Featured

ಮಂಗಳೂರು ಮಸಾಜ್ ಪಾರ್ಲರ್ ಮೇಲೆ ದಾಳಿ ಪ್ರಕರಣ : ಆರೋಪಿಗಳ ತಕ್ಷಣ ಬಂಧಿಸಿ ಕ್ರಮ ತೆಗೆದುಕೊಳ್ಳಲು ಸೂಚನೆ : ಡಾ.ಪರಮೇಶ್ವರ್ – vishwanews24

ಮಂಗಳೂರಿನ ಮಸಾಜ್ ಪಾರ್ಲರ್ ಮೇಲೆ ದಾಳಿ ಪ್ರಕರಣ : ಆರೋಪಿಗಳ ತಕ್ಷಣ ಬಂಧಿಸಿ ಕ್ರಮ ತೆಗೆದುಕೊಳ್ಳಲು ಸೂಚನೆ : ಗೃಹ ಸಚಿವ ಡಾ.ಪರಮೇಶ್ವರ್

ಉಡುಪಿ: ಮಂಗಳೂರಿನ ಮಸಾಜ್ ಪಾರ್ಲರ್‌ ಮೇಲೆ ದಾಳಿ ಪ್ರಕರಣಕ್ಕೆ ಸಂಬಂಧಿಸಿ ದಾಳಿ ಮಾಡಿದವರನ್ನು ತಕ್ಷಣ ಬಂಧಿಸಿ ಕ್ರಮ ತೆಗೆದುಕೊಳ್ಳಲು ಪೊಲೀಸ್ ಇಲಾಖೆಗೆ ಸೂಚನೆ ನೀಡಲಾಗಿದೆ ಎಂದು ರಾಜ್ಯ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಹೇಳಿದ್ದಾರೆ.

ಉಡುಪಿಯಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಯಾವ ಉದ್ದೇಶಕ್ಕೆ ಪಾರ್ಲರ್‌ ಮೇಲೆ ದಾಳಿಯಾಗಿದೆ ಎಂಬುದು ಮಾಹಿತಿ ಇಲ್ಲ. ಇಂತಹ ಕೃತ್ಯಗಳು ನಡೆಯಬಾರದು. ಕಾನೂನು ಪ್ರಕಾರ ಅವರ ವಿರುದ್ಧ ಕ್ರಮ ಕೈಗೊಳ್ಳಲು ಸೂಚನೆ ನೀಡಿದ್ದೇನೆ ಎಂದರು.

ಯಾರಿಗೂ ವ್ಯಾಪಾರ ಮಾಡಲು ಅಡ್ಡಿಪಡಿಸಬಾರದು. ಪ್ರತಿಯೊಬ್ಬರಿಗೂ ಕೆಲಸ ಮಾಡಿಕೊಳ್ಳುವ ಹಕ್ಕು ಇದೆ. ಆದುದರಿಂದ ಯಾರು ಕೂಡ ಕಾನೂನು ಕೈಗೆ ಎತ್ತಿಕೊಳ್ಳಬಾರದು. ದಾಳಿ ಮಾಡಿದವರು ಯಾರು ಎಂಬುದನ್ನು ಗುರುತಿಸುತ್ತೇವೆ. ಅವರ ವಿರುದ್ಧ ಏನು ಕ್ರಮ ತೆಗೆದುಕೊಳ್ಳಬೇಕು, ಅದನ್ನು ಇಲಾಖೆ ಮಾಡುತ್ತದೆ ಎಂದು ಅವರು ತಿಳಿಸಿದರು.

ಅನೈತಿಕವಾಗಿ ಕಾರ್ಯಾಚರಿಸುವ ಪಾರ್ಲರ್‌ಗಳಿದ್ದರೆ ಅವುಗಳ ಬಗ್ಗೆ ದೂರು ಕೊಡಲಿ. ದೂರು ಕೊಟ್ಟರೆ ಪೊಲೀಸರು ಕ್ರಮ ಕೈಗೊಳ್ಳುತ್ತಾರೆ. ಅದು ಬಿಟ್ಟು ನಾವು ಕಾನೂನು ಕೈಗೆತ್ತಿಕೊಳ್ಳುವುದು ಸರಿಯಲ್ಲ. ಈ ಪಾರ್ಲರ್‌ಗೆ ಮಹಾನಗರ ಪಾಲಿಕೆಯಿಂದ ಟ್ರೇಡ್ ಲೈಸೆನ್ಸ್ ನೀಡಲಾಗಿದೆ. ಯಾವ ಶರತ್ತು ಹಾಕಿ ಕೊಟ್ಟಿರುತ್ತಾರೆ ಎಂಬುದನ್ನು ಪರಿಶೀಲಿಸಲಾಗುತ್ತದೆ. ಒಂದು ವೇಳೆ ನಿಯಮಾವಳಿಗಳನ್ನು ಮೀರಿ ವ್ಯವಹರಿಸುತ್ತಿದ್ದರೆ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಅವರು ಹೇಳಿದರು.

Vishwa News 24

Recent Posts

ಉಡುಪಿ : ಬಾಲಕಿ ನಾಪತ್ತೆ -vishwanews24

ಉಡುಪಿ : ಬಾಲಕಿ ನಾಪತ್ತೆ ಉಡುಪಿ : ಉಡುಪಿ ಮಹಿಳಾ ಪೊಲೀಸ್ ಠಾಣಾ ವ್ಯಾಪ್ತಿಯ ನಿವಾಸಿ ಪ್ರೀತಿ (16) ಎಂಬ…

7 hours ago

ಮಂಗಳೂರು ವಿಮಾನ ನಿಲ್ದಾಣದಲ್ಲಿ ‘ಉಬರ್’ ಸೇವೆ ಆರಂಭ -vishwanews24

ಮಂಗಳೂರು ವಿಮಾನ ನಿಲ್ದಾಣದಲ್ಲಿ 'ಉಬರ್' ಸೇವೆ ಆರಂಭ ಪ್ರಯಾಣಿಕರಿಗೆ ವೇಗವಾದ ಮತ್ತು ಸುಲಭ ಸಾರಿಗೆ ಸೌಲಭ್ಯ ಮಂಗಳೂರು: ಮಂಗಳೂರು ಅಂತರರಾಷ್ಟ್ರೀಯ…

10 hours ago

ಉಡುಪಿ ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಅತ್ಯಂತ ಖಂಡನೀಯ ಕೃತ್ಯ : ರೆನೋಲ್ಡ್ ಪ್ರವೀಣ್ ಕುಮಾರ್ -vishwanews24

ಉಡುಪಿ ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಅತ್ಯಂತ ಖಂಡನೀಯ ಕೃತ್ಯ : ರೆನೋಲ್ಡ್ ಪ್ರವೀಣ್ ಕುಮಾರ್ ಉಡುಪಿ: ಜಿಲ್ಲಾ ನ್ಯಾಯಾಲಯಕ್ಕೆ…

13 hours ago

ಉಡುಪಿ : ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಸಂದೇಶ ;   ಪೊಲೀಸರು, ಶ್ವಾನ ದಳದಿಂದ ಶೋಧ ಕಾರ್ಯಾಚರಣೆ -vishwanews24

ಉಡುಪಿ : ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಸಂದೇಶ ;   ಪೊಲೀಸರು, ಶ್ವಾನ ದಳದಿಂದ ಶೋಧ ಕಾರ್ಯಾಚರಣೆ ಉಡುಪಿ: ಉಡುಪಿ…

14 hours ago

ಇಂದಿನಿಂದ ಟೆಲಿಗ್ರಾಮ್ ಮೇಲಿನ ನಿಷೇಧ ತೆರವು: ಮೆಸೇಜ್ ಎಡಿಟಿಂಗ್ ನಿರ್ಬಂಧ ಜೂ. 30ರವರೆಗೆ ಮುಂದುವರಿಕೆ -vishwanews24

ಇಂದಿನಿಂದ ಟೆಲಿಗ್ರಾಮ್ ಮೇಲಿನ ನಿಷೇಧ ತೆರವು: ಮೆಸೇಜ್ ಎಡಿಟಿಂಗ್ ನಿರ್ಬಂಧ ಜೂ. 30ರವರೆಗೆ ಮುಂದುವರಿಕೆ ನವದೆಹಲಿ : ನೀಟ್ -ಯುಜಿ…

14 hours ago

246 ಕೋಟಿ ರೂ.ಗಳ 46 ಯೋಜನೆಗಳು ರದ್ದು; ದೇವಸ್ಥಾನಗಳ ಹಣ ಬೇರೆ ಕೆಲಸಕ್ಕೆ ಬಳಸುವಂತಿಲ್ಲ: ಸಿಎಂ ವಿಜಯ್ -vishwanews24

246 ಕೋಟಿ ರೂ.ಗಳ 46 ಯೋಜನೆಗಳು ರದ್ದು; ದೇವಸ್ಥಾನಗಳ ಹಣ ಬೇರೆ ಕೆಲಸಕ್ಕೆ ಬಳಸುವಂತಿಲ್ಲ: ಸಿಎಂ ವಿಜಯ್ ಚೆನ್ನೈ: ತಮಿಳುನಾಡಿನಾದ್ಯಂತ…

14 hours ago