Featured

ಮಂಗಳೂರು:ಕೊರೊನಾ ಹಿನ್ನೆಲೆ : ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಈ ಬಾರಿ ಶಾಲಾ ಮಕ್ಕಳಿಂದ ಯಾವುದೇ ಪಥ ಸಂಚಲನ ಸಾಂಸ್ಕೃತಿಕ ಕಾರ್ಯಕ್ರಮಗಳು ಇರುವುದಿಲ್ಲ :ಅಪರ ಜಿಲ್ಲಾಧಿಕಾರಿ -Vishwanews24

ಮಂಗಳೂರು:ಕೊರೊನಾ ಹಿನ್ನೆಲೆ : ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಈ ಬಾರಿ ಶಾಲಾ ಮಕ್ಕಳಿಂದ ಯಾವುದೇ ಪಥ ಸಂಚಲನ ಸಾಂಸ್ಕೃತಿಕ ಕಾರ್ಯಕ್ರಮಗಳು ಇರುವುದಿಲ್ಲ :ಅಪರ ಜಿಲ್ಲಾಧಿಕಾರಿ -Vishwanews24

ಮಂಗಳೂರು,: ಜಿಲ್ಲೆಯಲ್ಲಿ ನಡೆಯುವ ಈ ವರ್ಷದ ಗಣರಾಜ್ಯೋತ್ಸವ ಕಾರ್ಯಕ್ರಮವನ್ನು ಕೋವಿಡ್ ಮುನ್ನೆಚ್ಚರಿಕಾ ಕ್ರಮಗಳನ್ನು ಅನುಸರಿಸುವುದರೊಂದಿಗೆ ಅರ್ಥಪೂರ್ಣವಾಗಿ ಆಚರಿಸಬೇಕು ಎಂದು ಅಪರ ಜಿಲ್ಲಾಧಿಕಾರಿ ಎಮ್. ಜೆ. ರೂಪಾ ತಿಳಿಸಿದರು.

ಅವರು ಇಂದು ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಗಣರಾಜ್ಯೋತ್ಸವ ಕಾರ್ಯಕ್ರಮದ 2ನೇ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ನೆಹರು ಮೈದಾನದಲ್ಲಿ ಜನವರಿ 26 ರಂದು ಬೆಳಗ್ಗೆ 9 ಗಂಟೆಗೆ ಗಣರಾಜ್ಯೋತ್ಸವ ಕಾರ್ಯಕ್ರಮ ನಡೆಯಲಿದ್ದು, ಜಿಲ್ಲಾ ಉಸ್ತುವಾರಿ ಸಚಿವರು ಧ್ವಜಾರೋಹಣ ನೆರೆವೇರಿಸಲಿದ್ದಾರೆ. ಕಾರ್ಯಕ್ರಮಕ್ಕೆ ಜನಪ್ರತಿನಿಧಿಗಳು, ಗಣ್ಯರು ಆಗಮಿಸುತ್ತಿದ್ದು, ಎಲ್ಲಾ ಅಗತ್ಯ ಸಿದ್ಧತೆಗಳನ್ನು ಅಚ್ಚುಕಟ್ಟಾಗಿ ನಿರ್ವಹಿಸಬೇಕು ಎಂದರು.

ಸ್ವಾತಂತ್ರ್ಯ ಹೋರಾಟಗಾರ ಸುಭಾಷ್ ಚಂದ್ರ ಬೋಸ್ 125ನೇ ಜನ್ಮದಿನ : ದೇಶದ ಸ್ವಾತಂತ್ರ್ಯಕ್ಕಾಗಿ ಅವರು ಮಾಡಿದ ತ್ಯಾಗ ಮತ್ತು ಸಮರ್ಪಣೆಯನ್ನು ಸದಾ ಸ್ಮರಿಸುತ್ತೇವೆ : ಪ್ರಧಾನಿ ಮೋದಿ-Vishwanews24

ಹಳೆ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆಯುವ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಸ್ಕೌಟ್ ಮಕ್ಕಳು ಭಾಗವಹಿಸಲಿದ್ದಾರೆ. ಕೋವಿಡ್ ಹಿನ್ನೆಲೆ ಈ ಬಾರಿ ಶಾಲಾ ಮಕ್ಕಳಿಂದ ಯಾವುದೇ ಪಥ ಸಂಚಲನ, ಸಾಂಸ್ಕೃತಿಕ ಕಾರ್ಯಕ್ರಮಗಳು ಇರುವುದಿಲ್ಲ. ಪೊಲೀಸ್, ಗೃಹರಕ್ಷಕ ದಳದವರಿಂದ ಪಥಸಂಚಲನ, ಪರೇಡ್ ನಡೆಯಲಿದೆ ಎಂದರು.

ಕಾರ್ಯಕ್ರಮದಲ್ಲಿ ಜಿಲ್ಲಾ ಮಟ್ಟದ ಹೊಯ್ಸಳ ಮತ್ತು ಕೆಳದಿ ಚೆನ್ನಮ್ಮ ಪ್ರಶಸ್ತಿಗೆ ಆಯ್ಕೆಯಾದವರಿಗೆ ಹಾಗೂ ಆರೋಗ್ಯ ಕ್ಷೇತ್ರದಲ್ಲಿ ಉತ್ತಮ ಕಾರ್ಯ ನಿರ್ವಹಿಸಿರುವ 7 ವೈದ್ಯಕೀಯ ಸಂಸ್ಥೆಗಳಿಗೆ ಪ್ರಶಸ್ತಿ ನೀಡಿ ಸನ್ಮಾನಿಸಲಾಗುವುದು ಎಂದರು.

ಕಾರ್ಯಕ್ರಮದ ಯಶಸ್ಸಿಗೆ ಉಪ ಸಮಿತಿಗಳು ಕೈಗೊಂಡಿರುವ ಕಾರ್ಯಗಳ ಬಗ್ಗೆ ಮಾಹಿತಿ ಪಡೆದರು.

ಸಭೆಯಲ್ಲಿ ಉಪ ಆಯುಕ್ತರು ಜಿ. ಸಂತೋಷ್ ಕುಮಾರ್, ಉಪ ತಹಶೀಲ್ದಾರ್ ಜಯಂತ್ ಹಾಗೂ ವಿವಿಧ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.

ಉಡುಪಿಯಲ್ಲಿ 5 ಕೋಟಿ ವೆಚ್ಚದಲ್ಲಿ ಕರಕುಶಲ ವಸ್ತುಗಳ ಶೋರೂಂ ಆರಂಭ: ಡಾ.ಬೇಳೂರು ರಾಘವೇಂದ್ರ ಶೆಟ್ಟಿ -Vishwanews24

Vishwa News 24

Recent Posts

ಕಾರ್ಕಳ: ನಾಪತ್ತೆಯಾಗಿದ್ದ ವ್ಯಕ್ತಿಯ ಮೃತದೇಹ ಪತ್ತೆ – vishwanews24

ಕಾರ್ಕಳ:   ಎಣ್ಣೆಹೊಳೆ ಸೇತುವೆಯ ಕೆಳಭಾಗದ ನದಿಯಲ್ಲಿ ನಾಪತ್ತೆಯಾಗಿದ್ದ ವ್ಯಕ್ತಿಯ ಮೃತದೇಹ ಪತ್ತೆ ಕಾರ್ಕಳ: ಮರ್ಣೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಎಣ್ಣೆಹೊಳೆ…

7 hours ago

ಕಾರ್ಕಳ:  ನಾಪತ್ತೆಯಾಗಿದ್ದ ವ್ಯಕ್ತಿಯ ಮೃತದೇಹ ಪತ್ತೆ – vishwanews24

ಕಾರ್ಕಳ:  ನಾಪತ್ತೆಯಾಗಿದ್ದ ಎಣ್ಣೆಹೊಳೆ ಸೇತುವೆಯ ಕೆಳಭಾಗದ ನದಿಯಲ್ಲಿ ವ್ಯಕ್ತಿಯ ಮೃತದೇಹ ಪತ್ತೆ ಕಾರ್ಕಳ: ಮರ್ಣೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಎಣ್ಣೆಹೊಳೆ…

7 hours ago

ಕಿರುಕುಳ ಆರೋಪ : ಇಬ್ಬರು ಮಕ್ಕಳೊಂದಿಗೆ ತಾಯಿ ಆತ್ಮಹತ್ಯೆ – vishwanews24

ಕಿರುಕುಳ ಆರೋಪ : ಇಬ್ಬರು ಮಕ್ಕಳೊಂದಿಗೆ ತಾಯಿ ಆತ್ಮಹತ್ಯೆ ಬಳ್ಳಾರಿ: ಗಂಡನ ಕಿರುಕುಳ ತಾಳಲಾರದೆ ತಾಯಿಯೊಬ್ಬಳು ತನ್ನ ಇಬ್ಬರು ಮಕ್ಕಳನ್ನು…

7 hours ago

ಮಂಗಳೂರಿನಿಂದ ಅಗತ್ತಿ ದ್ವೀಪಕ್ಕೆ ವಿಮಾನಯಾನ ಸೇವೆ : ನೂತನ ಚಳಿಗಾಲದ ವೇಳಾಪಟ್ಟಿ ಪ್ರಕಟ – vishwanews24

ಮಂಗಳೂರಿನಿಂದ ಅಗತ್ತಿ ದ್ವೀಪಕ್ಕೆ ವಿಮಾನಯಾನ ಸೇವೆ ;ನೂತನ 'ಚಳಿಗಾಲದ ವೇಳಾಪಟ್ಟಿ ಪ್ರಕಟ ಮಂಗಳೂರು : ಕರಾವಳಿಯ ಪ್ರಯಾಣಿಕರಿಗೆ ದೇಶೀಯ ಹಾಗೂ…

7 hours ago

ಕಾಂಗ್ರೆಸ್ ಸೇರ್ಪಡೆ ಕುರಿತು ಅಂತಿಮ ನಿರ್ಧಾರ ಕೈಗೊಂಡಿಲ್ಲ : ರಘುಪತಿ ಭಟ್ – vishwanews24

ಕಾಂಗ್ರೆಸ್‌ನಿಂದ ಆಹ್ವಾನ ಬಂದಿರುವುದು ನಿಜ  .. ಪಕ್ಷ ಬದಲಾವಣೆಯಂತಹ ನಿರ್ಧಾರವನ್ನು ಏಕಾಏಕಿ ತೆಗೆದುಕೊಳ್ಳಲು ಸಾಧ್ಯವಿಲ್ಲ .. 2028ರ ವಿಧಾನಸಭಾ ಚುನಾವಣೆಯಲ್ಲಿ…

12 hours ago

ಉಡುಪಿ: ಕಾಮಗಾರಿ ಹಿನ್ನೆಲೆ ; ಸಂಚಾರಕ್ಕೆ ಬದಲಿ ಮಾರ್ಗ – vishwanews24

ಉಡುಪಿ:  ಕಾಮಗಾರಿ ಹಿನ್ನೆಲೆ ಸಂಚಾರಕ್ಕೆ ಬದಲಿ ಮಾರ್ಗ    ಉಡುಪಿ: ಉಡುಪಿ ನಗರಸಭಾ ವ್ಯಾಪ್ತಿಯ ತೆಂಕಪೇಟೆ ವಾರ್ಡಿನ ಬಡಗುಪೇಟೆ ರಸ್ತೆಯಲ್ಲಿ ಒಳಚರಂಡಿ…

12 hours ago