Featured

ಮಂಗಳೂರಿನಲ್ಲಿ ಹಜ್ ಭವನ, ಹಜ್ ಯಾತ್ರೆಗೆ ನೇರ ವಿಮಾನ ಸೌಲಭ್ಯ ಒದಗಿಸುವಂತೆ ಎಸ್‌ಡಿಪಿಐ ಆಗ್ರಹ – vishwanews24

ಮಂಗಳೂರಿನಲ್ಲಿ ಹಜ್ ಭವನ, ಹಜ್ ಯಾತ್ರೆಗೆ ನೇರ ವಿಮಾನ ಸೌಲಭ್ಯ ಒದಗಿಸುವಂತೆ ಎಸ್‌ಡಿಪಿಐ ಆಗ್ರಹ

ಮಂಗಳೂರು: ಮಂಗಳೂರಿನಲ್ಲಿ ಹಜ್ ಭವನ ಕೂಡಲೇ ನಿರ್ಮಿಸಬೇಕು ಮತ್ತು ಮಂಗಳೂರಿನಿಂದ ಹಜ್‌ ಯಾತ್ರೆ ಕೈಗೊಳ್ಳುವವರಿಗೆ ನೇರ ವಿಮಾನ ಸೌಲಭ್ಯ ಒದಗಿಸುವಂತೆ ಎಸ್‌ಡಿಪಿಐ ಮಂಗಳೂರು ಗ್ರಾಮಾಂತರ ಜಿಲ್ಲಾ ಅಧ್ಯಕ್ಷ ಅನ್ವರ್ ಸಾದಾತ್ ಎಸ್ ಸರಕಾರವನ್ನು ಆಗ್ರಹಿಸಿದ್ದಾರೆ.

ನಗರದ ಎಸ್‌ಡಿಪಿಐ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.

ಬದುಕಿನಲ್ಲಿ ಒಮ್ಮೆಯಾದರೂ ಹಜ್ ನಿರ್ವಹಿಸಬೇಕೆನ್ನುವುದು ಮುಸ್ಲಿಂ ಸಮುದಾಯದ ಪ್ರತಿಯೊಬ್ಬನ ದೊಡ್ಡ ಕನಸಾಗಿದೆ. ಹಜ್‌ಗೆ ಹೋಗುವವರಿಗೆ ಅನುಕೂಲಕ್ಕಾಗಿ ಹಿಂದೆ ಮಂಗಳೂರಿನಿಂದ ನೇರ ವಿಮಾನ ಸೌಲಭ್ಯ ಇತ್ತು. ಕೊರೋನ ಬಳಿಕ ಅದು ರದ್ಧಾಗಿದೆ. ಆನಂತರ ಈ ತನಕ ಆರಂಭಗೊಂಡಿಲ್ಲ. ಮುಸ್ಲಿಂ ಸಮುದಾಯದ ಜನಪ್ರತಿನಿಧಿ ಗಳ ಇಚ್ಛಾಶಕ್ತಿಯ ಕೊರತೆಯಿಂದಾಗಿ ಹಜ್ ಯಾತ್ರಿಕರಿಗೆ ಇಂತಹ ಸೌಲಭ್ಯ ಇಲ್ಲದಾಗಿದೆ ಎಂದರು.

ಇದನ್ನೂ ಓದಿ : ಕಟಪಾಡಿ : ಶೀಘ್ರ ಒಂದು ಭಾಗದಲ್ಲಿ ವಾಹನ ಸಂಚಾರಕ್ಕೆ ಮುಕ್ತ – vishwanews24 

ಮಂಗಳೂರಿನಿಂದ ನೇರ ವಿಮಾನ ಸೌಲಭ್ಯ ಇಲ್ಲದ ಕಾರಣದಿಂದಾಗಿ ಹಜ್ ಯಾತ್ರಿಕರು ಬೆಂಗಳೂರಿಗೆ ಹೋಗಿ ಅಲ್ಲಿ ನಾಲ್ಕೈದು ದಿನ ಉಳಿದುಕೊಂಡು ಯಾತ್ರೆಗೆ ಸಂಬಂಧಿಸಿದ ಎಲ್ಲ ತಯಾರಿಸಿ ಮುಗಿಸಿಬಳಿಕ ವಿಮಾನ ಹತ್ತ ಬೇಕಾಗಿದೆ. ಈ ಕಾರಣದಿಂದಾಗಿ ಮಂಗಳೂರು ಸೇರಿದಂತೆ ಸುತ್ತಮತ್ತಲಿನ ಜಿಲ್ಲೆಗಳಿಂದ ಹಜ್ ಯಾತ್ರೆ ಕೈಗೊಳ್ಳು ವವರಿಗೆ ಇದೀಗ ಪ್ರತಿವರ್ಷ ಸಮಸ್ಯೆ ಎದುರಿಸುವಂತಾಗಿದೆ.ಅದರಲ್ಲೂ ಹಜ್ ಯಾತ್ರೆ ಕೈಗೊಳ್ಳುವ ಹಿರಿಯ ನಾಗರಿಕರು ಇನ್ನಷ್ಟು ಸಮಸ್ಯೆ ಎದುರಿಸಬೇಕಾಗಿದೆ ಎಂದರು.

ಹಿಂದೆ ಹಜ್‌ಭವನ ನಿರ್ಮಾಣಕ್ಕೆ ಸೂಕ್ತ ಸರಕಾರಿ ಜಮೀನು ಇಲ್ಲ ಎಂಬ ಕಾರಣವನ್ನು ಮುಂದಿಡಲಾಗುತ್ತಿತ್ತು. ಆದರೆ ಈಗ ಹಜ್ ಭವನ ನಿರ್ಮಾಣಕ್ಕೆ ಕಾಂಗ್ರೆಸ್ ಮುಖಂಡ ಇನಾಯತ್ ಅಲಿ ಅವರು ಸೂಕ್ತ ಜಾಗವನ್ನು ಹಜ್ ಕಮಿಟಿಗೆ ನೀಡಿದ್ದಾರೆ. ಸರಕಾರದ ಹೆಸರಿಗೆ ಅಧಕೃತವಾಗಿ ಜಮೀನು ಹಸ್ತಾಂತರವಾಗಿದೆ. ಸರಕಾರ 10 ಕೋಟಿ ರೂ. ಅನುದಾನವನ್ನು ಬಜೆಟ್‌ನಲ್ಲಿ ಮೀಸಲಿರಿಸಿದೆ. ಹೀಗಿದ್ದರೂ ಹಜ್ ಭವನ ನಿರ್ಮಾಣಕ್ಕೆ ಟೆಂಡರ್ ಪ್ರಕ್ರಿಯೆ ನಡೆದಿಲ್ಲ . ಈ ನಿಟ್ಟಿನಲ್ಲಿ ಸರಕಾರಕ್ಕೆ ಒತ್ತಡ ಹಾಕಲು ಮುಸ್ಲಿಂ ಸಮುದಾಯದಲ್ಲಿ ಪ್ರಭಾವಿ ನಾಯಕರು, ಸಚಿವರು , ಶಾಸಕರು ಇದ್ದಾರೆ. ಆದರೆ ಅವರು ಸರಕಾರದ ಗಮನ ಸೆಳೆಯುವ ನಿಟ್ಟಿನಲ್ಲಿ ಆಸಕ್ತಿ ವಹಿಸುತ್ತಿಲ್ಲ ಎಂದು ದೂರಿದರು.

ಇದನ್ನೂ ಓದಿ : ಈಸ್ಟರ್ ಪ್ರಯುಕ್ತ ಯಶವಂತಪುರ-ಮಡಗಾಂವ್ ಮಧ್ಯೆ ವಿಶೇಷ ರೈಲು – vishwanews24 

ಮಂಗಳೂರಿನಲ್ಲಿ ಕೂಡಲೇ ಹಜ್ ಭವನ ನಿರ್ಮಾಣಕ್ಕೆ ಸರಕಾರ ಕ್ರಮಕೈಗೊಳ್ಳಬೇಕು ಎಂದ ಅವರು ಮಂಗಳೂರಿ ನಲ್ಲಿ ಹಜ್ ಭವನ ಮತ್ತು ನೇರ ವಿಮಾನ ಸೌಲಭ್ಯ ವ್ಯವಸ್ಥೆ ಕಲ್ಪಿಸುವುದರಿಂದ ದ.ಕ ಜಿಲ್ಲೆಯವರಿಗೆ ಮಾತ್ರವಲ್ಲ ಉಡುಪಿ, ಕೊಡಗು, ಚಿಕ್ಕಮಗಳೂರು ಸೇರಿದಂತೆ ಸುತ್ತ ಮುತ್ತಲಿನ ಜಿಲ್ಲೆಗಳಿಂದ ಹಜ್ ಯಾತ್ರೆ ಕೈಗೊಳ್ಳುವವರಿಗೆ ತುಂಬಾ ಅನುಕೂಲವಾಗಲಿದೆ ಎಂದು ಹೇಳಿದರು.

ಸುದ್ದಿಗೋಷ್ಠಿಯಲ್ಲಿ ಎಸ್‌ಡಿಪಿಐ ಮಂಗಳೂರು ನಗರ ಜಿಲ್ಲಾ ಉಪಾಧ್ಯಕ್ಷ ಅಶ್ರಫ್ ಅಡ್ಡೂರು , ಜಿಲ್ಲಾ ಪ್ರಧಾನ ಕಾರ್ಯದರ್ಶಿ ಜಮಾಲ್ ಜೋಕಟ್ಟ್ಟೆ, ಗ್ರಾಮಾಂತರ ಜಿಲ್ಲಾ ಕಾರ್ಯದರ್ಶಿ ಶಾಕಿರ್ ಅಳಕೆಮಜಲು ಉಪಸ್ಥಿತರಿದ್ದರು.

Vishwa News 24

Recent Posts

ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿಯಲು ಯತ್ನ; ಯುವಕನ ರಕ್ಷಣೆ – vishwanews24

ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿಯಲು ಯತ್ನ; ಯುವಕನ ರಕ್ಷಣೆ ಉಡುಪಿ: ಟಿಕೆಟ್ ಇಲ್ಲದೆ ಪ್ರಯಾಣಿಸುತ್ತಿದ್ದ ಯುವಕನೊಬ್ಬ ರೈಲಿನಿಂದ ಜಿಗಿಯಲು ಯತ್ನಿಸುತ್ತಿದ್ದ…

21 minutes ago

ಕಾಸರಗೋಡು :  ಕೆಟ್ಟು ನಿಂತಿದ್ದ ಪಿಕಪ್ ವ್ಯಾನ್ ಗೆ ಬೈಕ್ ಢಿಕ್ಕಿ: ಸವಾರ ಮೃತ್ಯು – vishwanews24

ಕಾಸರಗೋಡು :  ಕೆಟ್ಟು ನಿಂತಿದ್ದ ಪಿಕಪ್ ವ್ಯಾನ್ ಗೆ ಬೈಕ್ ಢಿಕ್ಕಿ: ಸವಾರ ಮೃತ್ಯು ಕಾಸರಗೋಡು : ರಾಷ್ಟ್ರೀಯ ಹೆದ್ದಾರಿಯ ಬದಿಯಲ್ಲಿ…

1 hour ago

ಪ್ರಥಮ ಪಿಯುಸಿ ಫಲಿತಾಂಶ ಪ್ರಕಟ ; ಆನ್‌ಲೈನ್‌ನಲ್ಲಿ ವೀಕ್ಷಿಸುವುದು ಹೇಗೆ? – vishwanews24

ಪ್ರಥಮ ಪಿಯುಸಿ ಫಲಿತಾಂಶ ಪ್ರಕಟ ; ಆನ್‌ಲೈನ್‌ನಲ್ಲಿ ವೀಕ್ಷಿಸುವುದು ಹೇಗೆ? ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯು…

1 hour ago

ಕಟಪಾಡಿ : ಶೀಘ್ರ ಒಂದು ಭಾಗದಲ್ಲಿ ವಾಹನ ಸಂಚಾರಕ್ಕೆ ಮುಕ್ತ – vishwanews24

ಕಟಪಾಡಿ : ಶೀಘ್ರ ಒಂದು ಭಾಗದಲ್ಲಿ ವಾಹನ ಸಂಚಾರಕ್ಕೆ ಮುಕ್ತ ಕಟಪಾಡಿಯಲ್ಲಿ ರಾಷ್ಟ್ರೀಯ ಹೆದ್ದಾರಿಯ ಅಂಡರ್‌ಪಾಸ್ ಕಾಮಗಾರಿ ವೇಗದಲ್ಲಿ ನಡೆಯುತಿದ್ದು,…

2 hours ago

ಉಡುಪಿ: ಸಂತೆಕಟ್ಟೆ ಅಂಡರ್‌ಪಾಸ್‌ನ ಮೇಲ್ಸೇತುವೆ ವಾಹನ ಸಂಚಾರಕ್ಕೆ ಮುಕ್ತ ; ಶೀಘ್ರವೇ ಅಧಿಕೃತ ಉದ್ಘಾಟನೆ: ಸಂಸದ ಕೋಟ ಶ್ರೀನಿವಾಸ ಪೂಜಾರಿ – vishwanews24

ಉಡುಪಿ: ಸಂತೆಕಟ್ಟೆ ಅಂಡರ್‌ಪಾಸ್‌ನ ಮೇಲ್ಸೇತುವೆ ವಾಹನ ಸಂಚಾರಕ್ಕೆ ಮುಕ್ತ ; ಶೀಘ್ರವೇ ಅಧಿಕೃತ ಉದ್ಘಾಟನೆ: ಸಂಸದ ಕೋಟ ಶ್ರೀನಿವಾಸ ಪೂಜಾರಿ…

3 hours ago

ಈಸ್ಟರ್ ಪ್ರಯುಕ್ತ ಯಶವಂತಪುರ-ಮಡಗಾಂವ್ ಮಧ್ಯೆ ವಿಶೇಷ ರೈಲು – vishwanews24

ಈಸ್ಟರ್ ಪ್ರಯುಕ್ತ ಯಶವಂತಪುರ-ಮಡಗಾಂವ್ ಮಧ್ಯೆ ವಿಶೇಷ ರೈಲು ಉಡುಪಿ: ಮುಂಬರುವ ಗುಡ್‌ಫ್ರೈಡೇ ಹಾಗೂ ಈಸ್ಟರ್ ಪ್ರಯುಕ್ತ ಜನರ ವಿಶೇಷ ಒತ್ತಡವನ್ನು…

3 hours ago