Featured

ಮಂಗಳೂರಿನಲ್ಲಿ ತೈಲ ಸಂಗ್ರಹಾಗಾರ ಸ್ಥಾಪನೆಗೆ ONGC ಅನುಮೋದನೆ – vishwanews24

ಮಂಗಳೂರಿನಲ್ಲಿ ತೈಲ ಸಂಗ್ರಹಾಗಾರ ಸ್ಥಾಪನೆಗೆ ONGC ಅನುಮೋದನೆ

ನವದೆಹಲಿ: ಇರಾನ್-ಅಮೆರಿಕ ಸಂಘರ್ಷದಿಂದ  ಜಾಗತಿಕ ತೈಲ ಮಾರುಕಟ್ಟೆಯಲ್ಲಿ ತಲ್ಲಣ ಸೃಷ್ಟಿಯಾಗಿರುವ ಹೊತ್ತಿನಲ್ಲೇ, ಭಾರತ ತನ್ನ ಇಂಧನ ಭದ್ರತೆಗೆ ಮಹತ್ತರ ಕವಚ ತೊಡಿಸಿದೆ. ಯುದ್ಧದ ಸಂದರ್ಭದಲ್ಲೂ ದೇಶದಲ್ಲಿ ತೈಲ ಕೊರತೆಯಾಗದಂತೆ ತಡೆಯಲು ಮಂಗಳೂರಿನಲ್ಲಿ  ಮತ್ತೊಂದು ಬೃಹತ್ ತುರ್ತು ತೈಲ ಸಂಗ್ರಹಾಗಾರ( ಸ್ಥಾಪಿಸಲು ಮುಂದಾಗಿದೆ.

ಪ್ರಮುಖ ಸರ್ಕಾರಿ ಸ್ವಾಮ್ಯದ ತೈಲ ಸಂಸ್ಥೆಯಾದ ಆಯಿಲ್ ಅಂಡ್ ನ್ಯಾಚುರಲ್ ಗ್ಯಾಸ್ ಕಾರ್ಪೊರೇಷನ್ (ONGC) ದೇಶದ ತುರ್ತು ಅಗತ್ಯಗಳಿಗಾಗಿ ಮಂಗಳೂರಿನಲ್ಲಿ 1.75 MMT ಸಾಮರ್ಥ್ಯದ ತೈಲ ಸಂಗ್ರಹಾಗಾರ (SPR) ವಿಸ್ತರಣೆಗೆ ತಾತ್ವಿಕ ಅನುಮೋದನೆ ನೀಡಿದೆ.

ಇತ್ತೀಚಿನ ಜಾಗತಿಕ ರಾಜಕೀಯ ವಿದ್ಯಮಾನಗಳು ಹಾಗೂ ಇರಾನ್ ಯುದ್ಧದ ಆತಂಕದ ಹಿನ್ನೆಲೆಯಲ್ಲಿ ಜಾಗತಿಕ ತೈಲ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗುವ ಸಾಧ್ಯತೆ ಇರುವುದರಿಂದ ಭಾರತವು ತನ್ನ ತುರ್ತು ತೈಲ ಸಂಗ್ರಹಣಾ ಸಾಮರ್ಥ್ಯವನ್ನು ಹೆಚ್ಚಿಸಲು ಮುಂದಾಗಿದೆ.

ಭಾರತದಲ್ಲಿ ಇದುವರೆಗೆ ಇಂತಹ ತೈಲ ಸಂಗ್ರಹಾಗಾರಗಳನ್ನು ಸರ್ಕಾರದ ಸ್ವಾಮ್ಯದ ಇಂಡಿಯನ್ ಸ್ಟ್ರಾಟೆಜಿಕ್ ಪೆಟ್ರೋಲಿಯಂ ರಿಸರ್ವ್ಸ್ ಲಿಮಿಟೆಡ್(ISPRL) ಸಂಸ್ಥೆ ನಿರ್ಮಿಸುತ್ತಿತ್ತು. ಆದರೆ ಇತಿಹಾಸದಲ್ಲೇ ಮೊದಲ ಬಾರಿಗೆ ಒಎನ್‌ಜಿಸಿ ತನ್ನ ಸ್ವಂತ ಸಂಪನ್ಮೂಲಗಳನ್ನು ಬಳಸಿ ಇಂತಹ ಬೃಹತ್ ತುರ್ತು ತೈಲ ಸಂಗ್ರಹಾಗಾರವನ್ನು ನಿರ್ಮಿಸುತ್ತಿದೆ.

ಪ್ರಸ್ತುತ ಮಂಗಳೂರು, ಪಾದೂರು (ಉಡುಪಿ) ಮತ್ತು ವಿಶಾಖಪಟ್ಟಣಂನಲ್ಲಿ ಒಟ್ಟು 5.33 MMT ಸಾಮರ್ಥ್ಯದ ಭೂಗತ ತೈಲ ಸಂಗ್ರಹಾಗಾರಗಳಿವೆ. ಈಗ ಮಂಗಳೂರಿನಲ್ಲಿ ಹೊಸದಾಗಿ ನಿರ್ಮಾಣವಾಗಲಿರುವ 1.75 MMT ಸಾಮರ್ಥ್ಯದ ಸಂಗ್ರಹಾಗಾರವು ದೇಶದ ತುರ್ತು ತೈಲ ಬ್ಯಾಕಪ್ ಅನ್ನು ಮತ್ತಷ್ಟು ಬಲಪಡಿಸಲಿದೆ. ಇದು ಸುಮಾರು 1.28 ಕೋಟಿ ಬ್ಯಾರೆಲ್ ಕಚ್ಚಾ ತೈಲಕ್ಕೆ ಸಮಾನವಾಗಿದೆ.

ಮಂಗಳೂರಿನಲ್ಲಿ ಈಗಾಗಲೇ ದಿನಕ್ಕೆ 3 ಲಕ್ಷ ಬ್ಯಾರೆಲ್ ತೈಲ ಶುದ್ಧೀಕರಿಸುವ ಬೃಹತ್ ರಿಫೈನರಿಯನ್ನು ಎಂಆರ್‌ಪಿಎಲ್ ಹೊಂದಿದ್ದು, ಹೊಸ ಸಂಗ್ರಹಾಗಾರವು ಇದರೊಂದಿಗೆ ಸಂಯೋಜನೆಗೊಳ್ಳಲಿದೆ. ಅಲ್ಲದೆ ಇದರ ವಾಣಿಜ್ಯ ಬಳಕೆಗೆ ಮುಕ್ತಾವಕಾಶ ನೀಡುವಂತೆ ಒಎನ್‌ಜಿಸಿ ಸರ್ಕಾರಕ್ಕೆ ಕೋರಿದೆ.

ಭಾರತವು ಜಗತ್ತಿನಲ್ಲೇ 3ನೇ ಅತಿ ದೊಡ್ಡ ಕಚ್ಚಾ ತೈಲ ಆಮದುದಾರ ದೇಶವಾಗಿದ್ದು, ಮಂಗಳೂರಿನ ಈ ವಿಸ್ತರಣಾ ಯೋಜನೆಯು ದೇಶದ ಇಂಧನ ಸುರಕ್ಷತೆಗೆ ದಿಕ್ಸೂಚಿಯಾಗಲಿದೆ ಎಂದು ತಜ್ಞರು ಅಭಿಪ್ರಾಯಪಟ್ಟಿದ್ದಾರೆ.

ಷೇರು ಜಿಗಿತ
ಈ ಮಹತ್ವದ ನಿರ್ಧಾರದ ಬೆನ್ನಲ್ಲೇ ಒಎನ್‌ಜಿಸಿ ಅಂಗಸಂಸ್ಥೆಯಾದ ಮಂಗಳೂರು ರಿಫೈನರಿ ಅಂಡ್ ಪೆಟ್ರೋಕೆಮಿಕಲ್ಸ್ ಲಿಮಿಟೆಡ್ (MRPL) ಷೇರುಗಳು ಹೂಡಿಕೆದಾರರ ಆಕರ್ಷಣೆಗೆ ಪಾತ್ರವಾಗಿದ್ದು, ಶುಕ್ರವಾರದ ವಹಿವಾಟಿನಲ್ಲಿ ಬರೋಬ್ಬರಿ 12.17 ರೂ.(ಶೇ.9) ರಷ್ಟು ಜಿಗಿತ ಕಂಡಿವೆ. ಮಾರುಕಟ್ಟೆ ವಿಶ್ಲೇಷಕರ ಪ್ರಕಾರ, ಎಂಆರ್‌ಪಿಎಲ್ ಷೇರು 165 ರೂ. ಮಟ್ಟವನ್ನು ದಾಟಿದರೆ ಮುಂಬರುವ ದಿನಗಳಲ್ಲಿ ಇದು 190 ರಿಂದ 200 ರೂ. ರವರೆಗೆ ತಲುಪುವ ಸಾಧ್ಯತೆ ಇದೆ.

ತೈಲ ಸಂಗ್ರಹಗಾರ ಯಾಕೆ ಬೇಕು?
ವಿಶ್ವದಲ್ಲೇ ತುರ್ತು ಸಂದರ್ಭಕ್ಕೆಂದು ತೈಲ ಸಂಗ್ರಹ ಮಾಡುವ ಸಾಮರ್ಥ್ಯ ಹೊಂದಿರುವ ದೇಶಗಳ ಪೈಕಿ ಚೀನಾ ಮೊದಲ ಸ್ಥಾನದಲ್ಲಿದೆ. ಚೀನಾದ 1,200 ದಶಲಕ್ಷ ಬ್ಯಾರೆಲ್‌ ತೈಲವನ್ನು ಸಂಗ್ರಹ ಮಾಡುವ ಸಾಮರ್ಥ್ಯ ಹೊಂದಿದರೆ ಅಮೆರಿಕ 714 ದಶಲಕ್ಷ ಬ್ಯಾರೆಲ್‌ ತೈಲವನ್ನು ಸಂಗ್ರಹ ಮಾಡುವ ಸಾಮರ್ಥ್ಯವನ್ನು ಹೊಂದಿದೆ.

ಸದ್ಯ ಭಾರತ 5.33 ದಶಲಕ್ಷ ಬ್ಯಾರೆಲ್‌ ಟನ್‌ ತೈಲವನ್ನು ಸಂಗ್ರಹಿಸುವ ಸಾಮರ್ಥ್ಯವನ್ನು ಹೊಂದಿದ್ದು, ಈ ತೈಲವನ್ನು ತುರ್ತು ಸಂದರ್ಭದಲ್ಲಿ 9 ದಿನಗಳ ಕಾಲ ಮಾತ್ರ ಬಳಸಬಹುದು. ಮುಂದಿನ 10 ವರ್ಷಗಳಲ್ಲಿ ಭಾರತ 15 ದಶಲಕ್ಷ ಬ್ಯಾರೆಲ್‌ ಟನ್‌ ತೈಲವನ್ನು ಸಂಗ್ರಹಿಸಲು ಯೋಜಿಸಿದೆ. ಇಂಟರ್‌ನ್ಯಾಷನಲ್‌ ಎನರ್ಜಿ ಏಜೆನ್ಸಿ(ಐಇಎ) ತನ್ನ ಸದಸ್ಯ ರಾಷ್ಟ್ರಗಳು 90 ದಿನಗಳ ಕಾಲ ತೈಲ ಸಂಗ್ರಹವನ್ನು ಹೊಂದಿರಬೇಕೆಂದು ಹೇಳಿದೆ.

Vishwa News 24

Recent Posts

ವಿಟ್ಲ:  ಕಾರು ಮತ್ತು ದ್ವಿಚಕ್ರ ವಾಹನ ಭೀಕರ ಅಪಘಾತ; ಸವಾರ ಮೃತ್ಯು – vishwanews24

ವಿಟ್ಲ:  ಕಾರು ಮತ್ತು ದ್ವಿಚಕ್ರ ವಾಹನ ಭೀಕರ ಅಪಘಾತ; ಸವಾರ ಮೃತ್ಯು ವಿಟ್ಲ: ಮಿತ್ತೂರು ಸಮೀಪದ ಪರ್ಲೋಟು ಎಂಬಲ್ಲಿ ಸಂಭವಿಸಿದ…

12 hours ago

ಉಡುಪಿ: ಸೆ. 4ರಂದು ಶ್ರೀಕೃಷ್ಣ ಜನ್ಮಾಷ್ಟಮಿ ; ಸೆ.5ರಂದು ವಿಟ್ಲಪಿಂಡಿ ಉತ್ಸವ – vishwanews24

ಉಡುಪಿ: ಸೆ. 4ರಂದು ಶ್ರೀಕೃಷ್ಣ ಜನ್ಮಾಷ್ಟಮಿ ; ಸೆ.5ರಂದು ವಿಟ್ಲಪಿಂಡಿ ಉತ್ಸವ ಉಡುಪಿ: ಉಡುಪಿ ಶ್ರೀಕೃಷ್ಣಮಠ ಪರ್ಯಾಯ ಶಿರೂರು ಮಠದ…

12 hours ago

ರೇಣುಕಾಸ್ವಾಮಿ ಕೊಲೆ ಪ್ರಕರಣ : ಆರೋಪಿ ಪ್ರದೋಷ್ ಮಾಫಿ ಸಾಕ್ಷಿ ಅರ್ಜಿ ಅಂಗೀಕರಿಸಿದ ಕೋರ್ಟ್ – vishwanews24

ರೇಣುಕಾಸ್ವಾಮಿ ಕೊಲೆ ಪ್ರಕರಣ : ಪ್ರದೋಷ್ ಮಾಫಿ ಸಾಕ್ಷಿ ಅರ್ಜಿ ಅಂಗೀಕರಿಸಿದ ಕೋರ್ಟ್ ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ…

12 hours ago

ಜವಾಬ್ದಾರಿಗಳನ್ನು ಹೊಸ ಪೀಳಿಗೆಗೆ ಹಸ್ತಾಂತರಿಸುವ ಸಮಯ ಬಂದಿದೆ : ನಿತಿನ್ ಗಡ್ಕರಿ – vishwanews24

ಜವಾಬ್ದಾರಿಗಳನ್ನು ಹೊಸ ಪೀಳಿಗೆಗೆ ಹಸ್ತಾಂತರಿಸುವ ಸಮಯ ಬಂದಿದೆ : ನಿತಿನ್ ಗಡ್ಕರಿ ಮುಂಬೈ: ಈ ಹಿಂದೆ ಮಾಡುತ್ತಿದ್ದಷ್ಟು ಕೆಲಸವನ್ನು ಇನ್ನು…

12 hours ago

ಹಬ್ಬಗಳ ಹಿನ್ನೆಲೆ : ದಕ್ಷಿಣ ಕನ್ನಡ ಪೊಲೀಸರ ಕಟ್ಟುನಿಟ್ಟಿನ ಮಾರ್ಗಸೂಚಿ ಬಿಡುಗಡೆ – vishwanews24

ಹಬ್ಬಗಳ ಹಿನ್ನೆಲೆ : ದಕ್ಷಿಣ ಕನ್ನಡ ಪೊಲೀಸರ ಕಟ್ಟುನಿಟ್ಟಿನ ಮಾರ್ಗಸೂಚಿ ಬಿಡುಗಡೆ ರಾತ್ರಿ 11:30 ಗಂಟೆಯ ನಂತರ ಮೆರವಣಿಗೆ ,…

13 hours ago

ಸೆ. 1 ರಿಂದ 10 ರವರೆಗೆ ಬೃಹತ್ ಪಾದಯಾತ್ರೆ : ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ – vishwanews24

ಸೆ. 1 ರಿಂದ 10 ರವರೆಗೆ ಬೃಹತ್ ಪಾದಯಾತ್ರೆ : ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಬೆಂಗಳೂರು : ರಾಜ್ಯ ಸರ್ಕಾರದ…

13 hours ago