ಮಂಗಳೂರು:ಎಲ್ಲಾ ರೀತಿಯ ಕಾನೂನುಬಾಹಿರ ಚಟುವಟಿಕೆಗಳಿಗೆ ಕಠಿಣ ಕಾನೂನು ಕ್ರಮ :  ನೂತನ ಪೊಲೀಸ್ ಕಮಿಷನರ್ ಎನ್ ಶಶಿಕುಮಾರ್ -Vishwanews24

Featured, ದಕ್ಷಿಣ ಕನ್ನಡ

ಮಂಗಳೂರು:ಎಲ್ಲಾ ರೀತಿಯ ಕಾನೂನುಬಾಹಿರ ಚಟುವಟಿಕೆಗಳಿಗೆ ಕಠಿಣ ಕಾನೂನು ಕ್ರಮ :  ನೂತನ ಪೊಲೀಸ್ ಕಮಿಷನರ್ ಎನ್ ಶಶಿಕುಮಾರ್ –Vishwanews24

ಮಂಗಳೂರು : ಅಕ್ರಮ ಮರಳುಗಾರಿಕೆ ಸೇರಿದಂತೆ ಕಾನೂನುಬಾಹಿರ ಚಟುವಟಿಕೆ ನಿಯಂತ್ರಿಸಲು ಪ್ರಾಮಾಣಿಕ ಪ್ರಯತ್ನ ಮಾಡಲಾಗುವುದು ಜೊತೆಗೆ ಸರ ಅಪಹರಣ, ಕಳ್ಳತನ ಮೊದಲಾದ ಕೃತ್ಯಗಳನ್ನು ತಡೆಗಟ್ಟಲು ಈಗಾಗಲೇ ನಗರದ ಪೊಲೀಸರು ಉತ್ತಮ ಕೆಲಸ ಮಾಡಿದ್ದಾರೆ. ಅದನ್ನು ಮತ್ತಷ್ಟು ಪರಿಣಾಮಕಾರಿಯಾಗಿ ಮಾಡಲಾಗುವುದು ಎಂದು ಮಂಗಳೂರಿನ ನೂತನ ಪೊಲೀಸ್ ಕಮಿಷನರ್ ಎನ್ ಶಶಿಕುಮಾರ್ ಹೇಳಿದ್ದಾರೆ.

ಅವರು, ಶುಕ್ರವಾರ ಸಂಜೆ ಮಂಗಳೂರಿನ ನೂತನ ಪೊಲೀಸ್ ಆಯುಕ್ತರಾಗಿ ಎನ್ ಶಶಿಕುಮಾರ್ ಅವರು ಅಧಿಕಾರ ಸ್ವೀಕರಿಸಿ ಬಳಿಕ ಮಾಧ್ಯಮದೊಂದಿಗೆ ಮಾತನಾಡಿದರು. ಮಂಗಳೂರು ಪೊಲೀಸ್ ಆಯುಕ್ತಾಲಯ ವ್ಯಾಪ್ತಿಯಲ್ಲಿ ಬೀಟ್ ಪೊಲೀಸ್ ವ್ಯವಸ್ಥೆಯನ್ನು ಬಲಪಡಿಸಲಾಗುವುದು. ಮಂಗಳೂರಿನಲ್ಲಿ ಪ್ರಸ್ತುತ ಇರುವ ಬೀಟ್ ಬಗ್ಗೆ ಪರಿಶೀಲನೆ ನಡೆಸಿದ ಬಳಿಕ ಬಲವರ್ಧನೆ ಮಾಡುವೆ ಎಂದರು.

ಕೊರೋನ ನಿಯಂತ್ರಣ ಕಾರ್ಯದಲ್ಲಿ ಪೊಲೀಸರು ಹೆಚ್ಚು ತೊಡಗಿಸಿಕೊಂಡಿದ್ದರಿಂದ ಬೀಟ್ ವ್ಯವಸ್ಥೆ ಅಷ್ಟು ಪರಿಣಾಮಕಾರಿಯಾಗಿ ಅನುಷ್ಠಾನಗೊಳ್ಳದಿರಬಹುದು. ಬೀಟ್ ವ್ಯವಸ್ಥೆಯನ್ನು ಮತ್ತೆ ಬಲಗೊಳಿಸಲು ಕ್ರಮ ತೆಗೆದುಕೊಳ್ಳುತ್ತೇನೆ.

ನಗರದಲ್ಲಿ ಪೊಲೀಸರ ಮೇಲೆ ದಾಳಿ ನಡೆಸಿದ ಘಟನೆ ಬಗ್ಗೆ ತಿಳಿದಿದೆ. ಇಂತಹ ಕೃತ್ಯವನ್ನು ಯಾವುದೇ ಕಾರಣಕ್ಕೂ ಸಹಿಸದೆ ಅತ್ಯಂತ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು. ಪೊಲೀಸರು ಸಾರ್ವಜನಿಕರ ಹಿತದೃಷ್ಟಿಯಿಂದ ಕೆಲಸ ಮಾಡುವಾಗ ಯಾವುದೇ ರೀತಿಯ ಭಯ ಪಡುವ ಅಗತ್ಯವಿಲ್ಲ.

ಸರ ಅಪಹರಣ, ಕಳ್ಳತನ ಮೊದಲಾದ ಕೃತ್ಯಗಳನ್ನು ತಡೆಗಟ್ಟಲು ಈಗಾಗಲೇ ನಗರದ ಪೊಲೀಸರು ಉತ್ತಮ ಕೆಲಸ ಮಾಡಿದ್ದಾರೆ. ಅದನ್ನು ಮತ್ತಷ್ಟು ಪರಿಣಾಮಕಾರಿಯಾಗಿ ಮಾಡಲಾಗುವುದು. ಅಕ್ರಮ ಮರಳುಗಾರಿಕೆ ಸೇರಿದಂತೆ ಕಾನೂನುಬಾಹಿರ ಚಟುವಟಿಕೆ ನಿಯಂತ್ರಿಸಲು ಪ್ರಾಮಾಣಿಕ ಪ್ರಯತ್ನ ಮಾಡಲಾಗುವುದು ಎಂದರು.

ಆರಂಭದಲ್ಲಿ ನಗರದ ಪೊಲೀಸ್ ಆಯುಕ್ತಾಲಯದ ಕಚೇರಿಯಲ್ಲಿ ನಡೆದ ಸರಳ ಸಮಾರಂಭದಲ್ಲಿ ಮಂಗಳೂರಿನ ನೂತನ ಪೊಲೀಸ್ ಕಮಿಷನರ್ ಎನ್ ಶಶಿಕುಮಾರ್ ಅವರಿಗೆ ನಿರ್ಗಮನ ಕಮಿಷನರ್ ವಿಕಾಸ್ ಕುಮಾರ್ ಅವರು ಅಧಿಕಾರ ಹಸ್ತಾಂತರಿಸಿದರು.

ಈ ವೇಳೆ ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ಡಿಸಿಪಿ ಹರಿರಾಂ ಶಂಕರ್, ಅಪರಾಧ ಮತ್ತು ಸಂಚಾರ ವಿಭಾಗದ ಡಿಸಿಪಿ ವಿನಯ್ ಎ.ಗಾಂವ್ಕರ್ ಉಪಸ್ಥಿತರಿದ್ದರು.

https://bit.ly/3rNNjuchttp://ಮಂಗಳೂರು: ಬಬ್ಬುಸ್ವಾಮಿ ಕ್ಷೇತ್ರದ ಕಾಣಿಕೆ ಡಬ್ಬಿಗಳಲ್ಲಿ ಅವಹೇಳನಕಾರಿ ಬರಹ ಪತ್ತೆ , ನಗರದ ಮೂರು ದೈವಸ್ಥಾನಗಳಲ್ಲಿ ದುಷ್ಕರ್ಮಿಗಳಿಂದ ಇಂತಹ ಕೃತ್ಯ -Vishwanews24