Featured

ಮಂಗಳೂರಿನಲ್ಲಿ ಮತ್ತೆ ತಲ್ವಾರ್ ಸದ್ದು : ಹಿಂದು ಮುಖಂಡನ ಹತ್ಯೆಗೆ ಯತ್ನ

ಮಂಗಳೂರು: ಮೂಡಬಿದ್ರೆಯಲ್ಲಿ ತಲ್ವಾರ್ ದಾಳಿ ನಡೆಸಿ ನೆತ್ತರು ಹರಿಸಿದ ಬೆನಲ್ಲೇ ಪ್ರತಿಕಾರವಾಗಿ ಮತ್ತೊಂದು ತಲ್ವಾರ್ ದಾಳಿ ನಡೆದಿದೆ.

ಕೈಕಂಬದ ಸೂರಲ್ಪಾಡಿಯಲ್ಲಿನೆನ್ನೆ ಸಂಜೆ ವೇಳೆ ಪೊಳಲಿ ನಿವಾಸಿ ಹರೀಶ್ ಶೆಟ್ಟಿ (38) ಮೇಲೆ ತಲ್ವಾರ್ ನಿಂದ ದುಷ್ಕರ್ಮಿಗಳು ದಾಳಿ ನಡೆಸಿದ್ದಾರೆ.

ಮೂಡುಬಿದ್ರೆಯ ಪ್ರಶಾಂತ್ ಪೂಜಾರಿ ಹತ್ಯೆ ಆರೋಪಿ ಇಮ್ತಿಯಾಜ್ ಎಂಬಾತನನ್ನು ಕೊಲೆ ಮಾಡಲು ಯತ್ನಿಸಲಾಗಿತ್ತು. ಈ ವೇಳೆ ಇಮ್ತಿಯಾಜ್ ತಲೆ ಹಾಗೂ ಕಾಲಿಗೆ ತಲ್ವಾರ್ ನಿಂದ ಹಲ್ಲೆ ನಡೆಸಲಾಗಿತ್ತು. ಘಟನೆಯಲ್ಲಿ ತೀವ್ರ ಪ್ರಮಾಣದಲ್ಲಿ ಗಾಯಗೊಂಡಿದ್ದ ಇಮ್ತಿಯಾಜ್‍ರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಇಮ್ತಿಯಾಜ್ ಮೇಲಿನ ಹಲ್ಲೆಯ ಪ್ರತಿಕಾರವಾಗಿ ಸಂಜೆ ವೇಳೆಗೆ ಹರೀಶ್ ಶೆಟ್ಟಿ ಮೇಲೆ ತಲವಾರ್ ದಾಳಿ ನಡೆಸಲಾಗಿದ್ಯಾ ಎಂಬ ಶಂಕೆ ವ್ಯಕ್ತವಾಗಿದೆ.

ಹಿಂದೂ ಸಂಘಟನೆಯಲ್ಲಿ ಗುರುತಿಸಿಕೊಂಡಿದ್ದ ಹರೀಶ್ ಶೆಟ್ಟಿ, ಕೈಕಂಬದಲ್ಲಿ ಬಸ್ ಟೈಂ ಕೀಪರ್ ಆಗಿದ್ದ ಕೆಲಸ ಮಾಡುತ್ತಿದ್ದರು. ಸದ್ಯ ದಾಳಿಯಲ್ಲಿ ಗಾಯಗೊಂಡಿರುವ ಹರೀಶ್ ಶೆಟ್ಟಿ ಅವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು, ಆಸ್ಪತ್ರೆಗೆ ಪೊಲೀಸ್ ಕಮೀಷನರ್ ಟಿ.ಆರ್ ಸುರೇಶ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ವಿಷಯ ತಿಳಿಯ ಹಿಂದೂ ಸಂಘಟನೆಯ ಕಾರ್ಯಕರ್ತರು ಆಸ್ಪತ್ರೆಗೆ ಕಡೆ ಧಾವಿಸಿದ್ರು. ಇದೇ ವೇಳೆ ಶಾಸಕರಾದ ಉಮಾನಾಥ ಕೊಟ್ಯಾನ್, ವೇದವ್ಯಾಸ್ ಕಾಮತ್ ಹಾಗೂ ಭರತ್ ಶೆಟ್ಟಿ ಎಜೆ ಆಸ್ಪತ್ರೆಗೆ ಆಗಮಿಸಿ ಹರೀಶ್ ಶೆಟ್ಟಿ ಬಳಿ ಮಾಹಿತಿ ಪಡೆದ್ರು. ಹತ್ಯೆಗೆ ಯತ್ನಿಸಿದ ದುಷ್ಕರ್ಮಿಗಳನ್ನ ಶೀಘ್ರ ಬಂಧಿಸುವಂತೆ ಪೊಲೀಸ್‌ ಇಲಾಖೆಗೆ ಸೂಚಿಸಿದ್ದಾರೆ. ಈ ಬಗ್ಗೆ ಬಜ್ಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮುನ್ನೆಚ್ಚರಿಕೆ ಕ್ರಮವಾಗಿ ದಕ್ಷಿಣ ಕನ್ನಡ ಜಿಲ್ಲೆಯ ಸೂಕ್ಷ್ಮ ಪ್ರದೇಶದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಕಲ್ಪಿಸಲಾಗಿದೆ.

Vishwa News 24

Recent Posts

ಉಡುಪಿ : ಹೊಟೇಲ್ ಮುಚ್ಚುವ ಭೀತಿ ; ಜಿಲ್ಲೆಯ ಆರ್ಥಿಕತೆಯ ಮೇಲೆ ಗಂಭೀರ ಪರಿಣಾಮ : ತಲ್ಲೂರು ಶಿವರಾಮ ಶೆಟ್ಟಿ – vishwanews24

ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…

3 days ago

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ – vishwanews24

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…

3 days ago

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ – vishwanews24

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…

3 days ago

ಉಡುಪಿ : ಗ್ಯಾಸ್ ಹೆಸರಿನಲ್ಲಿ ಸೈಬರ್ ವಂಚನೆ: ಅಪರಿಚಿತರಿಂದ ಬರುವ ಲಿಂಕ್‌, ಎಪಿಕೆ ಫೈಲ್‌ ಓಪನ್ ಮಾಡುವ ಮುನ್ನ ಎಚ್ಚರ : ಎಸ್ಪಿ ಮನವಿ – vishwanews24

ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…

3 days ago

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ ‘ಗೀತಾ’ – vishwanews24

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…

3 days ago

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿಯ ಬಂಧನ – vishwanews24

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…

3 days ago