ಮಂಗಳೂರು : ಪ್ರವಾದಿ ಮುಹಮ್ಮದ್ ಅವರ ಜನ್ಮ ದಿನ ಮೀಲಾದುನ್ನಬಿ ಆಚರಣೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನವೆಂಬರ್ 20 ರಂದು ನಡೆಯಲಿರುವುದರಿಂದ ಅಂದು ಜಿಲ್ಲೆಯಲ್ಲಿ ಸರಕಾರಿ ರಜೆ ಘೋಷಿಸಲಾಗುವುದು ಎಂದು ನಗರಾಭಿವೃದ್ಧಿ ಮತ್ತು ದ.ಕ. ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ. ಖಾದರ್ ತಿಳಿಸಿದ್ದಾರೆ.
ಸರಕಾರಿ ರಜೆ ನವೆಂಬರ್ 21 ರಂದು ನಿಗದಿಯಾಗಿದ್ದು, ದಕ್ಷಿಣಕನ್ನಡದಲ್ಲಿ ಈದ ಮಿಲಾದ್ ನವೆಂಬರ್ 20 ಮಂಗಳವಾರ ಆಚರಿಸುವುದರಿಂದ ನವೆಂಬರ್ 21ರ ಸರಕಾರಿ ರಜೆಯನ್ನು ಬದಲಾಯಿಸಿ ನವೆಂಬರ್ 20ರಂದು ಶಾಲಾ ಕಾಲೇಜುಗಳಿಗೆ, ಸರಕಾರಿ ಕಚೇರಿಗಳಿಗೆ ರಜಾ ದಿನವನ್ನಾಗಿ ಪರಿಗಣಿಸಲು ಹಾಗೂ ನವೆಂಬರ್ 21 ರಂದು ಎಂದಿ ನಂತೆ ಕಾರ್ಯನಿರ್ವಹಿಸಲು ಆದೇಶ ಹೊರಡಿಸುವಂತೆ ಮುಖ್ಯಮಂತ್ರಿಗಳಿಗೆ ಮನವಿ ಮಾಡಲಾಗಿದೆ.
ಈ ಬಗ್ಗೆ ಕ್ರಮ ಕೈಗೊಳ್ಳಲು ಮುಖ್ಯಮಂತ್ರಿಗಳು ರಾಜ್ಯ ಸರಕಾರದ ಮುಖ್ಯ ಕಾರ್ಯದರ್ಶಿಗಳಿಗೆ ಸೂಚಿಸಿದ್ದಾರೆ. ಸೋಮವಾರ ಈ ಕುರಿತು ಸರಕಾರಿ ಆದೇಶ ಹೊರಡಿಸಲಾಗುವುದು ಎಂದು ಸಚಿವ ಯು.ಟಿ. ಖಾದರ್ ತಿಳಿಸಿದ್ದಾರೆ.
ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…
ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…
ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…
ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…
ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…
ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…