ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್‌ಪೋರ್ಟ್ ಸೇವೆಯ ಸಮಸ್ಯೆ ನಿವಾರಿಸಲು ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಬೇಕು ಎಂದು ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಕಾರ್ಮಿಕ ಘಟಕದ ಅಧ್ಯಕ್ಷ ಲಾರೆನ್ಸ್ ಡಿಸೋಜಾ ಕೇಂದ್ರ ಸರ್ಕಾರವನ್ನು ಒತ್ತಾಯಿಸಿದ್ದಾರೆ.
ಅವರು ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ನಡೆಸಿದ ಪತ್ರಿಕಾಗೋಷ್ಠಿಯಲ್ಲಿ ಈ ಬಗ್ಗೆ ಮಾತನಾಡಿ , ಮಂಗಳೂರಿನ ಪಾಸ್‌ಪೋರ್ಟ್ ಸೇವಾ ಕೇಂದ್ರಕ್ಕೆ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು ಹಾಗೂ ಹಾಸನ ಸೇರಿದಂತೆ ಹಲವು ಜಿಲ್ಲೆಗಳಿಂದ ದಿನಕ್ಕೆ ಸರಾಸರಿ 600 ಅರ್ಜಿದಾರರು ಆಗಮಿಸುತ್ತಾರೆ. ಆದರೆ ಸಿಬ್ಬಂದಿ ಕೊರತೆ, ಸೀಮಿತ ಸ್ಥಳಾವಕಾಶ, ಆಸನ ಹಾಗೂ ಮೂಲಸೌಕರ್ಯಗಳ ಕೊರತೆಯಿಂದ ಅರ್ಜಿದಾರರು ಗಂಟೆಗಟ್ಟಲೆ ಕಾಯಬೇಕಾಗಿದೆ ಎಂದು ಅವರು ಆರೋಪಿಸಿದರು.
ಸುಮಾರು 2,500ರಿಂದ 2,800 ಚದರ ಅಡಿ ಪ್ರದೇಶದಲ್ಲಿರುವ ಕೇಂದ್ರದಲ್ಲಿ ದಿನಕ್ಕೆ 600 ಅರ್ಜಿಗಳ ಒತ್ತಡವಿದೆ. ವೃದ್ಧರು, ಮಕ್ಕಳು ಹಾಗೂ ಮಹಿಳೆಯರು ಕೂಡ ತೊಂದರೆ ಅನುಭವಿಸುತ್ತಿದ್ದಾರೆ. ಜೆರಾಕ್ಸ್ ಕೇಂದ್ರದಲ್ಲಿ ಡಿಜಿಟಲ್ ಪಾವತಿ ವ್ಯವಸ್ಥೆಯೂ ಇಲ್ಲ ಎಂದು ಅವರು ದೂರಿದರು.
ಕರ್ನಾಟಕದಲ್ಲಿ ಒಂದೇ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿ ಇರುವುದರಿಂದ ಹೆಚ್ಚಿನ ಹೊರೆ ಬೀಳುತ್ತಿದೆ. ಹೀಗಾಗಿ ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿ ಸ್ಥಾಪಿಸಿ, ಸಿಬ್ಬಂದಿ ಹಾಗೂ ಮೂಲಸೌಕರ್ಯ ಹೆಚ್ಚಿಸಬೇಕು . ದಕ್ಷಿಣ ಕನ್ನಡ ಜಿಲ್ಲೆಯ ಸಂಸದರು ಈ ಬಗ್ಗೆ ಗಮನ ಹರಿಸಬೇಕೆಂದು ಅವರು ಒತ್ತಾಯಿಸಿದರು .
ಪತ್ರಿಕಾಗೋಷ್ಠಿಯಲ್ಲಿ ಕಾಂಗ್ರೆಸ್ ಮುಖಂಡರಾದ ಶುಭಾಷ್ ಚಂದ್ರ, ವಹಾಬ್, ಪ್ರಕಾಶ್ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…