀಕಿಸಿಲ್ಲ ಎಂದು ತಿಳಿಸಿದ್ದಾರೆ.

ಈ ಬಾರಿಯೂ ಇಫ್ತಾರ್ ಕೂಟ..!! ಈ ಬಾರಿ ಸಹ ಮಠದಲ್ಲಿ ಇಫ್ತಾರ್ ಕೂಟ ಆಯೋಜಿಸಲು ನಾನು ಉತ್ಸುಕನಾಗಿದ್ದೇನೆ. ಆದರೆ ಮುಸ್ಲಿಮರೇ ಆಸಕ್ತಿ ತೋರುತ್ತಿಲ್ಲ. ಕಳೆದ ಬಾರಿ ಭಾರೀ ವಿವಾದಗಳುಂಟಾಗಿದ್ದ ಕಾರಣ ಅವರು ಹಿಂಜರಿಯುತ್ತಿದ್ದಾರೆ. ಮೂರ್ತಿಪೂಜೆ ನಡೆಯುವಲ್ಲಿ ಪ್ರಾರ್ಥನೆ ಸಲ್ಲಿಸಲು ಅವರು ಹಿಂದೇಟು ಹಾಕುತ್ತಿದ್ದಾರೆ. ಎಂದು ಪೇಜಾವರ ಶ್ರೀಗಳು ಇದೇ ಸಂದರ್ಭದಲ್ಲಿ ಹೇಳಿದರು.

Vishwa News 24

Recent Posts

ಉಡುಪಿ : ಹೊಟೇಲ್ ಮುಚ್ಚುವ ಭೀತಿ ; ಜಿಲ್ಲೆಯ ಆರ್ಥಿಕತೆಯ ಮೇಲೆ ಗಂಭೀರ ಪರಿಣಾಮ : ತಲ್ಲೂರು ಶಿವರಾಮ ಶೆಟ್ಟಿ – vishwanews24

ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…

4 days ago

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ – vishwanews24

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…

4 days ago

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ – vishwanews24

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…

4 days ago

ಉಡುಪಿ : ಗ್ಯಾಸ್ ಹೆಸರಿನಲ್ಲಿ ಸೈಬರ್ ವಂಚನೆ: ಅಪರಿಚಿತರಿಂದ ಬರುವ ಲಿಂಕ್‌, ಎಪಿಕೆ ಫೈಲ್‌ ಓಪನ್ ಮಾಡುವ ಮುನ್ನ ಎಚ್ಚರ : ಎಸ್ಪಿ ಮನವಿ – vishwanews24

ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…

4 days ago

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ ‘ಗೀತಾ’ – vishwanews24

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…

4 days ago

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿಯ ಬಂಧನ – vishwanews24

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…

4 days ago