Featured

ಮಂಗಳೂರಿನಲ್ಲಿರುವ ರಾಜ್ಯಾಧ್ಯಕ್ಷರು, ಸಂಸದ ಶ್ರೀ ನಳಿನ್ ಕುಮಾರ್ ಕಟೀಲ್ ರವರ ಕಚೇರಿ ಮುಂದೆ ಪಿಎಫ್ಐ ಪ್ರತಿಭಟನೆ ದೇಶ ದ್ರೋಹಿ ಕೆಲಸ : ಉಡುಪಿ ಜಿಲ್ಲಾ ಬಿಜೆಪಿ ಖಂಡನೆ -vishwanews24

ಮಂಗಳೂರಿನಲ್ಲಿರುವ ರಾಜ್ಯಾಧ್ಯಕ್ಷರು, ಸಂಸದ ಶ್ರೀ ನಳಿನ್ ಕುಮಾರ್ ಕಟೀಲ್ ರವರ ಕಚೇರಿ ಮುಂದೆ ಪಿಎಫ್ಐ ಪ್ರತಿಭಟನೆ ದೇಶ ದ್ರೋಹಿ ಕೆಲಸ : ಉಡುಪಿ ಜಿಲ್ಲಾ ಬಿಜೆಪಿ ಖಂಡನೆ 

ಉಡುಪಿ : 26/12/2020 ವಿದೇಶಕ್ಕೆ ಪರಾರಿಯಾಗಲು ಕೇರಳದ ತಿರುವನಂತಪುರ ಅಂತರಾಷ್ಟ್ರೀಯ ವಿಮಾನನಿಲ್ದಾಣಕ್ಕೆ ತೆರಳುತ್ತಿದ್ದ ಪಿಎಫ್ಐ ನಾಯಕ ರವೂಫ್ ಶರೀಫ್ ಬಂಧನವನ್ನು ಖಂಡಿಸಿ ಪಿಎಫ್ಐ ಸಂಘಟನೆಯು ಮಂಗಳೂರಿನಲ್ಲಿರುವ ಬಿಜೆಪಿ ರಾಜ್ಯಾಧ್ಯಕ್ಷರಾದ ಶ್ರೀ ನಳಿನ್ ಕುಮಾರ್ ಕಟೀಲ್ ಅವರ ಸಂಸದೀಯ ಕಚೇರಿ ಮುಂದೆ ನಡೆಸಿರುವ ಮೂರ್ಖತನದ ಪ್ರತಿಭಟನೆಯನ್ನು ತೀವ್ರವಾಗಿ ಖಂಡಿಸುತ್ತಾ, ಅನೇಕ ದೇಶವಿರೋಧಿ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿರುವ ಮೂಲಭೂತವಾದಿ ಮತ್ತು ಪ್ರತ್ಯೇಕತಾವಾದಿ ಪಿಎಫ್ಐ ಸಂಘಟನೆಯನ್ನು ಕೂಡಲೇ ನಿಷೇಧಿಸಲು ಸೂಕ್ತ ಕ್ರಮ ಕೈಗೊಳ್ಳುವಂತೆ ರಾಜ್ಯ ಸರಕಾರವನ್ನು ಒತ್ತಾಯಿಸುವುದಾಗಿ ಉಡುಪಿ ಜಿಲ್ಲಾ ಬಿಜೆಪಿ ಅಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ತಿಳಿಸಿದ್ದಾರೆ. ದೇಶವಿರೋಧಿ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡು ಶಿಕ್ಷಾರ್ಹರಾದ ಅಪರಾಧಿ ಹಿನ್ನೆಲೆಯ ಈ ವ್ಯಕ್ತಿಗಳು ಮತ್ತು ಸಂಘಟನೆಗಳು ದೇಶದ ಹಿತದೃಷ್ಟಿಯಿಂದ ಜಾರಿ ನಿರ್ದೇಶನಾಲಯ ಕೈಗೊಂಡಿರುವ ತನಿಖೆಯ ಕ್ರಮಗಳನ್ನು ಪ್ರತಿಭಟಿಸುವ ನೈತಿಕ ಮತ್ತು ಪ್ರಜಾಸತ್ತಾತ್ಮಕ ನೆಲೆಯನ್ನು ಹೊಂದಿರದೆ ದೆವ್ವಗಳು ಪವಿತ್ರ ಗ್ರಂಥಗಳನ್ನು ಉಲ್ಲೇಖಿಸಿದಂತ ಹಾಸ್ಯಾಸ್ಪದ ಘಟನೆ ಇದಾಗಿದೆ ಎಂದಿದ್ದಾರೆ. ಪ್ರತಿಭಟಿಸಿದ ಎಲ್ಲಾ ವ್ಯಕ್ತಿಗಳು ಶಿಕ್ಷಾರ್ಹರು ಮತ್ತು ಅವರೆಲ್ಲರ ವಿರುದ್ಧ ಶಿಸ್ತಿನ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದ್ದಾರೆ.
ಪಿಎಫ್ಐ ಸಂಘಟನೆಯ ತಥಾಕಥಿತ ಅಧ್ಯಕ್ಷ ರವೂಫ್ ಶರೀಫ್ ಮೂಲಕ ಒಮನ್ ಹಾಗೂ ಖತಾರ್ಗಳಿಂದ 2 ಕೋಟಿಗಿಂತ ಅಧಿಕ ಹಣ ಬ್ಯಾಂಕ್ ಖಾತೆಗೆ ವರ್ಗಾವಣೆಯಾಗಿದ್ದು, ಈ ಹಣವನ್ನು ದೇಶವಿರೋಧಿ ಕೃತ್ಯಗಳಿಗೆ ಬಳಸಲಾಗುತ್ತಿತ್ತು. ಇದನ್ನು ಗಮನಿಸಿಯೇ ಜಾರಿ ನಿರ್ದೇಶನಾಲಯವು (ಇಡಿ) ಅವರನ್ನು ಬಂಧಿಸಿದೆ ಎಂದು ಕುಯಿಲಾಡಿ ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ಇತ್ತೀಚೆಗೆ ನಡೆದ ಡಿ.ಜೆ.ಹಳ್ಳಿ, ಕೆ.ಜಿ.ಹಳ್ಳಿಯ ವಿಧ್ವಂಸಕ ಕೃತ್ಯಗಳು, ಮಂಗಳೂರಿನಲ್ಲಿ ನಡೆದ ದೇಶವಿರೋಧಿ ಗಲಭೆs, ಈ ಹಿಂದೆ ಸಿದ್ದರಾಮಯ್ಯ ಅವರ ಸರಕಾರ ಇರುವ ಸಂದರ್ಭದಲ್ಲಿ ಸಂಘ ಪರಿವಾರದ 25 ಹಿಂದೂಪರ ಕಾರ್ಯಕರ್ತರ ಹತ್ಯೆ, ಕೊರೊನಾ ವಾರಿಯರ್ಸ್ಗಳಾದ ಆಶಾ ಕಾರ್ಯಕರ್ತೆಯರು ಮತ್ತು ಪೊಲೀಸರ ಮೇಲೆ ಬೆಂಗಳೂರಿನ ಚಾಮರಾಜಪೇಟೆ ವಿಧಾನಸಭಾ ಕ್ಷೇತ್ರದಲ್ಲಿ ಹಲ್ಲೆ ಹಾಗೂ ಪೌರತ್ವ ತಿದ್ದುಪಡಿ ಕಾಯ್ದೆ ಜಾರಿಗೊಳಿಸಿದ ಕೇಂದ್ರ ಸರಕಾರದ ವಿರುದ್ಧ ನಡೆಸಿದ ಪ್ರತಿಭಟನೆಗಳಲ್ಲೂ ಪಿಎಫ್ಐ ಸಂಘಟನೆಯ ನೇರ ಕೈವಾಡವಿದ್ದು ಅಕ್ರಮವಾಗಿ ಗಲಭೆ ಪ್ರಚೋದಿಸಲು ರೂ. 120 ಕೋಟಿ ಹಣವನ್ನು ಖರ್ಚು ಮಾಡಿರುವುದಾಗಿ ತಿಳಿದುಬಂದಿರುತ್ತದೆ. ಈ ರಾಷ್ಟçವಿರೋಧಿ ಕೃತ್ಯಗಳಲ್ಲಿ ತೊಡಗಿರುವ ಮತ್ತು ಸಮಾಜದಲ್ಲಿ ಶಾಂತಿ ಮತ್ತು ಸುವ್ಯವಸ್ಥೆಯನ್ನು ಕದಡುವ ಪ್ರತ್ಯೇಕತಾವಾದಿ ಸಂಘಟನೆಯಾದ ಪಿಎಫ್ಐಯನ್ನು ಕೂಡಲೇ ನಿಷೇಧಿಸುವುದು ದೇಶದ ಹಿತದೃಷ್ಟಿಯಿಂದ ಸೂಕ್ತ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.
ದೇಶಾದ್ಯಂತ ಭಯೋತ್ಪಾದಕ ಕೃತ್ಯಗಳು, ರಾಷ್ಟçವಿರೋಧಿ ಚಟುವಟಿಕೆಗಳು, ಮೂಲಭೂತವಾದಿ ಮತ್ತು ಪ್ರತ್ಯೇಕತಾವಾದಿ ಸಂಘಟನೆಗಳೊAದಿಗೆ ಕೈಜೋಡಿಸಿ ವ್ಯವಸ್ಥಿತ ಸಂಚನ್ನು ರೂಪಿಸುತ್ತಿರುವ ಪಿಎಫ್ಐ ಸಂಘಟನೆ ಶತ್ರು ರಾಷ್ಟçಗಳೊಂದಿಗೆ ಸಂಬಂಧ ಇಟ್ಟುಕೊಂಡು ದೇಶದ ಅಂತರಿಕ ಭದ್ರತೆ ಛಿದ್ರಗೊಳಿಸುತ್ತಿರುವ ಹಿನ್ನೆಲೆಯಲ್ಲಿ ಪಿಎಫ್ಐ ಸಂಘಟನೆಯ ನಿಷೇಧ ಅನಿವಾರ್ಯ ಎಂದು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Press release

Vishwa News 24

Recent Posts

ಮಹಿಳೆಯರನ್ನು ಸಬಲೀಕರಣ ಮಾಡುವ ಕೆಲಸವನ್ನ ನಮ್ಮ ಸರಕಾರ ಪ್ರಾಮಾಣಿಕವಾಗಿ ಮಾಡುತ್ತಿದೆ : ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ – vishwanews24

ಗ್ಯಾರಂಟಿ ಯೋಜನೆಗಳಿಂದ ಮಹಿಳಾ ಸಬಲೀಕರಣ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಬೆಂಗಳೂರು: ಮಹಿಳೆಯರನ್ನು ಸಬಲೀಕರಣ ಮಾಡುವ ಕೆಲಸವನ್ನು ನಮ್ಮ ಸರಕಾರ ಪ್ರಾಮಾಣಿಕವಾಗಿ…

3 hours ago

ಒಣಗಿದ ದಾಸವಾಳ ನುಂಗಿ ಆರೂವರೆ ತಿಂಗಳ ಮಗು ಉಸಿರುಗಟ್ಟಿ ಸಾವು – vishwanews24

ಒಣಗಿದ ದಾಸವಾಳ ನುಂಗಿ ಆರೂವರೆ ತಿಂಗಳ ಮಗು ಉಸಿರುಗಟ್ಟಿ ಸಾವು ಮೈಸೂರು: ಒಣಗಿದ ದಾಸವಾಳ ಹೂನುಂಗಿ ಮಗು ಉಸಿರುಗಟ್ಟಿ ಸಾವನ್ನಪ್ಪಿದ…

4 hours ago

ಏ. 2ರಂದು ಕುಂದಾಪುರ ಭಂಡಾರ್‌ಕಾರ್ಸ್ ಕಾಲೇಜಿನಲ್ಲಿ ಜಿಲ್ಲಾ ಮಟ್ಟದ ಉದ್ಯೋಗ ಮೇಳ – vishwanews24

ಏ. 2ರಂದು ಕುಂದಾಪುರ ಭಂಡಾರ್‌ಕಾರ್ಸ್ ಕಾಲೇಜಿನಲ್ಲಿ ಜಿಲ್ಲಾ ಮಟ್ಟದ ಉದ್ಯೋಗ ಮೇಳ ಉಡುಪಿ : ಜಿಲ್ಲಾಡಳಿತ, ಜಿಪಂ, ಕೌಶಲ್ಯಾಭಿವೃದ್ಧಿ, ಉದ್ಯಮ…

4 hours ago

ಅಡುಗೆ ಅನಿಲದ ಅಭಾವ – ತಾತ್ಕಾಲಿಕವಾಗಿ ಸೌದೆ ಒಲೆ ಬಳಸುವಂತೆ ಸಚಿವ ಕೆ.ಹೆಚ್. ಮುನಿಯಪ್ಪ ಮನವಿ – vishwanews24

ಅಡುಗೆ ಅನಿಲದ ಅಭಾವ - ತಾತ್ಕಾಲಿಕವಾಗಿ ಸೌದೆ ಒಲೆ ಬಳಸುವಂತೆ ಸಚಿವ ಕೆ.ಹೆಚ್. ಮುನಿಯಪ್ಪ ಮನವಿ ಬೆಂಗಳೂರು : ಗಲ್ಫ್…

4 hours ago

ತೊಕ್ಕೊಟ್ಟು : ಆರಿಫ್ ಕೊಲೆ ಪ್ರಕರಣ ; ಆರು ಆರೋಪಿಗಳು ಭಾಗಿ – ಸಿಸಿಬಿ ಎಸಿಪಿ ತಂಡದಿಂದ ಮುಂದಿನ ತನಿಖೆ : ಪೊಲೀಸ್ ಆಯುಕ್ತ – vishwanews24

ತೊಕ್ಕೊಟ್ಟು : ಆರಿಫ್ ಕೊಲೆ ಪ್ರಕರಣ ; ಆರು ಆರೋಪಿಗಳು ಭಾಗಿ - ಸಿಸಿಬಿ ಎಸಿಪಿ ತಂಡದಿಂದ ಮುಂದಿನ ತನಿಖೆ…

4 hours ago

ಕಾಪು : ಇಲಿ ಪಾಷಾಣ ಸೇವಿಸಿ ವ್ಯಕ್ತಿ ಆತ್ಮಹತ್ಯೆ – vishwanews24

ಕಾಪು : ಇಲಿ ಪಾಷಾಣ ಸೇವಿಸಿ ವ್ಯಕ್ತಿ ಆತ್ಮಹತ್ಯೆ ಕಾಪು: ಉಳಿಯಾರಗೋಳಿ ಗ್ರಾಮದ ನೀಲಾಧರ ಬಂಗೇರ (58) ಇಲಿ ಪಾಷಾಣ…

5 hours ago