ಮಂಗಳೂರು,: ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಟಿಬೆಟಿಯನ್ ಆಧ್ಯಾತ್ಮಿಕ ನಾಯಕ ದಲಾಯಿಲಾಮ ಅವರನ್ನು ಮಂಗಳೂರು ಉಪವಿಭಾಗಾಧಿಕಾರಿ ರವಿ ಚಂದ್ರ ನಾಯ್ಕ್, ಉಪ ಪೊಲೀಸ್ ಆಯುಕ್ತರಾದ ಅರುಣಾಂಶು ಗಿರಿ,ಲಕ್ಷ್ಮೀ ಗಣೇಶ್ ಅವರು ಜಿಲ್ಲಾಡಳಿತದ ಪರವಾಗಿ ಸ್ವಾಗತಿಸಿದರು. ವಿಮಾನ ನಿಲ್ದಾಣದ ಹೊರಗಡೆ ಟಿಬೇಟಿಯನ್ ಸಾಂಪ್ರದಾಯಿಕ ನೃತ್ಯದ ಮೂಲಕವೂ ಅವರನ್ನು ಸ್ವಾಗತಿಸಲಾಯಿತು.
ದಲಾಯಿಲಾಮ ಆಗಮನದ ಹಿನ್ನೆಲೆಯಲ್ಲಿ ವಿಮಾನ ನಿಲ್ದಾಣದಲ್ಲಿ ಬಿಗಿ ಬಂದೋಬಸ್ತ್ ಏರ್ಪಡಿಸಲಾಗಿತ್ತು. ನಗರದ ಖಾಸಗಿ ಹೋಟೆಲ್ ನಲ್ಲಿ ತಂಗಿರುವ ಅವರನ್ನು ಭಾರೀ ಭದ್ರತೆ ಯಲ್ಲಿ ಝೀರೋ ಟ್ರಾಫಿಕ್ ನಲ್ಲಿ ವಿಮಾನ ನಿಲ್ದಾಣದಿಂದ ನಗರಕ್ಕೆ ಕರೆ ತರಲಾಯಿತು.
ನಗರದ ಖಾಸಗಿ ಹೋಟೆಲ್ನಲ್ಲಿ ಅವರು ತಂಗಿದ್ದು, ಅದರ ಸುತ್ತ ಬಿಗಿ ಭದ್ರತೆ ಏರ್ಪಡಿಸಲಾಗಿದೆ. ಮೂರು ದಿನ ಮಂಗಳೂರುನಲ್ಲೇ ತಂಗಲಿರುವ ದಲೈಲಾಮಾ ಆ.30 ರಂದು ಫಾದರ್ ಮುಲ್ಲರ್ ಸಭಾಂಗಣದಲ್ಲಿ ನಡೆಯುವ ನಯನ ಅಖಿಲ ಭಾರತ ಕ್ಯಾಥೋಲಿಕ್ ಶಾಲಾ ಒಕ್ಕೂಟದ ರಾಷ್ಟ್ರೀಯ ಸಮಾವೇಶದಲ್ಲಿ ಭಾಗವಹಿಸುವರು. ಆ.31 ರಂದು ಬೆಂಗಳೂರಿಗೆ ತೆರಳುವರು.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…