ಮಂಗಳೂರು: ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಇಂದು ಮಂಗಳೂರಿನಲ್ಲಿ ಚುನಾವಣಾ ಪ್ರಚಾರ ಮಾಡಿದರು.
ನಗರದ ಕೇಂದ್ರ ಮೈದಾನದಲ್ಲಿ ಬಿಜೆಪಿ ಪಕ್ಷದ ಲೋಕಸಭಾ ಚುನಾವಣೆಯ ಪ್ರಚಾರದ ಬೃಹತ್ ಬಹಿರಂಗ ’ಸಂಕಲ್ಪ ಸಮಾವೇಶ ’ ಆರಂಭಗೊಂಡಿದ್ದು ಪ್ರಧಾನಿ ” ನಿಮ್ಮ ಚೌಕಿದಾರ್ ನರೇಂದ್ರ ಮೋದಿಯ ನಮಸ್ಕಾರಗಳು ” ಎಂದು ಕನ್ನಡದಲ್ಲಿ ಹೇಳಿ ಮಾತು ಆರಂಭಿಸಿದ ಮೋದಿ ಇಡೀ ಮಂಗಳೂರು ನಗರ ಕೇಸರಿಮಯವಾಗಿದ್ದು ಜನರ ಪ್ರೀತಿಗೆ ನಾನು ಆಭಾರಿ ಎಂದು ಹೇಳಿದರು.
ವಿಶ್ವ ವೇದಿಕೆಯಲ್ಲಿ ಭಾರತದ ಧ್ವನಿ ಗಟ್ಟಿಗೊಳ್ಳುತ್ತಿದ್ದು, ಇದಕ್ಕೆ ಪ್ರತಿಯೊಬ್ಬ ಮತದಾರನಿಗೂ ಧನ್ಯವಾದ ಅರ್ಪಿಸುವುದಾಗಿ ಪ್ರಧಾನಿ ಮೋದಿ ಹೇಳಿದರು.
21ನೇ ಶತಮಾನದ ಬಳಿಕ ನವಭಾರತದ ಚಹರೆ ಹೇಗಿರಬೇಕು ಎಂಬುದನ್ನು ನಿರ್ಧರಿಸಲು 2019ರ ಲೋಕಸಭೆ ಚುನಾವಣೆ ಅತ್ಯಂತ ಮಹತ್ವದ್ದು ಎಂದು ಮೋದಿ ಬಣ್ಣಿಸಿದರು.
ರಾಜ್ಯದ ಕಾಂಗ್ರೆಸ್-ಜೆಡಿಎಸ್ ಪರಿವಾರವಾದದ ರಾಜಕಾರಣ ಮಾಡಿದರೆ, ಬಿಜೆಪಿ ರಾಷ್ಟ್ರವಾದದ ರಾಜಕಾರಣ ಮಾಡುತ್ತದೆ ಎಂದು ಮೋದಿ ಮೈತ್ರಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡರು.
ಕುಟುಂಬ ಸದಸ್ಯರನ್ನೆಲ್ಲಾ ಚುನಾವಣೆಗೆ ನಿಲ್ಲಿಸಿರುವ ಕಾಂಗ್ರೆಸ್-ಜೆಡಿಎಸ್ ಗೆ , ಓರ್ವ ಚಾಯ್ ವಾಲಾ ಪ್ರಧಾನಿಯಾಗಿರುವುದನ್ನು ನೋಡಲಾಗುತ್ತಿಲ್ಲ ಎಂದು ಪ್ರಧಾನಿ ಹರಿಹಾಯ್ದರು.
ತುಷ್ಠೀಕರಣವನ್ನೇ ರಾಜಕಾರಣದ ಅಡಿಪಾಯ ಮಾಡಿಕೊಂಡಿರುವ ಕಾಂಗ್ರೆಸ್-ಜೆಡಿಎಸ್ ಗೆ ವಿರುದ್ಧವಾಗಿ ಬಿಜೆಪಿ ಸಬ್ ಕಾ ಸಾಥ್ ಸಬ್ ಕಾ ವಿಕಾಸ್ ಅಡಿಪಾಯದ ಮೇಲೆ ರಾಜಕಾರಣ ಮಾಡುತ್ತದೆ ಎಂದು ಮೋದಿ ಹೇಳಿದರು.
ಕಾಂಗ್ರೆಸ್-ಜೆಡಿಎಸ್ ನದ್ದು ವಂಶೋದಯ ರಾಜಕಾರಣ ಮಾಡಿದರೆ ಬಿಜೆಪಿ ಅಂತ್ಯೋದಯದ ರಾಜಕಾರಣ ಮಾಡುತ್ತದೆ ಎಂದು ಪ್ರಧಾನಿ ಹೇಳಿದರು.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…