ಮಂಗಳೂರು: ಮೂಡಬಿದ್ರೆಯಲ್ಲಿ ತಲ್ವಾರ್ ದಾಳಿ ನಡೆಸಿ ನೆತ್ತರು ಹರಿಸಿದ ಬೆನಲ್ಲೇ ಪ್ರತಿಕಾರವಾಗಿ ಮತ್ತೊಂದು ತಲ್ವಾರ್ ದಾಳಿ ನಡೆದಿದೆ.
ಕೈಕಂಬದ ಸೂರಲ್ಪಾಡಿಯಲ್ಲಿನೆನ್ನೆ ಸಂಜೆ ವೇಳೆ ಪೊಳಲಿ ನಿವಾಸಿ ಹರೀಶ್ ಶೆಟ್ಟಿ (38) ಮೇಲೆ ತಲ್ವಾರ್ ನಿಂದ ದುಷ್ಕರ್ಮಿಗಳು ದಾಳಿ ನಡೆಸಿದ್ದಾರೆ.
ಮೂಡುಬಿದ್ರೆಯ ಪ್ರಶಾಂತ್ ಪೂಜಾರಿ ಹತ್ಯೆ ಆರೋಪಿ ಇಮ್ತಿಯಾಜ್ ಎಂಬಾತನನ್ನು ಕೊಲೆ ಮಾಡಲು ಯತ್ನಿಸಲಾಗಿತ್ತು. ಈ ವೇಳೆ ಇಮ್ತಿಯಾಜ್ ತಲೆ ಹಾಗೂ ಕಾಲಿಗೆ ತಲ್ವಾರ್ ನಿಂದ ಹಲ್ಲೆ ನಡೆಸಲಾಗಿತ್ತು. ಘಟನೆಯಲ್ಲಿ ತೀವ್ರ ಪ್ರಮಾಣದಲ್ಲಿ ಗಾಯಗೊಂಡಿದ್ದ ಇಮ್ತಿಯಾಜ್‍ರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಇಮ್ತಿಯಾಜ್ ಮೇಲಿನ ಹಲ್ಲೆಯ ಪ್ರತಿಕಾರವಾಗಿ ಸಂಜೆ ವೇಳೆಗೆ ಹರೀಶ್ ಶೆಟ್ಟಿ ಮೇಲೆ ತಲವಾರ್ ದಾಳಿ ನಡೆಸಲಾಗಿದ್ಯಾ ಎಂಬ ಶಂಕೆ ವ್ಯಕ್ತವಾಗಿದೆ.
ಹಿಂದೂ ಸಂಘಟನೆಯಲ್ಲಿ ಗುರುತಿಸಿಕೊಂಡಿದ್ದ ಹರೀಶ್ ಶೆಟ್ಟಿ, ಕೈಕಂಬದಲ್ಲಿ ಬಸ್ ಟೈಂ ಕೀಪರ್ ಆಗಿದ್ದ ಕೆಲಸ ಮಾಡುತ್ತಿದ್ದರು. ಸದ್ಯ ದಾಳಿಯಲ್ಲಿ ಗಾಯಗೊಂಡಿರುವ ಹರೀಶ್ ಶೆಟ್ಟಿ ಅವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು, ಆಸ್ಪತ್ರೆಗೆ ಪೊಲೀಸ್ ಕಮೀಷನರ್ ಟಿ.ಆರ್ ಸುರೇಶ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ವಿಷಯ ತಿಳಿಯ ಹಿಂದೂ ಸಂಘಟನೆಯ ಕಾರ್ಯಕರ್ತರು ಆಸ್ಪತ್ರೆಗೆ ಕಡೆ ಧಾವಿಸಿದ್ರು. ಇದೇ ವೇಳೆ ಶಾಸಕರಾದ ಉಮಾನಾಥ ಕೊಟ್ಯಾನ್, ವೇದವ್ಯಾಸ್ ಕಾಮತ್ ಹಾಗೂ ಭರತ್ ಶೆಟ್ಟಿ ಎಜೆ ಆಸ್ಪತ್ರೆಗೆ ಆಗಮಿಸಿ ಹರೀಶ್ ಶೆಟ್ಟಿ ಬಳಿ ಮಾಹಿತಿ ಪಡೆದ್ರು. ಹತ್ಯೆಗೆ ಯತ್ನಿಸಿದ ದುಷ್ಕರ್ಮಿಗಳನ್ನ ಶೀಘ್ರ ಬಂಧಿಸುವಂತೆ ಪೊಲೀಸ್ ಇಲಾಖೆಗೆ ಸೂಚಿಸಿದ್ದಾರೆ. ಈ ಬಗ್ಗೆ ಬಜ್ಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮುನ್ನೆಚ್ಚರಿಕೆ ಕ್ರಮವಾಗಿ ದಕ್ಷಿಣ ಕನ್ನಡ ಜಿಲ್ಲೆಯ ಸೂಕ್ಷ್ಮ ಪ್ರದೇಶದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಕಲ್ಪಿಸಲಾಗಿದೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…