ಮೈಸೂರು: ಭ್ರಷ್ಟ ಬಿಜೆಪಿ ಸರ್ಕಾರವನ್ನು ಕಿತ್ತೊಗೆಯಲು ದಕ್ಷಿಣ ಪದವೀಧರ ಕ್ಷೇತ್ರದ ಚುನಾವಣೆ ದಿಕ್ಸೂಚಿಯಾಗಬೇಕು. ಈ ನಿಟ್ಟಿನಲ್ಲಿ ಕಾರ್ಯಕರ್ತರು ಹೆಚ್ಚು ಗಮನಕೊಡಬೇಕು ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದರು.
ಇಲ್ಲಿನ ಖಾಸಗಿ ಹೋಟೆಲ್‌ನಲ್ಲಿ ಮಂಗಳವಾರ ದಕ್ಷಿಣ ಪದವೀಧರ ಕ್ಷೇತ್ರದ ಚುನಾವಣೆ ಕುರಿತು ನಡೆದ ಕಾಂಗ್ರೆಸ್ ಪಕ್ಷದ ಸಭೆಯಲ್ಲಿ ಅವರು ಮಾತನಾಡಿದರು.
‘ಬಸವರಾಜ ಬೊಮ್ಮಾಯಿ ಸರ್ವ ವ್ಯಾಪಿ ಸರ್ವ ಸ್ಪರ್ಶಿ ಸರ್ಕಾರ ಎಂದಿದ್ದು ಕೇವಲ ಭ್ರಷ್ಟಾಚಾರದಲ್ಲಿ ಮಾತ್ರ’ ಎಂದು ಹರಿಹಾಯ್ದ ಸಿದ್ದರಾಮಯ್ಯ, ‘ಅಭಿವೃದ್ಧಿ ಕೆಲಸ ಮರೆತು ಲೂಟಿ ಹೊಡೆಯಲಾಗುತ್ತಿದೆ’ ಎಂದು ಕಿಡಿಕಾರಿದರು.
‘ಮಾರ್ಚ್‌ನಲ್ಲಿ ಪೆಟ್ರೋಲ್ ಬೆಲೆ ಲೀಟರ್‌ಗೆ ₹ 103 ಇತ್ತು. ನಂತರ, ₹ 113 ಆಯಿತು. ಈಗ ₹ 9 ಕಡಿಮೆ ಮಾಡಿದ್ದೇವೆ ಎಂದು ತಮ್ಮ ಬೆನ್ನನ್ನು ತಾವೇ ಚಪ್ಪರಿಸಿಕೊಳ್ಳುತ್ತಿದ್ದಾರೆ’ ಎಂದು ಲೇವಡಿ ಮಾಡಿದರು.
ಪರಿಶಿಷ್ಟ ಜಾತಿ, ಪಂಗಡದವರ ಅಭಿವೃದ್ಧಿಗೆ ₹ 12 ಸಾವಿರ ಕೋಟಿ ಹಣವನ್ನು ಕಡಿತ ಮಾಡಿದ್ದರೂ ಬಿಜೆಪಿಯಲ್ಲಿ ಎಸ್.ಸಿ, ಎಸ್.ಟಿ. ಪಂಗಡದ ನಾಯಕರು ಸುಮ್ಮನಿದ್ದಾರೆ. ಅಲ್ಪಸಂಖ್ಯಾತರು ಸದಾ ಭಯದಿಂದ ಬದುಕುವಂತಹ ವಾತಾವರಣ ನಿರ್ಮಾಣವಾಗಿದೆ ಎಂದು ಬೇಸರ ವ್ಯಕ್ತಪಡಿಸಿದರು.
ಯಾವ ಪಕ್ಷ ಹೆಚ್ಚು ಸ್ಥಾನ ಗಳಿಸುತ್ತದೋ ಅದರ ಹಿಂದೆ ಹೋಗುವ ಪಕ್ಷವೇ ಜೆಡಿಎಸ್. ಅದು ಸ್ವಂತ ಬಲದಿಂದ ಅಧಿಕಾರಕ್ಕೆ ಬರುವ ಪಕ್ಷ ಅಲ್ಲ. ಆ ಪಕ್ಷಕ್ಕೆ ಯಾವುದೇ ಸಿದ್ಧಾಂತವೂ ಇಲ್ಲ. ಅದು ಏನಿದ್ದರೂ ಕೇವಲ ಐದಾರು ಜಿಲ್ಲೆಗಳಲ್ಲಿ ಆಟವಾಡುವ ಪಕ್ಷ ಎಂದರು.
ಸಾಂಘಿಕ ಪ್ರಯತ್ನದಿಂದ ಗೆಲುವು: ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಮಾತನಾಡಿ, ‘ವಿಧಾನಪರಿಷತ್ ಚುನಾವಣೆಯಲ್ಲಿ ಸಾಂಘಿಕ ಪ್ರಯತ್ನದಿಂದ ಗೆಲುವು ಸಾಧಿಸಬಹುದು. ಇದಕ್ಕಾಗಿ ಶಾಸಕರು, ಮಾಜಿ ಶಾಸಕರು, ಕಾರ್ಯಕರ್ತರು ಒಗ್ಗಟ್ಟಿನಿಂದ ಕಾರ್ಯನಿರ್ವಹಿಸಬೇಕು’ ಎಂದು ಹೇಳಿದರು.
‘ಜೆಡಿಎಸ್‌ಗೆ ಶಕ್ತಿ ಇಲ್ಲ ಎಂದು ಗೊತ್ತಾಗಿಯೇ ಹಾಲಿ ಸದಸ್ಯ ಕೆ.ಟಿ.ಶ್ರೀಕಂಠೇಗೌಡ ಅವರು ತಮ್ಮ ಕಣದಿಂದ ಹಿಂದೆ ಸರಿದರು. ಕಾಂಗ್ರೆಸ್‌ಗೆ ಗೆಲ್ಲುವ ಅವಕಾಶ ಹೆಚ್ಚಾಗಿದೆ’ ಎಂದರು.
ಶಾಸಕರಾದ ಡಾ.ಯತೀಂದ್ರ ಸಿದ್ದರಾಮಯ್ಯ, ಆರ್.ನರೇಂದ್ರ, ಎಚ್.ಪಿ.ಮಂಜುನಾಥ್, ಸಿ.ಪುಟ್ಟರಂಗಶೆಟ್ಟಿ, ಸಿ.ಅನಿಲ್ ಕುಮಾರ್, ವಿಧಾನ ಪರಿಷತ್ ಸದಸ್ಯರಾದ ಡಾ.ಡಿ.ತಿಮ್ಮಯ್ಯ, ದಿನೇಶ್ ಗೂಳೀಗೌಡ, ಮುಖಂಡರಾದ ಡಾ.ಎಚ್.ಸಿ.ಮಹದೇವಪ್ಪ, ಕೆ.ವೆಂಕಟೇಶ್, ಎಂ.ಕೆ.ಸೋಮಶೇಖರ್, ಎ.ಆರ್.ಕೃಷ್ಣಮೂರ್ತಿ, ಎಸ್.ಜಯಣ್ಣ, ಕಳಲೆ ಕೇಶವಮೂರ್ತಿ ಇದ್ದರು.
ತಮಿಳುನಾಡು ಸಿಎಂ ವಿಜಯ್ ವಿಚ್ಛೇದನ ಪ್ರಕರಣ: ಆಗಸ್ಟ್ 7ಕ್ಕೆ ವಿಚಾರಣೆ ಮುಂದೂಡಿದ ಕೋರ್ಟ್ ಚೆನ್ನೈ :ತಮಿಳುನಾಡು ಮುಖ್ಯಮಂತ್ರಿ, ನಟ ದಳಪತಿ…
ಕೊಡವೂರು: ಶಂಕರನಾರಾಯಣ ದೇವಸ್ಥಾನದ ತಾತ್ಕಾಲಿಕ ಮೇಲುಸ್ತುವಾರಿ ವೆಂಕಟಕೃಷ್ಣ ನಾಪತ್ತೆ ಮಲ್ಪೆ :ಉಡುಪಿ ತಾಲೂಕಿನ ಕೊಡವೂರು ಗ್ರಾಮದ ಶ್ರೀ ಶಂಕರನಾರಾಯಣ ದೇವಸ್ಥಾನದಲ್ಲಿ…
ಗೃಹಲಕ್ಷ್ಮಿ, ಗೃಹಜ್ಯೋತಿ ಯೋಜನೆ ಪರಿಷ್ಕರಣೆ: ಸೌಲಭ್ಯ ಪಡೆಯಲು ಹೊಸ ಅರ್ಜಿ ಸಲ್ಲಿಕೆ ಕಡ್ಡಾಯ ಬೆಂಗಳೂರು: ಗೃಹಲಕ್ಷ್ಮಿ, ಗೃಹಜ್ಯೋತಿ ಯೊಜನೆಗಳಲ್ಲಿ ನಕಲಿ…
ಕಾಸರಗೋಡು: ಬೇಕಲ ಕಡಲತೀರದಲ್ಲಿ ಸಮುದ್ರಪಾಲಾದ ಕೊಟ್ಟಾಯಂನ ಇಬ್ಬರು ವಿದ್ಯಾರ್ಥಿಗಳು; ಮತ್ತಿಬ್ಬರ ರಕ್ಷಣೆ ಕಾಸರಗೋಡು: ಬೇಕಲ ಕೋಟೆಯ ಸಮೀಪವಿರುವ ಪಳ್ಳಿಕೆರೆ ಕಡಲತೀರದಲ್ಲಿ…
ಹಿಂದಿ ಕಿರುತೆರೆಯ ಜನಪ್ರಿಯ ನಟಿ ಸಂಚಿತಾ ಉಗಲೆ ನೇಣುಬಿಗಿದುಕೊಂಡು ಆತ್ಮಹತ್ಯೆ ಮುಂಬೈ: ಹಿಂದಿ ಕಿರುತೆರೆಯ ಜನಪ್ರಿಯ ನಟಿ ಸಂಚಿತಾ ಉಗಲೆ…
ಅಯ್ಯಪ್ಪ ಮಾಲೆ ಧರಿಸಿ ಶಬರಿಮಲೆ ಯಾತ್ರೆ ಕೈಗೊಂಡ ಹೆಚ್.ಡಿ. ಕುಮಾರಸ್ವಾಮಿ ಬೆಂಗಳೂರು: ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿಯವರು ಶಬರಿಮಲೆ ಯಾತ್ರೆ ಕೈಗೊಂಡಿದ್ದಾರೆ.…