Featured

ಮಂಗಳೂರು:ಇಂಟಕ್‌ನಿಂದ ಕಾಂಗ್ರೆಸ್ ಸ್ಥಾಪನಾ ದಿನಾಚರಣೆ :ಕಾಂಗ್ರೆಸ್  ದೇಶಕ್ಕೆ ಸ್ವಾತಂತ್ರ ಗಳಿಸಿಕೊಟ್ಟ ಪಕ್ಷವಾಗಿದ್ದು ,ಬಡತನ ನಿವಾರಣೆಗೆ ಕಾಂಗ್ರೆಸ್ ಕೊಡುಗೆ ಅಪಾರ : ವಿನಯ ಕುಮಾರ್ ಸೊರಕೆ -Vishwanews24

ಮಂಗಳೂರು:ಇಂಟಕ್‌ನಿಂದ ಕಾಂಗ್ರೆಸ್ ಸ್ಥಾಪನಾ ದಿನಾಚರಣೆ :ಕಾಂಗ್ರೆಸ್  ದೇಶಕ್ಕೆ ಸ್ವಾತಂತ್ರ ಗಳಿಸಿಕೊಟ್ಟ ಪಕ್ಷವಾಗಿದ್ದು ,ಬಡತನ ನಿವಾರಣೆಗೆ ಕಾಂಗ್ರೆಸ್ ಕೊಡುಗೆ ಅಪಾರ : ವಿನಯ ಕುಮಾರ್ ಸೊರಕೆ -Vishwanews24

ಕಾಂಗ್ರೆಸ್ ಸ್ಥಾಪನಾ ದಿನಾಚರಣೆ ಹಾಗೂ ರಾಷ್ಟ್ರೀಯ ಇಂಟಕ್ ನಾಯಕ ರಾಕೇಶ್ ಮಲ್ಲಿ ಅವರ 50ನೇ ಹುಟ್ಟು ಹಬ್ಬದ ಪ್ರಯುಕ್ತ ಬೃಹತ್ ರಕ್ತದಾನ ಹಾಗೂ ಅಕ್ಕಿ ವಿತರಣಾ ಕಾರ್ಯಕ್ರಮ..

ಮಂಗಳೂರು,: ಇಂಟಕ್ ಹಾಗೂ ಯೂತ್ ಇಂಟಕ್ ದಕ್ಷಿಣ ಕನ್ನಡ ಜಿಲ್ಲಾ ಘಟಕದ ಆಶ್ರಯದಲ್ಲಿ ರೆಡ್‌ಕ್ರಾಸ್ ಸೊಸೈಟಿ ಬ್ಲಡ್ ಬ್ಯಾಂಕ್ ಲೇಡಿಗೋಶನ್ ಆಸ್ಪತ್ರೆ ಸಹಯೋಗದೊಂದಿಗೆ ಕಾಂಗ್ರೆಸ್ ಸ್ಥಾಪನಾ ದಿನಾಚರಣೆ ಹಾಗೂ ರಾಷ್ಟ್ರೀಯ ಇಂಟಕ್ ನಾಯಕ ರಾಕೇಶ್ ಮಲ್ಲಿ ಅವರ 50ನೇ ಹುಟ್ಟು ಹಬ್ಬದ ಪ್ರಯುಕ್ತ ಬೃಹತ್ ರಕ್ತದಾನ ಹಾಗೂ ಅಕ್ಕಿ ವಿತರಣಾ ಕಾರ್ಯಕ್ರಮ ನಗರದ ಪುರಭವನದಲ್ಲಿ ಇಂದು ನಡೆಯಿತು.

ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಮಾಜಿ ಸಚಿವ ವಿನಯ ಕುಮಾರ್ ಸೊರಕೆ, ಕೇಂದ್ರ ಸರಕಾರ ಅನುಸರಿಸುತ್ತಿರುವ ಕಾರ್ಮಿಕ, ರೈತ ವಿರೋಧಿ ನೀತಿಯ ಹಿನ್ನೆಲೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಕಾರ್ಮಿಕರು ಹಾಗೂ ರೈತರಿಗೆ ಬೆಂಬಲವಾಗಿ ನಿಲ್ಲುವ ಸಂಕಲ್ಪ ತೊಡಬೇಕು ಎಂದರು.

ಕಾಂಗ್ರೆಸ್ ಪಕ್ಷ ದೇಶಕ್ಕೆ ಸ್ವಾತಂತ್ರ ಗಳಿಸಿಕೊಟ್ಟ ಪಕ್ಷವಾಗಿದ್ದು ಸತ್ಯ, ಶಾಂತಿ, ಅಹಿಂಸೆ ಮೂಲಕವೂ ಗೆಲುವು ಸಾಧಿಸಬಹುದು ಎಂಬುದನ್ನು ಜಗತ್ತಿಗೆ ತೋರಿಸಿಕೊಟ್ಟಿದೆ. ದೇಶದ ಏಕತೆ, ಬಡತನ ನಿವಾರಣೆಗೆ ಕಾಂಗ್ರೆಸ್ ಬಹಳಷ್ಟು ಕೊಡುಗೆಗಳನ್ನು ನೀಡಿದೆ ಎಂದವರು ಹೇಳಿದರು.

ಇಂಟಕ್ ರಾಷ್ಟ್ರೀಯ ಕಾರ್ಯದರ್ಶಿ ರಾಕೇಶ್ ಮಲ್ಲಿ ಅವರು ಮಾತನಾಡಿ, ಕೇಂದ್ರ ಸರಕಾರ ದೇಶದ ಕೈಗಾರಿಕೆ, ಸಂಸ್ಥೆಗಳನ್ನು ಖಾಸಗೀಕರಣ ಮಾಡುತ್ತಿದೆ. ಇದರಿಂದಾಗಿ ದೇಶದ ಜನತೆಗೆ ಉದ್ಯೋಗ ಇಲ್ಲದಂತಾಗಿದೆ. ಇದು ಕಳವಳಕಾರಿ ವಿಚಾರವಾಗಿದೆ. ಇಂಟಕ್‌ನ್ನು ಇನ್ನಷ್ಟು ಬಲಪಡಿಸಿ ಕೇಂದ್ರ ಸರಕಾರದ ಕಾರ್ಮಿಕ ವಿರೋಧಿ ನೀತಿ ವಿರುದ್ಧ ಅಭಿಯಾನ ನಡೆಸಲಾಗುವುದು ಎಂದು ಹೇಳಿದರು.

ಮಾಜಿ ಸಚಿವ ರಮಾನಾಥ ರೈ, ಮಾಜಿ ಶಾಸಕ ಬಿ.ಎ. ಮೊದಿನ್ ಬಾವಾ, ಮಾಜಿ ಮೇಯರ್‌ಗಳಾದ ಭಾಸ್ಕರ್ ಮೊಲಿ, ಶಶಿಧರ ಹೆಗ್ಡೆ, ಕವಿತಾ ಸನಿಲ್, ಯುವ ಇಂಟಕ್ ರಾಜ್ಯಾಧ್ಯಕ್ಷ ವರುಣ್ ಕುಮಾರ್ ಎಸ್.ಕೆ, ಪ್ರಮುಖರಾದ ಕಳ್ಳಿಗೆ ತಾರಾನಾಥ ಶೆಟ್ಟಿ, ಕೋಡಿಜಾಲ್ ಇಬ್ರಾಹಿಂ, ತೇಜಸ್ವಿ ರಾಜ್, ಮಹಾಬಲ ಮಾರ್ಲ, ವಿಶ್ವಾಸ್ ದಾಸ್, ಲಕ್ಷ್ಮೀ ವೆಂಕಟೇಶ್, ಸಿ.ಎ. ರಹೀಂ, ಬಿ.ಕೆ.ಸುರೇಶ್, ಅಬೂಬಕರ್, ಯುವ ಇಂಟಕ್ ಅಧ್ಯಕ್ಷರಾದ ಪುನೀತ್ ಶೆಟ್ಟಿ, ಚಿರಂಜೀವಿ ಅಂಚನ್, ಶಿಪಾಲ್‌ರಾಜ್, ಸಂಪತ್ ಲೋಬೋ, ಪದ್ಮಸ್ಮಿತ್ ಅಧಿಕಾರಿ, ಹರೀಶ್ ರಾವ್, ಸಿದ್ದಿಕ್ ಹಸನ್, ಮೋಹನ್ ಕೋಟ್ಯಾನ್, ಜಯಪ್ರಕಾಶ್, ಶಾಫಿ ಕುತ್ತಮೊಟ್ಟೆ ಮೊದಲಾದವರು ಉಪಸ್ಥಿತರಿದ್ದರು.

ರಾಜ್ಯ ಯುವ ಇಂಟಕ್ ಪ್ರಧಾನ ಕಾರ್ಯದರ್ಶಿ ದಿನಕರ್ ಶೆಟ್ಟಿ ಸ್ವಾಗತಿಸಿದರು. ದ.ಕ ಜಿಲ್ಲಾ ಇಂಟಕ್ ಅಧ್ಯಕ್ಷ ಮನೋಹರ್ ಶೆಟ್ಟಿ ವಂದಿಸಿದರು. ಸಾಹಿಲ್ ರೈ ಮತ್ತು ಬೊಂಡಾಲ ಚಿತ್ತರಂಜನ್ ಶೆಟ್ಟಿ ಕಾರ್ಯಕ್ರಮ ನಿರ್ವಹಿಸಿದರು

Vishwa News 24

Recent Posts

ಚುನಾವಣೆ ಗೆಲ್ಲಲು ಬಿಜೆಪಿಯಿಂದ ಚುನಾವಣಾ ಆಯೋಗದ ದುರುಪಯೋಗ : ದಿನೇಶ್ ಗುಂಡೂರಾವ್ -vishwanews24

ಇ.ಡಿ, ಐಟಿಯವರು ಬಿಜೆಪಿಗೆ ಸಹಾಯ ಮಾಡುತ್ತಿದ್ದಾರೆ : ದಿನೇಶ್ ಗುಂಡೂರಾವ್ ಆರೋಪ  ಮಂಗಳೂರು: ಚುನಾವಣೆ ಗೆಲ್ಲಲು ಬಿಜೆಪಿಯಿಂದ ಚುನಾವಣಾ ಆಯೋಗದ…

23 hours ago

ಕೇರಳ ವಿಧಾನಸಭೆಯ ನೂತನ ಸ್ಪೀಕರ್ ಆಗಿ ತಿರುವಾಂಚೂರ್ ರಾಧಾಕೃಷ್ಣನ್ ಆಯ್ಕೆ -vishwanews24

ಕೇರಳ ವಿಧಾನಸಭೆಯ ನೂತನ ಸ್ಪೀಕರ್ ಆಗಿ ತಿರುವಾಂಚೂರ್ ರಾಧಾಕೃಷ್ಣನ್ ಆಯ್ಕೆ ತಿರುವನಂತಪುರಂ : ಹಿರಿಯ ಕಾಂಗ್ರೆಸ್ ನಾಯಕ ಹಾಗೂ ಎಂಟು…

1 day ago

ಕಟಪಾಡಿಯಲ್ಲಿ ಮೇ.22 ,23, 24 ರಂದು ಹಲಸು ಮೇಳ – 2026 -vishwanews24

ಕಟಪಾಡಿಯಲ್ಲಿ ಮೇ.22 ,23, 24 ರಂದು ಹಲಸು ಮೇಳ - 2026 ಕಟಪಾಡಿಯ SVS ಕ್ರೀಡಾಂಗಣದಲ್ಲಿ ಮೇ 22 ರಿಂದ…

1 day ago

ವಿಟ್ಲ : ಅಕ್ರಮ ಗೋ ಸಾಗಾಟ ಆರೋಪ: ಗೋವು ಸಹಿತ ವಾಹನ ಚಾಲಕ ವಶಕ್ಕೆ -vishwanews24

ವಿಟ್ಲ : ಅಕ್ರಮ ಗೋ ಸಾಗಾಟ ಆರೋಪ: ಗೋವು ಸಹಿತ ವಾಹನ ಚಾಲಕ ವಶಕ್ಕೆ ಕೊಳ್ನಾಡು: ಪಂಜರಕೋಡಿ ಎಂಬಲ್ಲಿ ಪಿಕಪ್…

1 day ago

ಉಡುಪಿ : ಮೀನು ಮಾರಾಟ ಫೆಡರೇಶನ್ ವತಿಯಿಂದ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ : ಯಶ್ಪಾಲ್ ಸುವರ್ಣ -vishwanews24

ಉಡುಪಿ : ಮೀನು ಮಾರಾಟ ಫೆಡರೇಶನ್ ವತಿಯಿಂದ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ : ಯಶ್ಪಾಲ್ ಎ ಸುವರ್ಣ ಉಡುಪಿ:…

1 day ago

ಉಡುಪಿ: ಜೂ.1ರಿಂದ ಡಾ.ಟಿಎಂಎ ಪೈ ಆಸ್ಪತ್ರೆ ಸ್ಥಳಾಂತರ -vishwanews24

ಉಡುಪಿ: ಜೂ.1ರಿಂದ ಡಾ.ಟಿಎಂಎ ಪೈ ಆಸ್ಪತ್ರೆ ಸ್ಥಳಾಂತರ ಉಡುಪಿ : ಉಡುಪಿಯ ಡಾ. ಟಿಎಂಎ ಪೈ ಆಸ್ಪತ್ರೆಯು ಉಡುಪಿ ಸ್ವಾಗತ…

1 day ago