ಹಲವು ದಿನಗಳ ಬಳಿಕ ಉಡುಪಿ ಜಿಲ್ಲೆಗೆ ಮಂಗಳವಾರದಂದು ಶುಭ ಸುದ್ದಿ ಲಭ್ಯವಾಗಿದೆ. ಮಂಗಳವಾರದಂದು ಉಡುಪಿ ಜಿಲ್ಲೆಯಲ್ಲಿ ಯಾವುದೇ ಪಾಸಿಟಿವ್ ಪ್ರಕರಣಗಳಿಲ್ಲ. ಆ ಮೂಲಕ ಇಂದು ಜಿಲ್ಲೆಯ ಜನತೆ ನಿರಾಳರಾಗಿದ್ದಾರೆ.
ಉಡುಪಿ ಜಿಲ್ಲೆಯಲ್ಲಿ ಕಳೆದ ಕೆಲವು ದಿನಗಳಿಂದ ನಿರಂತರವಾಗಿ ಕೊರೊನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗುತ್ತಿದ್ದವು. ಬಹುತೇಕ ಮಹಾರಾಷ್ಟ್ರದಿಂದ ಮರಳಿದವರಲ್ಲಿ ಕೊರೊನಾ ಪಾಸಿಟಿವ್ ಪತ್ತೆಯಾಗುತ್ತಿತ್ತು. ಇದು ಜಿಲ್ಲಾಡಳಿ ಆರೋಗ್ಯ ಇಲಾಖೆಗೆ ತಲೆನೋವಾಗಿ ಪರಿಣಮಿಸಿತ್ತು. ಕೇವಲ ಮೂವರು ಮಾತ್ರವೇ ಸೋಂಕಿತರಿದ್ದ ಜಿಲ್ಲೆಯಲ್ಲಿ ಒಂದೇ ತಿಂಗಳಲ್ಲಿ ಒಂಬೈನೂರರ ಗಡಿದಾಟಿತ್ತು.
ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 947ಕ್ಕೆ ತಲುಪಿತ್ತು. ಸೋಮವಾರವೂ 45 ಮಂದಿಯಲ್ಲಿ ಪಾಸಿಟಿವ್ ಪತ್ತೆಯಾಗಿತ್ತು. ಆದರೆ, ಮಂಗಳವಾರದಂದು ಸೋಂಕು ನಿಯಂತ್ರಣಕ್ಕೆ ಬಂದಿದೆ. ಯಾವುದೇ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿಲ್ಲ.
ಈ ನಡುವೆ ಜಿಲ್ಲೆಯಲ್ಲಿ ಮಂಗಳವಾರದಂದು 103 ಮಂದಿ ಗುಣಮುಖರಾಗಿದ್ದು, ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದಾರೆ.
ಜುಲೈ 11ರಂದು ಕಾಪು ತಾಲೂಕು ಕೃಷಿಕ ಸಮಾಜದ ಚುನಾವಣೆ: ನಾಮಪತ್ರ ಸಲ್ಲಿಕೆಗೆ ಅವಕಾಶ ಉಡುಪಿ : ಕರ್ನಾಟಕ ಪ್ರದೇಶ ಕೃಷಿಕ…
ಧರ್ಮಸ್ಥಳ ಪ್ರಕರಣದ ಎಸ್‍ಐಟಿ ವರದಿ ಬಹಿರಂಗ ಮಾಡಲಿ : ಶಾಸಕ ವಿ.ಸುನಿಲ್ ಕುಮಾರ್ ಆಗ್ರಹ ಬೆಂಗಳೂರು : ಧರ್ಮಸ್ಥಳ ಪ್ರಕರಣದ…
ಡಿವೈಡರ್‌ಗೆ ಬೈಕ್ ಡಿಕ್ಕಿ : ಕೇರಳ ಮೂಲದ ಇಬ್ಬರು ನರ್ಸಿಂಗ್ ವಿದ್ಯಾರ್ಥಿಗಳು ಸಾವು ಬೆಂಗಳೂರು: ಡಿವೈಡರ್‌ಗೆ ಡಿಕ್ಕಿ ಹೊಡೆದ ಪರಿಣಾಮ…
ನನ್ನ ರಾಜಕೀಯ ಜೀವನದ ಮೂಲ ಉದ್ದೇಶ ಜನರ ಸೇವೆ.. ಅಧಿಕಾರ ಸಿಕ್ಕರೆ ಜನರ ಸೇವೆಗೆ ಬಳಸುತ್ತೇನೆ, ಸಿಗದಿದ್ದರೂ ಜನರ ಸೇವೆಯನ್ನು…
ಒಂದು ವಾಹನಕ್ಕೆ ದಿನಕ್ಕೆ 200 ಲೀಟರ್ ಮಾತ್ರ: ಡೀಸೆಲ್ ಮಾರಾಟ ಮಿತಿಗೊಳಿಸಿದ ಕೇಂದ್ರ ನವದೆಹಲಿ: ಡೀಸೆಲ್ ಮಾರಾಟಕ್ಕೆ ಕೇಂದ್ರ ಸರ್ಕಾರ…
ಮಂಗಳೂರು ಜಂಕ್ಷನ್ ರೈಲು ನಿಲ್ದಾಣದಿಂದ ಕೆಎಸ್‌ಆರ್‌ಟಿಸಿ ಬಸ್ ಸೇವೆ ಆರಂಭ ಮಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ (ಕೆಎಸ್‌ಆರ್‌ಟಿಸಿ)…