Featured

ಮಂಗಳೂರಲ್ಲಿ ನಡೆದ ಘಟನೆಯನ್ನುಸರಕಾರ ಗಂಭೀರವಾಗಿ ಪರಿಗಣಿಸಿದೆ ; ಯಾವುದೇ ಮುಲಾಜಿಲ್ಲದೇ ಕ್ರಮ ತೆಗೆದುಕೊಳ್ಳುತ್ತೇವೆ : ಜಿ.ಪರಮೇಶ್ವರ್‌ – vishwanews24

ದ.ಕ, ಉಡುಪಿ, ಶಿವಮೊಗ್ಗ ಜಿಲ್ಲೆಗಳನ್ನು ಸೂಕ್ಷ್ಮ ಪ್ರದೇಶಗಳಾಗಿ ಪರಿಗಣಿಸಿದ್ದೇವೆ : ಗೃಹ ಸಚಿವ ಜಿ.ಪರಮೇಶ್ವರ್‌

ಬೆಂಗಳೂರು : ದಕ್ಷಿಣ‌ ಕನ್ನಡ, ಉಡುಪಿ ಮತ್ತು ಶಿವಮೊಗ್ಗ ಜಿಲ್ಲೆಗಳನ್ನು ಸೂಕ್ಷ್ಮ‌ ಪ್ರದೇಶಗಳಾಗಿ ಪರಿಗಣಿಸಿ, ಸರಕಾರ ಕ್ರಮ ತೆಗೆದುಕೊಳ್ಳಲಿದೆ ಎಂದು ಗೃಹ ಸಚಿವ ಡಾ.‌ಜಿ.ಪರಮೇಶ್ವರ್‌ ಅವರು ಹೇಳಿದರು.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಂಗಳೂರಲ್ಲಿ ನಡೆದ ಘಟನೆಗೆ ಸಂಬಂಧಿಸಿದಂತೆ ಸರಕಾರ ಗಂಭೀರವಾಗಿ ಪರಿಗಣಿಸಿದೆ. ಯಾವುದೇ ಮುಲಾಜಿಲ್ಲದೇ ಕ್ರಮ ತೆಗೆದುಕೊಳ್ಳುತ್ತೇವೆ. ಪ್ರತಿಸಾರಿ ಈ ರೀತಿ ಆಗುತ್ತಿದ್ದರೆ ಸುಮ್ಮನೆ ಕೂರಲು ಆಗುವುದಿಲ್ಲ. ಕಾನೂನನ್ನು ಮತ್ತಷ್ಟು ಬಿಗಿ ಮಾಡುತ್ತೇವೆ ಎಂದರು.

ಕಳೆದ ಬಾರಿ ಘಟನೆ ನಡೆದಾಗ ಪರಿಸ್ಥಿತಿ ಅರ್ಥೈಸಿಕೊಂಡು, ಕೋಮು ಹಿಂಸೆ ನಿಗ್ರಹ ಕಾರ್ಯಪಡೆ ರಚಿಸಲು ಪರಿಶೀಲನೆ ಮಾಡಿ, ತಕ್ಷಣ ಜಾರಿಗೆ ಬರುವ ನಿಟ್ಟಿನಲ್ಲಿ ಸರಕಾರ ಆದೇಶ ಹೊರಡಿಸಿದೆ.‌

ಈ ಬಗ್ಗೆ ರಾಜ್ಯ ಪೊಲೀಸ್ ಮಹಾನಿರ್ದೇಶಕರು ಕ್ರಮ ತೆಗೆದುಕೊಳ್ಳುತ್ತಾರೆ. ದಕ್ಷಿಣ ಕನ್ನಡ, ಉಡುಪಿ, ಶಿವಮೊಗ್ಗ ಜಿಲ್ಲೆಗಳನ್ನು ಸೂಕ್ಷ್ಮ ಪ್ರದೇಶಗಳಾಗಿ ಪರಿಗಣಿಸುತ್ತೇವೆ. ಕೋಮು ಹಿಂಸೆಯನ್ನು ಹತ್ತಿಕ್ಕಲು, ಸರಕಾರ ಮುಲಾಜಿಲ್ಲದೆ ಕ್ರಮ ತೆಗೆದುಕೊಳ್ಳಲಿದೆ ಎಂದು‌ ತಿಳಿಸಿದರು.

ನಕ್ಸಲ್ ನಿಗ್ರಹ ಕಾರ್ಯಪಡೆಯಲ್ಲಿನ ಅರ್ಧ ಸಿಬ್ಬಂದಿಗಳನ್ನು ಕೋಮು ಹಿಂಸೆ ನಿಗ್ರಹ ಪಡೆಗೆ ನಿಯೋಜಿಸಲಾಗುವುದು. ಅವರಿಗೆ ಅಗತ್ಯ ಅಧಿಕಾರ, ಸವಲತ್ತುಗಳನ್ನು ನೀಡುತ್ತೇವೆ. ಮೂರು ಜಿಲ್ಲೆಗಳಲ್ಲಿ ಹೆಚ್ಚು ಗಮನ ಹರಿಸುತ್ತೇವೆ ಎಂದು ಹೇಳಿದರು.

ಮಂಗಳೂರಿನಲ್ಲಿ ನಡೆದ ಯುವಕನ ಹತ್ಯೆ ಪ್ರಕರಣದ ತನಿಖೆಯಲ್ಲಿ ಗಂಭೀರವಾದ ಮಾಹಿತಿ ಸಿಕ್ಕಿದೆ. ಅದರ ಆಧಾರದ ಮೇಲೆ‌ ಕ್ರಮ ತೆಗೆದುಕೊಳ್ಳುತ್ತೇವೆ. ಜನಪ್ರತಿನಿಧಿಗಳು ಶಾಂತಿ ನೆಲೆಸುವ ನಿಟ್ಟಿನಲ್ಲಿ ಸಹಕಾರ ಮಾಡಬೇಕು. ಪ್ರಚೋದನೆ ಮಾಡಲು‌ ಹೋದರೆ‌ ನಿಲ್ಲಿಲು ಹೇಗೆ ಸಾಧ್ಯ. ಧಾರ್ಮಿಕ ಮುಖಂಡರೊಂದಿಗೆ ಶಾಂತಿ ಸಭೆಗಳನ್ನು ಮಾಡಲು ಸೂಚನೆ ನೀಡಿದ್ದೇನೆ ಎಂದು ಹೇಳಿದರು.

Vishwa News 24

Recent Posts

ಮೈಸೂರು: ಕಾಲೇಜು ಕ್ಯಾಂಪಸ್‌ನಲ್ಲೇ ಹೃದಯಾಘಾತ ; ಕುಸಿದುಬಿದ್ದು ವಿದ್ಯಾರ್ಥಿ ಸಾವು – vishwanews24

ಮೈಸೂರು: ಕಾಲೇಜು ಕ್ಯಾಂಪಸ್‌ನಲ್ಲೇ ಹೃದಯಾಘಾತ ; ಕುಸಿದುಬಿದ್ದು ವಿದ್ಯಾರ್ಥಿ ಸಾವು ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನ ಖ್ಯಾತ ಮರಿಮಲ್ಲಪ್ಪ ಕಾಲೇಜು…

3 days ago

ಅಡ್ಡ ಮತದಾನ ಮೂಲಕ ಪಕ್ಷಕ್ಕೆ ಹಾಗೂ ಮೈತ್ರಿಗೆ ದ್ರೋಹ ಬಗೆದವರನ್ನು ಯಾವುದೇ ಕಾರಣಕ್ಕೂ ಕ್ಷಮಿಸುವುದಿಲ್ಲ : ವಿಜಯೇಂದ್ರ ಆಕ್ರೋಶ – vishwanews24

ಅಡ್ಡ ಮತದಾನ ಮೂಲಕ ಪಕ್ಷಕ್ಕೆ ಹಾಗೂ ಮೈತ್ರಿಗೆ ದ್ರೋಹ ಬಗೆದವರನ್ನು ಯಾವುದೇ ಕಾರಣಕ್ಕೂ ಕ್ಷಮಿಸುವುದಿಲ್ಲ : ವಿಜಯೇಂದ್ರ ಆಕ್ರೋಶ ಬೆಂಗಳೂರು:…

3 days ago

ಭಟ್ಕಳ ಲವ್ ಜಿಹಾದ್ ಆರೋಪ : ಯುವಕ ಅರೆಸ್ಟ್‌ – vishwanews24

ಭಟ್ಕಳ ಲವ್ ಜಿಹಾದ್ ಆರೋಪ : ಯುವಕ ಅರೆಸ್ಟ್‌ ಕಾರವಾರ: ಉತ್ತರ ಕನ್ನಡ  ಜಿಲ್ಲೆಯ ಭಟ್ಕಳದಲ್ಲಿ ಕಿಚ್ಚು ಹಚ್ಚಿದ ಹಿಂದೂ,…

3 days ago

ಪರಿಷತ್ ಚುನಾವಣೆಯಲ್ಲಿ ನಮಗೆ ಮತ ನೀಡಿದ ಬೇರೆ ಪಕ್ಷದ ವಿಶ್ವಾಸವನ್ನುನಾವು ಉಳಿಸಿಕೊಳ್ಳುತ್ತೇವೆ: ಡಿ.ಕೆ.ಶಿವಕುಮಾರ್‌ – vishwanews24

ಪರಿಷತ್ ಚುನಾವಣೆಯಲ್ಲಿ ನಮಗೆ ಮತ ನೀಡಿದ ಬೇರೆ ಪಕ್ಷದ ವಿಶ್ವಾಸವನ್ನುನಾವು ಉಳಿಸಿಕೊಳ್ಳುತ್ತೇವೆ: ಡಿ.ಕೆ.ಶಿವಕುಮಾರ್‌ ಬೆಂಗಳೂರು: ವಿಧಾನ ಪರಿಷತ್‌ ಚುನಾವಣೆಯಲ್ಲಿ ನಮ್ಮ…

3 days ago

ವಚನಾನಂದ ಸ್ವಾಮೀಜಿ ವಿರುದ್ಧ ಪೋಕ್ಸೋ ಪ್ರಕರಣ: ಜೂ. 30ಕ್ಕೆ ಮುಂದೂಡಿಕೆ – vishwanews24

ವಚನಾನಂದ ಸ್ವಾಮೀಜಿ ವಿರುದ್ಧ ಪೋಕ್ಸೋ ಪ್ರಕರಣ: ಜೂ. 30ಕ್ಕೆ ಮುಂದೂಡಿಕೆ ದಾವಣಗೆರೆ: ಹರಿಹರದ  ವಚನಾನಂದ ಸ್ವಾಮೀಜಿ ಪೋಕ್ಸೋ ಪ್ರಕರಣ ಆದೇಶವನ್ನು…

3 days ago

ವಿಟ್ಲ : ಲಾರಿಯಲ್ಲಿ ತಾಂತ್ರಿಕ ವೈಫಲ್ಯ – ಸರಿಪಡಿಸುವ ವೇಳೆ ಚಕ್ರಗಳ ಅಡಿಗೆ ಸಿಲುಕಿ ಚಾಲಕ ಸ್ಥಳದಲ್ಲೇ ಮೃತ್ಯು – vishwanews24

ವಿಟ್ಲ : ಲಾರಿಯಲ್ಲಿ ತಾಂತ್ರಿಕ ವೈಫಲ್ಯ - ಸರಿಪಡಿಸುವ ವೇಳೆ ಚಕ್ರಗಳ ಅಡಿಗೆ ಸಿಲುಕಿ ಚಾಲಕ ಸ್ಥಳದಲ್ಲೇ ಮೃತ್ಯು ವಿಟ್ಲ:…

3 days ago