Featured

ಮಂಕಿಪಾಕ್ಸ್ ಆತಂಕ; ಮಂಗಳೂರಿನ ವೆನ್ಲಾಕ್ ಆಸ್ಪತ್ರೆಯಲ್ಲಿ 10 ಬೆಡ್​ಗಳ ವಿಶೇಷ ವಾರ್ಡ್ ಆರಂಭ – Vishwanews24

ಮಂಕಿಪಾಕ್ಸ್ ಆತಂಕ; ಮಂಗಳೂರಿನ ವೆನ್ಲಾಕ್ ಆಸ್ಪತ್ರೆಯಲ್ಲಿ 10 ಬೆಡ್​ಗಳ ವಿಶೇಷ ವಾರ್ಡ್ ಆರಂಭ

ಮಂಗಳೂರು: ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಂದಿಳಿದ ಕೇರಳದ ವ್ಯಕ್ತಿಯೋರ್ವರಲ್ಲಿ ಮಂಕಿಪಾಕ್ಸ್ ಸೋಂಕು  ಪತ್ತೆಯಾಗಿದೆ. ಈ ಹಿನ್ನೆಲೆಯಲ್ಲಿ ವಿಮಾನ ನಿಲ್ದಾಣದಲ್ಲಿ ವಿದೇಶಿ ಪ್ರಯಾಣಿಕರ ಮೇಲೆ ನಿಗಾ ಇರಿಸಲಾಗಿದೆ. ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸೂಚನೆಯಂತೆ ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲೂ ಸ್ಕ್ರೀನಿಂಗ್ ಆರಂಭಿಸಲಾಗಿದೆ.

ವಿದೇಶದಿಂದ ಆಗಮಿಸುವ ಪ್ರಯಾಣಿಕರನ್ನು ಥರ್ಮಲ್ ಸ್ಕ್ರೀನಿಂಗ್ ಗೆ ಒಳಪಡಿಸಲಾಗುತ್ತಿದ್ದು, ಅವರು ತೆರಳುವ ಸ್ಥಳದ ಬಗ್ಗೆ ಮಾಹಿತಿಯನ್ನು ಪಡೆದುಕೊಳ್ಳಲಾಗುತ್ತಿದೆ. ಅಲ್ಲದೇ 10 ಹಾಸಿಗೆಗಳ ವಿಶೇಷ ವಾರ್ಡ್​ನ್ನು ಸಹ ಮಂಗಳೂರಿನಲ್ಲಿ ಆರಂಭಿಸಲಾಗಿದೆ. ಇಲ್ಲಿದೆ ಆಕುರಿತು ಅಧಿಕೃತ ಸಂಪೂರ್ಣ ಮಾಹಿತಿ.

ವಿದೇಶಿ ಪ್ರಯಾಣಿಕರ ಬಗ್ಗೆ ನಿಗಾ
ಅಲ್ಲದೇ, ಪ್ರಯಾಣಿಕರು ಆಗಮಿಸುವ ದೇಶದಲ್ಲಿ ಮಂಕಿ ಪಾಕ್ಸ್ ಪ್ರಕರಣಗಳ ಬಗ್ಗೆಯೂ ನಿಗಾ ವಹಿಸುವುದಾಗಿ ಮಂಗಳೂರು ವಿಮಾನ ನಿಲ್ದಾಣ ಪ್ರಾಧಿಕಾರದ ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲದೇ ದಕ್ಷಿಣ ಕನ್ನಡ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯು ಜಿಲ್ಲೆಗೆ ಆಗಮಿಸುವ ವಿದೇಶಿ ಪ್ರಯಾಣಿಕರ ಬಗ್ಗೆ ನಿಗಾವಿರಿಸಿದೆ.

ಜಿಲ್ಲಾ ಸರಕಾರಿ ಆಸ್ಪತ್ರೆಯಲ್ಲಿ ವಿಶೇಷ ವಾರ್ಡ್
ಮಂಗಳೂರಿನ ಜಿಲ್ಲಾ ವೆನ್ಲಾಕ್ ಸರಕಾರಿ ಆಸ್ಪತ್ರೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ವಿಶೇಷ ವಾರ್ಡ್ ತೆರೆಯಲಾಗಿದೆ. 10 ಹಾಸಿಗೆಯುಳ್ಳ ವಾರ್ಡ್​ನಲ್ಲಿ ಶಂಕಿತ ಮಂಕಿಪಾಕ್ಸ್ ಪ್ರಕರಣದ ಸೋಂಕಿತರ ಮೇಲೆ ನಿಗಾ ಇಡಲು ನಿರ್ಧರಿಸಿದೆ. ಆದರೆ, ಇದುವರೆಗೂ ಜಿಲ್ಲೆಯಲ್ಲಿ ಯಾವುದೇ ಮಂಕಿ ಪಾಕ್ಸ್ ಲಕ್ಷಣ ಕಂಡು ಬಂದಿಲ್ಲ ಎಂದು ಜಿಲ್ಲಾ ಆರೋಗ್ಯ ಇಲಾಖೆ ತಿಳಿಸಿದೆ.

ರೋಗ ಲಕ್ಷಣಗಳಿವು
ಬೊಕ್ಕೆ ಮಾದರಿಯಲ್ಲಿ ಕಾಣುವ ಗುಳ್ಳೆಗಳು ಮೊದಲಿಗೆ ದೇಹದ ಹೊರಗೆ ಕಾಣಿಸಿಕೊಂಡರೆ ಬಳಿಕ ಜ್ವರ ಹೆಚ್ಚುತ್ತಿದ್ದಂತೆ ಕಣ್ಣು, ಬಾಯಿ, ಶ್ವಾಸಕೋಶಕ್ಕೂ ಲಗ್ಗೆಯಿಟ್ಟು ಘಾಸಿ ಉಂಟು ಮಾಡುತ್ತದೆ. ಅಲ್ಲದೇ, ಮಂಕಿಪಾಕ್ಸ್ ಸೋಂಕಿತರಲ್ಲಿ ಜ್ವರ, ಸ್ನಾಯು ನೋವು, ಶೀತಗಳು ಕಂಡು ಬರುತ್ತವೆ.

ಪರಿಹಾರವೇನು?
ಸಾರ್ವಜನಿಕರು ಕೋವಿಡ್ ಸಮಯದಲ್ಲಿ ಪಾಲಿಸಿದಂತಹ ಮಾರ್ಗಸೂಚಿಗಳನ್ನು ಇಲ್ಲಿಯೂ ಪಾಲಿಸಬೇಕಾಗುತ್ತದೆ. ಆದರೆ, ಕೋವಿಡ್ ನಂತೆ ವೇಗವಾಗಿ ಈ ಸೋಂಕು ಒಬ್ಬರಿಂದ ಇನ್ನೊಬ್ಬರಿಗೆ ಹರಡುವುದಿಲ್ಲ. ಅದಾಗ್ಯೂ, ಜನರು ಸೋಂಕಿತರಿಂದ ಅಂತರ ಕಾಯುವುದು, ಕೈಗಳಿಗೆ ಸೋಪ್ ಅಥವಾ ಸ್ಯಾನಿಟೈಸರ್ ಬಳಸುವುದು. ಮತ್ತು ಸೋಂಕಿತರ ಬಳಿಗೆ ತೆರಳುವಾಗ ರಕ್ಷಣಾ ಕವಚಗಳನ್ನು ಧರಿಸಬೇಕಾಗುತ್ತದೆ.

ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಮಂಕಿಪಾಕ್ಸ್ ಪ್ರಕರಣ ಪತ್ತೆಯಾದ ಬೆನ್ನಲ್ಲೇ ವಿಮಾನ ನಿಲ್ದಾಣದಲ್ಲಿ ಥರ್ಮಲ್ ಸ್ಕ್ರೀನಿಂಗ್ ಆರಂಭಿಸಲಾಗಿದೆ. ಇನ್ನೊಂದೆಡೆ ಜಿಲ್ಲಾ ಸರಕಾರಿ ಆಸ್ಪತ್ರೆಯಲ್ಲಿ ವಿಶೇಷ ವಾರ್ಡ್ ತೆರೆಯಲಾಗಿದೆ.

 

Vishwa News 24

Recent Posts

ಮಂಗಳೂರು: ರಾಷ್ಟ್ರೀಯ ಹೆದ್ದಾರಿಗಳಲ್ಲಿ ಅಕ್ರಮ ಚಟುವಟಿಕೆ ನಿಯಂತ್ರಣಕ್ಕೆ ಜಿಲ್ಲಾಧಿಕಾರಿ ಸೂಚನೆ – vishwanews24

ಮಂಗಳೂರು: ರಾಷ್ಟ್ರೀಯ ಹೆದ್ದಾರಿಗಳಲ್ಲಿ ಅಕ್ರಮ ಚಟುವಟಿಕೆ ನಿಯಂತ್ರಣಕ್ಕೆ ಜಿಲ್ಲಾಧಿಕಾರಿ ಸೂಚನೆ ಮಂಗಳೂರು: ರಾತ್ರಿ ವೇಳೆ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಮಂಗಳಮುಖಿಯರು ಅಕ್ರಮ…

12 hours ago

ಉಡುಪಿ ನಗರಸಭೆ ಬಾಕಿ ಕಾಮಗಾರಿ ಶೀಘ್ರ ಆರಂಭಕ್ಕೆ ಜಿಲ್ಲಾಧಿಕಾರಿಗೆ ಬಿಜೆಪಿ ಮನವಿ – vishwanews24

ಉಡುಪಿ ನಗರಸಭೆಯ ಕಾಮಗಾರಿಗಳಿಗೆ ಚುರುಕು ಮುಟ್ಟಿಸಲು ಜಿಲ್ಲಾಧಿಕಾರಿಗೆ ಬಿಜೆಪಿ ಮನವಿ ಉಡುಪಿ: ಉಡುಪಿ ನಗರಸಭೆಯಲ್ಲಿ ಬಾಕಿ ಉಳಿದಿರುವ ಕಾಮಗಾರಿಗಳನ್ನು ತಕ್ಷಣ…

13 hours ago

ಬಂಟ್ವಾಳ: ಮಾದಕ ದ್ರವ್ಯ ಮಾರಾಟ ಶಂಕೆ; ಓರ್ವನ ಬಂಧನ – vishwanews24

ಬಂಟ್ವಾಳ: ಮಾದಕ ದ್ರವ್ಯ ಮಾರಾಟ ಶಂಕೆ; ಓರ್ವನ ಬಂಧನ, 1.93 ಲಕ್ಷ ರೂ. ಮೌಲ್ಯದ ಸೊತ್ತು ವಶ ಬಂಟ್ವಾಳ: ಮಾದಕ…

13 hours ago

ಮಂಡ್ಯ : ಅನಾರೋಗ್ಯದಿಂದ ಎಎಸ್‌ಪಿ ಸಿ.ಇ. ತಿಮ್ಮಯ್ಯ ನಿಧನ – vishwanews24

ಮಂಡ್ಯ : ಅನಾರೋಗ್ಯದಿಂದ ಎಎಸ್‌ಪಿ ಸಿ.ಇ. ತಿಮ್ಮಯ್ಯ ನಿಧನ ಮಂಡ್ಯ: ಅನಾರೋಗ್ಯದಿಂದ ಜಿಲ್ಲಾ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಸಿ.ಇ.ತಿಮ್ಮಯ್ಯ (57)…

13 hours ago

ಕಾಪು : ಇಂದು ಸಂಜೆ ಉಚ್ಚಿಲ ದಸರಾದ ದೀಪಾಲಂಕಾರ ಉದ್ಘಾಟನೆ – vishwanews24

ಕಾಪು : ಇಂದು ಸಂಜೆ ಉಚ್ಚಿಲ ದಸರಾದ ದೀಪಾಲಂಕಾರ ಉದ್ಘಾಟನೆ ಕಾಪು: ದ.ಕ. ಮೊಗವೀರ ಮಹಾಜನ ಸಂಘದ ಆಡಳಿತಕ್ಕೊಳಪಟ್ಟಿರುವ ಶ್ರೀ…

13 hours ago

ನೋಯ್ಡಾ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ‘ನರೇಂದ್ರ ಮೋದಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ’ ಎಂದು ಮರುನಾಮಕರಣ: ಯೋಗಿ ಆದಿತ್ಯನಾಥ್ ಘೋಷಣೆ – vishwanews24

ನೊಯ್ಡಾ ವಿಮಾನ ನಿಲ್ದಾಣಕ್ಕೆ ನರೇಂದ್ರ ಮೋದಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಎಂದು ಮರುನಾಮಕರಣ ನವದೆಹಲಿ: ಉತ್ತರ ಪ್ರದೇಶದ ಜೆವಾರ್‌ನಲ್ಲಿರುವ ನೋಯ್ಡಾ…

1 day ago