ಮಂಗಳೂರಿಗೆ ಆಗಮಿಸಿದ ಪ್ರಧಾನಿ ಮೋದಿ  – vishwanews24

Featured, ದಕ್ಷಿಣ ಕನ್ನಡ

ಮಂಗಳೂರಿಗೆ ಆಗಮಿಸಿದ ಪ್ರಧಾನಿ ಮೋದಿ ; ಸ್ವಾಗತಿಸಿದ ಸಚಿವ ದಿನೇಶ್ ಗುಂಡೂರಾವ್

ಮಂಗಳೂರು: ಉಡುಪಿ ಶ್ರೀಕೃಷ್ಣ ಮಠದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಭಾಗವಹಿಸುವುದಕ್ಕಾಗಿ ಪ್ರಧಾನಿ ನರೇಂದ್ರ ಮೋದಿ ಯವರು ಶುಕ್ರವಾರ ಬೆಳಗ್ಗೆ ಮಂಗಳೂರಿಗೆ ಆಗಮಿಸಿದ್ದಾರೆ.

ಹೊಸದಿಲ್ಲಿಯಿಂದ ಭಾರತೀಯ ವಾಯುಪಡೆ ವಿಮಾನದಲ್ಲಿ ಬೆಳಗ್ಗೆ 10:25ಕ್ಕೆ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಪ್ರಧಾನ ಮಂತ್ರಿಯವರನ್ನು, ರಾಜ್ಯ ಸರಕಾರದ ಪರವಾಗಿ ಆರೋಗ್ಯ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಸ್ವಾಗತಿಸಿದರು.

PM Modi | ಮಂಗಳೂರಿಗೆ ಪ್ರಧಾನಿ ಮೋದಿ ಆಗಮನ

ಈ ಸಂದರ್ಭದಲ್ಲಿ ಶಾಸಕರಾದ ರಾಜೇಶ್ ನಾಯಕ್, ಭಾಗೀರಥಿ ಮುರುಳ್ಯ, ಗ್ರೇಟರ್ ಬೆಂಗಳೂರು ಆಯುಕ್ತ ಮಹೇಶ್ವರ ರಾವ್, ಮಂಗಳೂರು ನಗರ ಪೊಲೀಸ್ ಆಯುಕ್ತ ಸುಧೀರ್ ಕುಮಾರ್ ರೆಡ್ಡಿ, ಜಿಲ್ಲಾಧಿಕಾರಿ ಎಚ್.ವಿ. ದರ್ಶನ್ ಮತ್ತಿತರರು ಉಪಸ್ಥಿತರಿದ್ದು, ಪ್ರಧಾನಿಯವರನ್ನು ಸ್ವಾಗತಿಸಿದರು.

ಶ್ರೀಲಂಕಾದಲ್ಲಿ ಭಾರೀ ಮಳೆಯಿಂದ ಪ್ರವಾಹ, ಭೂಕುಸಿತ; ಮೃತರ ಸಂಖ್ಯೆ 56ಕ್ಕೆ ಏರಿಕೆ – vishwanews24

ಬಳಿಕ ಪ್ರಧಾನ ಮಂತ್ರಿ ವಾಯುಪಡೆಯ ಹೆಲಿಕಾಪ್ಟರ್ ನಲ್ಲಿ ಉಡುಪಿಗೆ ತೆರಳಿದರು.

Leave a Reply