ಬೆಂಗಳೂರು: ಭ್ರಷ್ಟಾಚಾರದ ನೈತಿಕ ಹೊಣೆಹೊತ್ತು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ರಾಜೀನಾಮೆ ನೀಡುವಂತೆ ಆಗ್ರಹಿಸಿ ಇಂದು ಕಾಂಗ್ರೆಸ್ ಪಕ್ಷದಿಂದ ಮುಖ್ಯಮಂತ್ರಿ ನಿವಾಸಕ್ಕೆ ಮುತ್ತಿಗೆ ಹಾಕುವಂತ ಪ್ರತಿಭಟನೆಯನ್ನು ಹಮ್ಮಿಕೊಳ್ಳಲಾಗಿದೆ.
ಈ ಕುರಿತಂತೆ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿರುವಂತ ಕೆಪಿಸಿಸಿ, ದಾವಣಗೆರೆ ಜಿಲ್ಲೆ, ಚನ್ನಗಿರಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಅವರ ಪುತ್ರ ದಾಖಲೆ ಸಮೇತ ಲೋಕಾಯುಕ್ತರ ಬಲೆಗೆ ಬಿದ್ದಿದ್ದು ಅವರ ನಿವಾಸದಲ್ಲಿ 8 ಕೋಟಿ ನಗದು ಸಿಕ್ಕಿದೆ, ಬಿಜೆಪಿ ಸರ್ಕಾರದ 40% ಕಮೀಷನ್ ದಂಧೆ ಬಟಾಬಯಲಾಗಿದೆ. ಭ್ರಷ್ಠಾಚಾರ ಆರೋಪದ ಕಾರಣ ನೈತಿಕ ಹೊಣೆ ಹೊತ್ತು ಮುಖ್ಯಮಂತ್ರಿಗಳು ರಾಜೀನಾಮೆ ನೀಡುವಂತೆ ಆಗ್ರಹಿಸಿದೆ.
ಈ ಪ್ರತಿಭಟನೆಯಲ್ಲಿ ರಾಜ್ಯ ಉಸ್ತುವಾರಿ ಎಐಸಿಸಿ ಪ್ರಧಾನ ಕಾರ್ಯದರ್ಶಿಯವರಾದ ರಣದೀಪ್ ಸಿಂಗ್ ಸುರ್ಜೇವಾಲಾ ರವರು, ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ.ಶಿವಕುಮಾರ್ ರವರು, ಕೆಪಿಸಿಸಿ ಕಾರ್ಯಾಧ್ಯಕ್ಷರುಗಳು, ಪಕ್ಷದ ಹಿರಿಯ ಮುಖಂಡರುಗಳು, ಸಂಸದರು, ಶಾಸಕರುಗಳು, ಕೆಪಿಸಿಸಿ ಪದಾಧಿಕಾರಿಗಳು ಭಾಗವಹಿಸಲಿದ್ದಾರೆ ಎಂದು ಹೇಳಿದೆ.
ಉಡುಪಿ: ಆಸ್ತಿಯನ್ನು ಬಲವಂತವಾಗಿ ತನ್ನ ಹೆಸರಿಗೆ ವರ್ಗಾಯಿಸಿಕೊಂಡು ವೃದ್ಧ ಪೋಷಕರನ್ನು ಮನೆಯಿಂದ ಹೊರಹಾಕಿದ ಮಗ ಉಡುಪಿ: ತಾಯಿಯ ಹೆಸರಿನಲ್ಲಿದ್ದ ಆಸ್ತಿಯನ್ನು…
ವಿಟ್ಲ : ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಮರ ಹಾಗೂ ವಿದ್ಯುತ್ ಕಂಬ: ದಂಪತಿ ಅಪಾಯದಿಂದ ಪಾರು ವಿಟ್ಲ: ಮರ ಹಾಗೂ…
ಮಂಗಳೂರು: ಉದ್ಯಮಿಯ ಕಾರು ಅಡ್ಡಗಟ್ಟಿ ಕಾರು ಸಹಿತ ಚಿನ್ನಾಭರಣ ದರೋಡೆ ಮಂಗಳೂರು: ಕೇರಳ ಮೂಲದ ಉದ್ಯಮಿಯೊಬ್ಬರ ಕಾರನ್ನು ಅಡ್ಡಗಟ್ಟಿ ಕಾರು…
ವಯೋವಂದನ ಯೋಜನೆ : ವೇದಿಕೆಯ ನೇತೃತ್ವಕ್ಕೆ ಸಮಾಜದ ಸಹಭಾಗಿತ್ವ ಅಗತ್ಯ : ಸಿ ಎಂ ಗುಜ್ಜಾಡಿ ಪ್ರಭಾಕರ್ ನಾಯಕ್ ಜಿ…
ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ‘ನುವಾ’ ವಜ್ರಾಭರಣ ಅನಾವರಣ ಉಡುಪಿ: ಮಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಉಡುಪಿ ಶಾಖೆಯಲ್ಲಿ ಮೈನ್ ಬ್ರಾಂಡಿನ…
ಧರ್ಮಸ್ಥಳ ಪ್ರಕರಣ : ವಿಠಲ್ ಗೌಡ ವಿರುದ್ಧ ಅರೆಸ್ಟ್ ವಾರಂಟ್: ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…