Featured

ಮಂಗಳೂರಿನ ಸಂತ ಜೆರೋಸ ಕಾನ್ವೆಂಟ್ ಶಾಲೆಯಲ್ಲಿ ನಡೆದ ಘಟನೆಯಿಂದಾಗಿ ಕ್ರೈಸ್ತ ಸಮುದಾಯಕ್ಕೆ ನೋವಾಗಿದೆ :ಬೇಸರ ವ್ಯಕ್ತಪಡಿಸಿದ  ಬೆಂಗಳೂರಿನ ಆರ್ಚ್ ಬಿಷಪ್ ಡಾ. ಪೀಟರ್ ಮಚಾದೊ – Vishwanews24

ಮಂಗಳೂರಿನ ಸಂತ ಜೆರೋಸ ಕಾನ್ವೆಂಟ್ ಶಾಲೆಯಲ್ಲಿ ನಡೆದ ಘಟನೆಯಿಂದಾಗಿ ಕ್ರೈಸ್ತ ಸಮುದಾಯಕ್ಕೆ ನೋವಾಗಿದೆ :ಬೇಸರ ವ್ಯಕ್ತಪಡಿಸಿದ  ಬೆಂಗಳೂರಿನ ಆರ್ಚ್ ಬಿಷಪ್ ಡಾ. ಪೀಟರ್ ಮಚಾದೊ

ಬೆಂಗಳೂರು: ಮಂಗಳೂರಿನ ಸಂತ ಜೆರೋಸ ಕಾನ್ವೆಂಟ್ ಶಾಲೆಯಲ್ಲಿ ನಡೆದ ಘಟನೆಯಿಂದಾಗಿ ಕ್ರೈಸ್ತ ಸಮುದಾಯಕ್ಕೆ ನೋವಾಗಿದೆ ಎಂದು ಬೆಂಗಳೂರಿನ ಆರ್ಚ್ ಬಿಷಪ್ ಡಾ. ಪೀಟರ್ ಮಚಾದೊ ಬೇಸರ ವ್ಯಕ್ತಪಡಿಸಿದ್ದಾರೆ.

ಇತ್ತೀಚೆಗೆ ಮಂಗಳೂರಿನ ಸಂತ ಜೆರೋಸ ಕಾನ್ವೆಂಟ್ ಶಾಲೆಯಲ್ಲಿ ನಡೆದ ಘಟನೆಯ ನಂತರ ಅಲ್ಲಿನ ಸ್ಥಳೀಯ ಶಾಸಕರ ನೇತೃತ್ವದಲ್ಲಿ ಜನರ ಗುಂಪು ಹಿಂದೂ ಧರ್ಮದ ಬಗ್ಗೆ ಹಾಗೂ ರಾಷ್ಟ್ರೀಯ ನಾಯಕರ ವಿರುದ್ಧ ಆಕ್ಷೇಪಾರ್ಹ ಮಾತುಗಳನ್ನು ಆಡಿದ್ದಾರೆ ಎಂದು ಆರೋಪಿಸಲಾಗಿರುವ ಸಿಸ್ಟರ್ (ಧಾರ್ಮಿಕ ಭಗಿನಿ) ಅವರ ಮೇಲೆ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ, ಪ್ರತಿಭಟನೆಯನ್ನು ನಡೆಸಿದೆ. ವಾಸ್ತವವಾಗಿ ಆ ಸಿಸ್ಟರ್ ಏನು ಹೇಳಿದರು ಹಾಗೂ ವಿದ್ಯಾರ್ಥಿಗಳು ತಮ್ಮ ಪೋಷಕರಲ್ಲಿ ಇದನ್ನು ಯಾವ ರೀತಿಯಲ್ಲಿ ವ್ಯಾಖ್ಯಾನಿಸಿದರು ಮತ್ತು ಸಾರ್ವಜನಿಕರು ಇದಕ್ಕೆ ಆಕ್ರೋಶದಿಂದ ವರ್ತಿಸಿದ್ದು ಏಕೆ ಎಂದು ವಸ್ತುನಿಷ್ಠವಾಗಿ ಯಾರಿಗೂ ಗೊತ್ತಿಲ್ಲ ಎಂದು ಹೇಳಿದ ಮಚಾದೊ ಅವರು, ಸುಮಾರು ನೂರು ವರ್ಷಗಳಿಗೂ ಹೆಚ್ಚು ಇತಿಹಾಸವನ್ನು ಹೊಂದಿರುವ ಮಂಗಳೂರಿನ ಪ್ರತಿಷ್ಠಿತ ಶಿಕ್ಷಣ ಸಂಸ್ಥೆಗಳಲ್ಲೊಂದಾದ ಸಂತ ಜೆರೋಸ ಕಾನ್ವೆಂಟ್ ಶಾಲೆಯನ್ನು ಯಾವುದೋ ಒಂದು ಯಕಶ್ಚಿತ್ ಘಟನೆಯಿಂದ, ಯಾವುದೇ ತನಿಖೆ ನಡೆಸದೆ ಅವಮಾನಕ್ಕೆ ಒಳಪಡಿಸಿರುವುದು ಕ್ರೈಸ್ತ ಸಮುದಾಯಕ್ಕೆ ನೋವನ್ನು ಉಂಟು ಮಾಡಿದೆ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

ಮಂಗಳೂರಿನ ಜನತೆಗೆ ಗೊತ್ತಿರುವಂತೆ ಈ ಶಿಕ್ಷಣ ಸಂಸ್ಥೆಯು ಸಮಾಜದ ವಿವಿಧ ಕ್ಷೇತ್ರಗಳಿಗೆ ಅನೇಕ ಮಹನೀಯರನ್ನು ಕೊಡುಗೆಯಾಗಿ ನೀಡಿದೆ. ವಿಶೇಷವಾಗಿ ಶಿಕ್ಷಣ ಮತ್ತು ಆರೋಗ್ಯ ಕ್ಷೇತ್ರದಲ್ಲಿ ಸಮಾಜದ ಎಲ್ಲಾ ಧರ್ಮಗಳ, ಎಲ್ಲಾ ಜಾತಿಗಳ ಜನರಿಗೆ ಯಾವುದೇ ಭೇದ ಭಾವವಿಲ್ಲದೆ ನಮ್ಮ ಕ್ರೈಸ್ತ ಸಂಸ್ಥೆಗಳು ನಿಸ್ವಾರ್ಥ ಸೇವೆಯನ್ನು ಸಲ್ಲಿಸುತ್ತಿರುವುದು ಸಾರ್ವತ್ರಿಕ ಸತ್ಯವಾಗಿದೆ. ಪ್ರಸ್ತುತ ದೇಶ ಹಾಗೂ ವಿದೇಶಗಳಲ್ಲಿ ನೆಲೆಸಿ, ದೊಡ್ಡ ಹುದ್ದೆಗಳಲ್ಲಿರುವ ಹಾಗೂ ಬದುಕಿನಲ್ಲಿ ಯಶಸ್ವಿಯಾಗಿರುವ ಸಾವಿರಾರು ಕ್ರೈಸ್ತೇತರ ವಿದ್ಯಾರ್ಥಿಗಳಿಗೆ ಉತ್ತಮ ಶಿಕ್ಷಣವನ್ನು ನೀಡುವ ಮೂಲಕ ನಮ್ಮ ಅಲ್ಪಸಂಖ್ಯಾತ ಸಂಸ್ಥೆಗಳು ಅವರ ಬದುಕನ್ನು ರೂಪಿಸಿವೆ. ಅವರೆಲ್ಲರೂ ಈಗಲೂ ಸಹ ತಾವು ಕಲಿತ ವಿದ್ಯಾಸಂಸ್ಥೆಗೆ ಕೃತಜ್ಞರಾಗಿದ್ದಾರೆ. ಈ ಪ್ರಕರಣದಲ್ಲಿ ಯಾವುದೇ ಸರ್ಕಾರದ ತನಿಖೆ ಇಲ್ಲದೆ ಇದ್ದರೂ ಸಹ, ಈ ಘಟನೆಗೆ ಸಂಬಂಧಿಸಿದ ಶಿಕ್ಷಕಿಯನ್ನು ಅಮಾನತ್ತು ಮಾಡಲಾಗಿದೆ. ಅಲ್ಲದೆ, ಈ ಶಾಲೆಯ ಮುಖ್ಯೋಪಾಧ್ಯಾಯನಿ ಸಿಸ್ಟರ್ ಅವರು ಪ್ರತಿಭಟನಾಕಾರರ ಕ್ಷಮೆಯನ್ನು ಯಾಚಿಸಿದ ನಂತರವೂ, ಸಂಪೂರ್ಣ ನಿಜಾಂಶ ಹೊರಗೆ ಬರುವವರೆಗೂ ಸ್ಥಳೀಯ ಶಾಸಕರಿಗೂ ಹಾಗೂ ಅವರ ಜೊತೆಗೆ ಬಂದಿದ್ದ ಜನರ ಗುಂಪಿಗೂ ತಾಳ್ಮೆ ಇರಲಿಲ್ಲ ಎಂದು ಪೀಟರ್ ಮಚಾದೊ ಅವರು ಹೇಳಿದ್ದಾರೆ.

ಕ್ರೈಸ್ತ ಸಮುದಾಯವಾದ ನಾವು, ವಿಶೇಷವಾಗಿ ಗುರುಗಳು ಧಾರ್ಮಿಕ ಬಕಿನರು ಎಂದಿಗೂ ಎಲ್ಲಾ ಧರ್ಮಗಳನ್ನು ಗೌರವಿಸಿ ಅವುಗಳ ಮೌಲ್ಯಗಳನ್ನು ಎತ್ತಿ ಹಿಡಿಯುತ್ತೇವೆ. ಕೆಲವೊಮ್ಮೆ ಕೆಲವು ಧಾರ್ಮಿಕ ಮೂಲಭೂತವಾಗಿ ಗುಂಪುಗಳು ಮತ್ತೊಂದು ಧರ್ಮದ ಮೇಲೆ ಸೇಡನ್ನು ತೀರಿಸಿಕೊಳ್ಳಲು ಅವರ ಮೇಲೆ ಸುಳ್ಳು ಆರೋಪಗಳನ್ನು ಹಬ್ಬಿಸುವ ಮೂಲಕ ಸಾರ್ವಜನಿಕರಲ್ಲಿ ವಿಭಜನೆಯನ್ನು ಸೃಷ್ಟಿಸುತ್ತಿದ್ದಾರೆ. ಇದು ಸಹ ಈ ಘಟನೆಗೆ ಕಾರಣವಾಗಿರಬಹುದು ಎಂದು ಅವರು ಹೇಳಿದ್ದಾರೆ.

ರಾಜಕೀಯವಾಗಿ ಆಯ್ಕೆಯಾದ ನಾಯಕರು ಸಮಾಜದಲ್ಲಿ ಸಾಮರಸ್ಯ ಹಾಗೂ ಏಕತೆಯ ಪ್ರತಿನಿಧಿಗಳಾಗುವ ಬದಲು ಅನೇಕ ಬಾರಿ ವಿಭಜನೆಯ ನಾಯಕರಾಗುತ್ತಿದ್ದಾರೆ. ಕ್ರಿಸ್ಮಸ್ ಹಬ್ಬದ ದಿನ ದೆಹಲಿಯಲ್ಲಿ ಪ್ರಧಾನಮಂತ್ರಿಗಳು ಶಿಕ್ಷಣ ಹಾಗೂ ಆರೋಗ್ಯ ಕ್ಷೇತ್ರದಲ್ಲಿ ಕ್ರೈಸ್ತ ಸಮುದಾಯವು ನೀಡಿರುವ ನಿಸ್ವಾರ್ಥ ಕೊಡುಗೆಯನ್ನು ಮುಕ್ತಕಂಠದಿಂದ ಶ್ಲಾಘಿಸಿದ ನಂತರವೂ ಸಹ ಅವರ ಪಕ್ಷದ ಸದಸ್ಯರು ದೇಶದಾದ್ಯಂತ ಇದನ್ನು ಅರ್ಥ ಮಾಡಿಕೊಳ್ಳುವ ಬದಲಿಗೆ, ದ್ವೇಷ ಭಾಷಣ ಮಾಡುವುದರಲ್ಲಿ ನಿರತರಾಗಿದ್ದಾರೆ. ಅಲ್ಲದೆ ಸಂಕುಚಿತ ರಾಜಕಾರಣದಲ್ಲಿ ಮಗ್ನರಾಗಿದ್ದಾರೆ ಎಂದು ಆರ್ಚ್‍ಬಿಷಪ್ ಪೀಟರ್ ಮಚಾದೊ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಗುಂಪು ರಾಜಕೀಯವೇ ದೇಶದಲ್ಲಿ ಕಾನೂನಾಗಿದೆಯೇ? ಅಥವಾ ಸಮಾಜದಲ್ಲಿ ಶಾಂತಿ ಹಾಗೂ ಸಾಮರಸ್ಯವನ್ನು ಕಾಪಾಡುವ ನಿಟ್ಟಿನಲ್ಲಿ ನಾವು ನ್ಯಾಯದ ಪ್ರಕ್ರಿಯೆಯಲ್ಲಿ ನಂಬಿಕೆಯನ್ನು ಇಡಬಹುದೇ? ಈ ಪ್ರಕರಣದಲ್ಲಿ ಸರ್ಕಾರಿ ಅಧಿಕಾರಿಗಳ ಪಾತ್ರವನ್ನು ಸಹ ನಾವು ವಿಮರ್ಶೆಗೆ ಒಳಪಡಿಸಬೇಕು. ನಾಗರೀಕರು ಹಾಗೂ ಸಂಸ್ಥೆಗಳು ಅಸಹಾಯಕ ಸ್ಥಿತಿಯಲ್ಲಿರುವಾಗ ಮಧ್ಯಪ್ರವೇಶಿಸಿ, ಸಮಸ್ಯೆಯನ್ನು ನ್ಯಾಯಾತ್ಮಕವಾಗಿ ಬಗೆಹರಿಸಿ, ಇವರ ಬೆಂಬಲಕ್ಕೆ ನಿಲ್ಲುವುದು ಅವರ ಕರ್ತವ್ಯವಲ್ಲವೇ?. ಕ್ರೈಸ್ತ ಸಮುದಾಯದ ಹಾಗೂ ಅದರ ನಾಯಕರ ವಿರುದ್ಧ ಸುಳ್ಳು ಆರೋಪಗಳು ಹೊರಿಸಿದ ಹಾಗೂ ಅವಮಾನ ಮಾಡಿದ ನಂತರವೂ ಸಹ ನಾವು ಸಮಾಜಕ್ಕೆ ಸೇವೆ ಮಾಡುವುದನ್ನು ಮುಂದುವರಿಸುತ್ತೇವೆ. ವಿಶೇಷವಾಗಿ ಬಡವರು, ಶೋಷಿತರು ಹಾಗೂ ದಮನಿತರಿಗೆ ಉತ್ತಮ ಗುಣಮಟ್ಟದ ಸೇವೆಯನ್ನು ನೀಡುತ್ತೇವೆ ಮಾತ್ರವಲ್ಲದೆ ನಮ್ಮ ವಿರುದ್ಧ ಸುಳ್ಳು ಆರೋಪಗಳನ್ನು ಹೊರಿಸುವವರಿಗೆ ಹಾಗೂ ನಮಗೆ ನೋವನ್ನು ಉಂಟುಮಾಡುವವರಿಗೆ ಯೇಸುಕ್ರಿಸ್ತರೇ ಹೇಳಿದಂತೆ “ತಂದೆಯೇ ಇವರನ್ನು ಕ್ಷಮಿಸಿರಿ ಇವರು ಏನು ಮಾಡುತ್ತಿದ್ದಾರೆಂದು ಅರಿಯರು” ಎಂದು ಹೇಳಿ ಪ್ರಾರ್ಥಿಸುತ್ತೇವೆ ಎಂದು ಕರ್ನಾಟಕ ಪ್ರಾಂತ್ಯ ಕಥೋಲಿಕ ಧರ್ಮಾಧ್ಯಕ್ಷರ ಮಂಡಳಿಯ ಅಧ್ಯಕ್ಷರೂ ಆದ ಡಾ. ಪೀಟರ್ ಮಚಾದೊ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

Vishwa News 24

Recent Posts

ಎಸ್‌ಐಆರ್‌ ವಿವಾದ: ಬಿಜೆಪಿ ಕಾರ್ಯಕರ್ತರಿಗೆ ಕಿರುಕುಳ ನೀಡಿದರೆ ರಾಜ್ಯಾದ್ಯಂತ ಹೋರಾಟ :ಯಡಿಯೂರಪ್ಪ ಎಚ್ಚರಿಕೆ – vishwanews24

ಬಿಜೆಪಿ ಕಾರ್ಯಕರ್ತರ ಮೇಲಿನ FIR ರದ್ದಿಗೆ ಆಗ್ರಹ : ರಾಜ್ಯಾದ್ಯಂತ ಹೋರಾಟದ ಎಚ್ಚರಿಕೆ ನೀಡಿದ ಬಿಎಸ್‌ವೈ ಬೆಂಗಳೂರು: ಎಸ್‍ಐಆರ್ ಸಂಬಂಧ…

4 hours ago

ಮಂಗಳೂರು: ಮನೆ ಕನ್ನ ಕಳವು ಪ್ರಕರಣ ಭೇದಿಸಿದ ಪೊಲೀಸರು; ದೆಹಲಿ ಮೂಲದ ಇಬ್ಬರ ಬಂಧನ – vishwanews24

ಮಂಗಳೂರು: ಮನೆ ಕನ್ನ ಕಳವು ಪ್ರಕರಣ ಭೇದಿಸಿದ ಪೊಲೀಸರು; ದೆಹಲಿ ಮೂಲದ ಇಬ್ಬರ ಬಂಧನ, 18 ಲಕ್ಷ ಮೌಲ್ಯದ ಸೊತ್ತು…

4 hours ago

ಏಷ್ಯನ್ ಗೇಮ್ಸ್ : ಕುಸ್ತಿಯಲ್ಲಿ ಚಿನ್ನ ಗೆದ್ದ ಅಮನ್ ಸೆಹ್ರಾವತ್ – vishwanews24

ಏಷ್ಯನ್ ಗೇಮ್ಸ್ : ಕುಸ್ತಿಯಲ್ಲಿ ಚಿನ್ನ ಗೆದ್ದ ಅಮನ್ ಸೆಹ್ರಾವತ್ ನಗೋಯಾ: ಜಪಾನ್‌ನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ 2026ರ ಏಷ್ಯನ್ ಗೇಮ್ಸ್‌ನಲ್ಲಿ…

5 hours ago

ಕಾರ್ಕಳ : ಅ. 5 ರಂದು ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿಯಿಂದ ಬೃಹತ್ ಪ್ರತಿಭಟನೆ – vishwanews24

ಕಾರ್ಕಳ : ಅ. 05 ರಂದು ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿಯಿಂದ ಬೃಹತ್ ಪ್ರತಿಭಟನೆ ಕಾರ್ಕಳ: ರಾಜ್ಯ ಕಾಂಗ್ರೆಸ್ ಸರ್ಕಾರದ…

5 hours ago

ಮಂಗಳೂರು: ಯುವನಿಧಿ ಫಲಾನುಭವಿಗಳಿಗೆ ಕೌಶಲ ಭಾಗ್ಯ: ಉಚಿತ ತರಬೇತಿ ಮತ್ತು ಉದ್ಯೋಗಾವಕಾಶಕ್ಕಾಗಿ ಅರ್ಜಿ ಆಹ್ವಾನ – vishwanews24

ಮಂಗಳೂರು: ಯುವನಿಧಿ ಫಲಾನುಭವಿಗಳಿಗೆ ಕೌಶಲ ಭಾಗ್ಯ: ಉಚಿತ ತರಬೇತಿ ಮತ್ತು ಉದ್ಯೋಗಾವಕಾಶಕ್ಕಾಗಿ ಅರ್ಜಿ ಆಹ್ವಾನ ಮಂಗಳೂರು: ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷೆಯ…

5 hours ago

180 ಜನರ ಪ್ರಾಣ ಉಳಿಸಿದ ಭಾರತೀಯ ಪೈಲಟ್ ಸ್ಮಿತ್ ಮಚ್ಚಾರ್‌ಗೆ 1 ಕೋಟಿ ರೂ. ಘೋಷಣೆ – vishwanews24

180 ಜನರ ಪ್ರಾಣ ಉಳಿಸಿದ ಭಾರತೀಯ ಪೈಲಟ್ ಸ್ಮಿತ್ ಮಚ್ಚಾರ್‌ಗೆ 1 ಕೋಟಿ ರೂ. ಘೋಷಣೆ ನವದೆಹಲಿ : ದುಬೈನಿಂದ…

6 hours ago