ಮಂಗಳೂರಿನಲ್ಲಿ ವಿಶೇಷ ಸಂಪುಟ ಸಭೆ: ಕರಾವಳಿ ಜಿಲ್ಲೆಗಳ ಸಮಗ್ರ ಅಭಿವೃದ್ಧಿಗೆ ವಿಶೇಷ ಅನುದಾನ ನೀಡುವಂತೆ ಸರ್ಕಾರಕ್ಕೆ ಜೆಪಿ ಹೆಗ್ಡೆ ಮನವಿ – vishwanews24
ಮಂಗಳೂರಿನಲ್ಲಿ ವಿಶೇಷ ಸಂಪುಟ ಸಭೆ: ಕರಾವಳಿ ಜಿಲ್ಲೆಗಳ ಸಮಗ್ರ ಅಭಿವೃದ್ಧಿಗೆ ವಿಶೇಷ ಅನುದಾನ ನೀಡುವಂತೆ ಸರ್ಕಾರಕ್ಕೆ ಜೆಪಿ ಹೆಗ್ಡೆ ಮನವಿ
ಉಡುಪಿ: ಮಂಗಳೂರಿನಲ್ಲಿ ವಿಶೇಷ ಸಂಪುಟ ಸಭೆ ಆಯೋಜಿಸಿರುವ ಹಿನ್ನಲೆಯಲ್ಲಿ ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ ಜಿಲ್ಲೆಗಳ ಭಾಷೆ, ಕಲೆ, ಶಿಕ್ಷಣ, ಉದ್ಯೋಗ, ಮೀನುಗಾರಿಕೆ, ಐತಿಹಾಸಿಕ ಮತ್ತು ಧಾರ್ಮಿಕ ಪ್ರವಾಸೋದ್ಯಮ ಹಾಗೂ ಮೂಲಭೂತ ಸೌಕರ್ಯಗಳ ಸಮಗ್ರ ಅಭಿವೃದ್ಧಿಗೆ ಹೆಚ್ಚಿನ ಅನುದಾನ ಮಂಜೂರು ಮಾಡುವಂತೆ ಸರ್ಕಾರಕ್ಕೆ ಮಾಜಿ ಸಂಸದರಾದ ಕೆ ಜಯಪ್ರಕಾಶ್ ಹೆಗ್ಡೆ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರಿಗೆ ಮನವಿ ಸಲ್ಲಿಸಿದ್ದಾರೆ.
ಸೆ. 17 ರಿಂದ 19 ರವರೆಗೆ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ದಕ್ಷಿಣ ಕನ್ನಡ ಜಿಲ್ಲಾ ಪ್ರವಾಸ – vishwanews24
ಕರಾವಳಿ ಭಾಗದಲ್ಲಿ ಹಲವಾರು ದ್ವೀಪಗಳು, ಕಡಲತೀರಗಳು, ಸುಂದರ ಪ್ರಕೃತಿ ತಾಣಗಳು ಹಾಗೂ ಐತಿಹಾಸಿಕ ಮತ್ತು ಧಾರ್ಮಿಕ ಸ್ಥಳಗಳಿದ್ದರೂ, ಅಗತ್ಯ ಮೂಲಭೂತ ಸೌಕರ್ಯಗಳ ಕೊರತೆಯಿಂದ ನಿರೀಕ್ಷಿತ ಮಟ್ಟದಲ್ಲಿ ಪ್ರವಾಸಿಗರನ್ನು ಆಕರ್ಷಿಸಲು ಸಾಧ್ಯವಾಗುತ್ತಿಲ್ಲ. ಪ್ರವಾಸೋದ್ಯಮ ಮೂಲಸೌಕರ್ಯ ಅಭಿವೃದ್ಧಿಪಡಿಸುವುದರಿಂದ ಸ್ಥಳೀಯ ಯುವಕರಿಗೆ ಉದ್ಯೋಗಾವಕಾಶಗಳು ಸೃಷ್ಟಿಯಾಗುವುದರೊಂದಿಗೆ ಆರ್ಥಿಕ ಸಬಲೀಕರಣಕ್ಕೂ ನೆರವಾಗಲಿದೆ ಎಂದು ಮನವಿಯಲ್ಲಿ ತಿಳಿಸಲಾಗಿದೆ.
