ಮಂಗಳೂರು: ನಗರದಲ್ಲಿ ಸ್ಥಾಪಿಸಲು ಉದ್ದೇಶಿಸಿರುವ ಮಾಹಿತಿ ತಂತ್ರಜ್ಞಾನ ಉದ್ಯಾನ (ಐಟಿ ಪಾರ್ಕ್)ದ ಕಾಮಗಾರಿಗೆ ಡಿ. 15ರಿಂದ ಬಿಡ್ ತೆರೆಯಲಾಗುತ್ತದೆ ಎಂದು ಐಟಿ-ಬಿಟಿ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದರು.
ಬಿಜೆಪಿಯ ಡಾ| ಭರತ್ ಶೆಟ್ಟಿ ಪ್ರಶ್ನೆಗೆ ಉತ್ತರಿಸಿದ ಅವರು, ಮಂಗಳೂರಿನ ದೇರೆಬೈಲು (ಬ್ಲೂಬೆರಿ ಹಿಲ್ಸ್ ರಸ್ತೆ) ಗ್ರಾಮದ ಸರ್ವೇ ನಂ.129.1ಎ ಮತ್ತು 113/2ರಲ್ಲಿ 3.285 ಎಕರೆಯಲ್ಲಿ ಐಟಿ ಪಾರ್ಕ್ ನಿರ್ಮಿಸಲು ಟೆಂಡರ್ ಆಹ್ವಾನಿಸಲಾಗಿದೆ. ಡಿ. 15ರಿಂದ ಬಿಡ್ ತೆರೆಯಲಾಗುವುದು ಎಂದರು.
ವಾಣಿಜ್ಯ ಕಚೇರಿ ಟೆಕ್ ಪಾರ್ಕ್‌ಗಾಗಿ ಸಾರ್ವಜನಿಕ ಖಾಸಗಿ ಸಹಭಾಗಿತ್ವ ಮಾದರಿಯಲ್ಲಿ ಇದನ್ನು ಕೈಗೆತ್ತಿಕೊಳ್ಳಲು ಉದ್ದೇಶಿಸಿದ್ದು, ವಿನ್ಯಾಸ, ನಿರ್ಮಾಣ, ಹಣಕಾಸು ಕಾರ್ಯಾಚರಣೆ ಮತ್ತು ವರ್ಗಾವಣೆ (ಡಿಬಿಎಫ್‌ಒಟಿ)ಗಾಗಿ 30 ವರ್ಷಗಳ ಗುತ್ತಿಗೆ ನೀಡಿದ್ದು, ಹೆಚ್ಚುವರಿಯಾಗಿ 30 ವರ್ಷಗಳ ಕಾಲ ಗುತ್ತಿಗೆ ಅವಧಿ ವಿಸ್ತರಿಸುವ ಅವಕಾಶವನ್ನೂ ಕಲ್ಪಿಸಲಾಗಿದೆ ಎಂದು ಮಾಹಿತಿ ನೀಡಿದರು.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…