Featured

ಮಂಗಳೂರಿನಲ್ಲಿ ಸ್ಥಾಪನೆಯಾಗಲಿದೆ ‘ಕ್ಷಿಪ್ರ ಕಾರ್ಯಪಡೆ ನೆಲೆ’ ; ಹಿಂಸಾಚಾರ ಮತ್ತು ಗುಂಪು ಘರ್ಷಣೆಗಳನ್ನು ನಿಯಂತ್ರಣ ಮಾಡಲು ಕೇಂದ್ರ ಸರ್ಕಾರದಿಂದ ಮಹತ್ವದ ನಿರ್ಧಾರ

ನವದೆಹಲಿ, : ಕರ್ನಾಟಕದ ಮಂಗಳೂರು ಸೇರಿದಂತೆ ದೇಶದ ಐದು ನಗರಗಳಲ್ಲಿ ಹೊಸದಾಗಿ ಕ್ಷಿಪ್ರ ಕಾರ್ಯಪಡೆ ನೆಲೆಗಳು ಸ್ಥಾಪನೆಯಾಗಲಿವೆ. ಕೇಂದ್ರ ಸರ್ಕಾರವು ಕಳೆದ ಜನವರಿಯಲ್ಲಿಯೇ ಆರ್ ಎ ಎಫ್ ನ ಐದು ಹೊಸ ಬೆಟಾಲಿಯನ್ ಗಳಿಗೆ ಅನುಮೋದನೆ ನೀಡಿತ್ತು.

ಕೋಮುಗಲಭೆ ಸೇರಿದಂತೆ ಕಾನೂನು ಸುವ್ಯವಸ್ಥೆ ಹದಗೆಟ್ಟಾಗ ಶಾಂತಿ, ಸುವ್ಯವಸ್ಥೆ ಕಾಪಾಡುವಲ್ಲಿ ಮಹತ್ವದ ಪಾತ್ರ ವಹಿಸುವ, ಕೇಂದ್ರ ಸರಕಾರದ ಅಧೀನದಲ್ಲಿರುವ ಕ್ಷಿಪ್ರ ಕಾರ್ಯಪಡೆ(ಆರ್ ಎ ಎಫ್)ಯು ಕರ್ನಾಟಕದ ಮಂಗಳೂರು ಸಹಿತ ದೇಶದ ಐದು ನಗರಗಳಲ್ಲಿ ಹೊಸದಾಗಿ ಸ್ಥಾಪನೆಯಾಗಲಿದ್ದು, ರಾಜ್ಯದಲ್ಲಿಯೇ ಮೊದಲನೇ ಆರ್ ಎ ಎಫ್ ನೆಲೆ ಇದಾಗಲಿದೆ..

ಈಗ ಈ ಬೆಟಾಲಿಯಾನ್ ಯಾವ್ಯಾವ ಸ್ಥಳಗಳಲ್ಲಿ ಸ್ಥಾಪನೆ ಮಾಡಲಾಗುತ್ತಿದೆ ಎಂಬ ಮಾಹಿತಿಯನ್ನು ಕೇಂದ್ರ ಸರ್ಕಾರ ಹೊರಹಾಕಿದೆ. ಹೀಗಾಗಿ ಈ 5 ಕ್ಷಿಪ್ರ ಕಾರ್ಯಪಡೆ ನೆಲೆ ಸೇರಿಸಿದರೆ ದೇಶದಲ್ಲಿ ಒಟ್ಟಾರೆ 15 ನೆಲೆಗಳು ಸ್ಥಾಪನೆಯಾದಂತೆ ಆಗುತ್ತದೆ.

ಕರ್ನಾಟಕದ ಮಂಗಳೂರು, ಪ್ರಧಾನಿ ನರೇಂದ್ರ ಮೋದಿ ಪ್ರತಿನಿಧಿಸುವ ಉತ್ತರಪ್ರದೇಶದ ವಾರಾಣಸಿ, ರಾಜಸ್ಥಾನದ ಜೈಪುರ, ಬಿಹಾರ ಹಾಜಿಪುರ ಮತ್ತು ಹರಿಯಾಣದ ನುಹ್ ಜಿಲ್ಲೆಗಳಲ್ಲಿ ಹೊಸ ಆರ್‌ಎಎಫ್ ಘಟಕ ಪ್ರಾರಂಭವಾಗಲಿದೆ. ಇದರ ಕಚೇರಿ ಸ್ಥಾಪನೆಗಾಗಿ ಎರಡು ವರ್ಷಗಳ ಹಿಂದೆಯೇ ನಗರದ ಹೊರವಲಯದಲ್ಲಿರುವ ಬಜಪೆ ಮತ್ತು ಮರವೂರಿನಲ್ಲಿ ಜಾಗವನ್ನು ಗುರುತಿಸಿ ಪ್ರಸ್ತಾವನೆಯನ್ನು ಸರಕಾರಕ್ಕೆ ಸಲ್ಲಿಸಲಾಗಿತ್ತು.

ಆರ್ ಎ ಎಫ್ ಅಂದರೆ ರ್ಯಾಪಿಡ್ ಆಕ್ಷನ್ ಫೋರ್ಸ್ ಅಥವಾ ಕ್ಷಿಪ್ರ ಕಾರ್ಯಪಡೆ ಎಂದು ಕರೆಸಿಕೊಳ್ಳುವ ಇದು ಕೇಂದ್ರ ಮೀಸಲು ಪೊಲೀಸ್ ಪಡೆಯ ಭಾಗ. ಆರ್ ಎ ಎಫ್ ನ ಪ್ರತಿ ನೆಲೆಯಲ್ಲೂ ಒಂದು ಸಾವಿರ ಯೋಧರ ತಂಡವಿರುತ್ತದೆ. ಇವರ ಬಳಿ ಆಕ್ಷನ್ ಗನ್ ಹೊಗೆ ಚಿಮ್ಮಿಸುವ ಗ್ರೇನೆಡ್ ಸೇರಿ ಹಿಂಸಾಚಾರ ನಿಯಂತ್ರಣಕ್ಕೆ ಬೇಕಾದ ಉಪಕರಣವಿರುತ್ತದೆ. ಇಲ್ಲಿಯವರೆಗೂ ದೇಶದಲ್ಲಿ ಒಟ್ಟು 10 ಆರ್‌ಎಎಫ್ ತುಕಡಿಗಳಿವೆ. ಪ್ರತಿ ತುಕಡಿಯಲ್ಲಿ 1,000 ಸಿಬ್ಬಂದಿಗಳಿದ್ದು, ಅವರು ಅತ್ಯಾಧುನಿಕ ತಾಂತ್ರಿಕ ಉಪಕರಣಗಳು, ಮಾರಕವಲ್ಲದ ಶಸ್ತ್ರಾಸ್ತ್ರಗಳು, ಹೊಗೆಸೂಸುವ ಗ್ರೆನೇಡ್ ಗಳು ಹಾಗೂ ಇನ್ನೂ ಮುಂತಾದ ತುರ್ತು ಶಸ್ತ್ರಾಸ್ತ್ರಗಳನ್ನು ಹೊಂದಿರುತ್ತಾರೆ.

ರ್ಯಾಪಿಡ್ ಆಕ್ಷನ್ ಫೋರ್ಸ್ (ಆರ್ ಎ ಎಫ್) ಇರುವುದೇ ಹಿಂಸಾಚಾರ ಮತ್ತು ಗುಂಪು ಘರ್ಷಣೆಗಳ ನಿಯಂತ್ರಣ ಮಾಡುವುದು. ನೀಲಿ ಬಣ್ಣದಿಂದ ಕೂಡಿದ ಸಮವಸ್ತ್ರ ಧರಿಸುವ ಈ ಪಡೆ ಹಿಂಸಾಚಾರ ನಿಯಂತ್ರಿಸುವ ವಿಚಾರದಲ್ಲಿ ಪರಿಣಿತರಾಗಿರುತ್ತಾರೆ. ಇದಲ್ಲದೆ ನೈಸರ್ಗಿಕ ವಿಕೋಪದಗಳಾದ ಭೂಕಂಪ, ಪ್ರವಾಹ, ಚಂಡಮಾರುತ ಸಂದರ್ಭದಲ್ಲೂ ಮಾನವೀಯ ನೆಲೆಯಲ್ಲಿ ವಿಪತ್ತು ನಿರ್ವಹಣಾ ಕಾರ್ಯಪಡೆ ಜತೆಯಾಗಿ ಕೆಲಸ ನಿರ್ವಹಿಸುತ್ತದೆ.

 

Vishwa News 24

Recent Posts

ಉಡುಪಿ ಜಿಲ್ಲೆಯ ನಿರ್ಲಕ್ಷ್ಯ : ಮೇ 16ರಂದು ಜಿಲ್ಲಾ ಉಸ್ತುವಾರಿ ಸಚಿವರಿಗೆ ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ :  ಪೃಥ್ವಿರಾಜ್ ಶೆಟ್ಟಿ ಬಿಲ್ಲಾಡಿ – vishwanews24

ಉಡುಪಿ ಜಿಲ್ಲೆಯ ನಿರ್ಲಕ್ಷ್ಯ : ಮೇ 16ರಂದು ಜಿಲ್ಲಾ ಉಸ್ತುವಾರಿ ಸಚಿವರಿಗೆ ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ :  ಪೃಥ್ವಿರಾಜ್…

13 hours ago

ಜನಿವಾರ, ಹಿಜಾಬ್, ಉಡುದಾರ, ರುದ್ರಾಕ್ಷಿ ಹಾಕಿಕೊಳ್ಳಬಹುದು ಹೊರತು ಕೇಸರಿ ಶಾಲಿಗೆ ಅವಕಾಶ ಇಲ್ಲ : ಸಿಎಂ ಸ್ಪಷ್ಟನೆ – vishwanews24

ಸಾಂಪ್ರದಾಯಿಕ ಧಾರ್ಮಿಕ ಸಂಕೇತಗಳನ್ನು ಧರಿಸಬಹುದು, ಹೊಸದಾಗಿ ಮಾಡುವಂತಿಲ್ಲ : ಸಿಎಂ ಸ್ಪಷ್ಟನೆ ಮೈಸೂರು : "ಪ್ರಾಥಮಿಕ ತರಗತಿಯಿಂದ 12ನೇ ತರಗತಿಯವರೆಗೆ…

15 hours ago

ಮದ್ಯ ಖರೀದಿ, ಮಾರಾಟ ಮಾಡಲು 21 ವರ್ಷ ಕಡ್ಡಾಯ : ತಮಿಳುನಾಡು ಸರ್ಕಾರ ಆದೇಶ – vishwanews24

ಮದ್ಯ ಖರೀದಿ, ಮಾರಾಟ ಮಾಡಲು 21 ವರ್ಷ ಕಡ್ಡಾಯ :  ಸಿಎಂ ವಿಜಯ್ ಸರ್ಕಾರ ಆದೇಶ ಚೆನ್ನೈ: ಇನ್ನು ಮುಂದೆ…

15 hours ago

ಇಂದಿರಾ ಗಾಂಧಿ ನಂತರ ಯಾರಾದ್ರೂ ಮಾಸ್ ಲೀಡರ್ ಇದ್ರೆ, ಅದು ಮೋದಿ ಮಾತ್ರ: ಕೆ.ಎನ್‌ ರಾಜಣ್ಣ – vishwanews24

ಇಂದಿರಾ ಗಾಂಧಿ ನಂತರ ಯಾರಾದ್ರೂ ಮಾಸ್ ಲೀಡರ್ ಇದ್ರೆ, ಅದು ಮೋದಿ ಮಾತ್ರ: ಕೆ.ಎನ್‌ ರಾಜಣ್ಣ ನಾನು ಮೋದಿಯವರನ್ನು ಹೊಗಳುತ್ತಿಲ್ಲ.…

16 hours ago

ಸಕ್ಕರೆ ರಫ್ತಿಗೆ ಸೆ.30 ರವರೆಗೆ ಸಂಪೂರ್ಣ ನಿಷೇಧ ಹೇರಿದ ಸರ್ಕಾರ – vishwanews24

ಸಕ್ಕರೆ ರಫ್ತಿಗೆ ಸೆ.30 ರವರೆಗೆ ಸಂಪೂರ್ಣ ನಿಷೇಧ ಹೇರಿದ ಸರ್ಕಾರ ನವದೆಹಲಿ: ದೇಶೀಯ ಮಾರುಕಟ್ಟೆಯಲ್ಲಿ ಸಕ್ಕರೆ ಬೆಲೆಯನ್ನು ನಿಯಂತ್ರಿಸಲು ಮತ್ತು…

16 hours ago

ಹಿಜಬ್‌ಗೆ ಅವಕಾಶ :ಪ್ರಣಾಳಿಕೆಯಲ್ಲಿ ಸಮಾನತೆಯ ಮಾತು ಕೊಟ್ಟಿದ್ವಿ , ಯಾವುದೇ ಕಾರಣಕ್ಕೂ ಆದೇಶ ವಾಪಸ್ ಪಡೆಯಲ್ಲ : ಮಧು ಬಂಗಾರಪ್ಪ – vishwanews24

ಹಿಜಬ್ ಬಗ್ಗೆ ಮಾತಾಡುವ ಬಿಜೆಪಿಯವರು  ನೀಟ್ ಬಗ್ಗೆ ಮಾತಾಡಲಿ : ಮಧು ಬಂಗಾರಪ್ಪ ಆಕ್ರೋಶ ಬೆಂಗಳೂರು: ಹಿಜಬ್ ಬಗ್ಗೆ ಮಾತಾಡುವ…

16 hours ago