Featured

ಮಂಗಳೂರು:ಕೋರಿಯರ್ ಮೂಲಕ ಎಂಡಿಎಂಎ ಸಾಗಾಟದ ಜಾಲ ಪತ್ತೆ: ₹1.58 ಕೋಟಿ ಮೌಲ್ಯದ ಮಾದಕವಸ್ತು ವಶ – vishwanews24

ಕೋರಿಯರ್ ಮೂಲಕ ವಾಟರ್ ಪ್ಯೂರಿಫೈಯರ್‌ನಲ್ಲಿ ಎಂಡಿಎಂಎ ಸಾಗಾಟ..

ಮಂಗಳೂರು ಸಿಸಿಬಿ ಬಲೆಗೆ ಮೂವರು ಆರೋಪಿಗಳು; ₹1.58 ಕೋಟಿ ಮೌಲ್ಯದ ಸೊತ್ತು ವಶ

ಮಂಗಳೂರು: ಕೋರಿಯರ್ ಮೂಲಕ ವಾಟರ್ ಪ್ಯೂರಿಫೈಯರ್‌ನಲ್ಲಿ ಅಡಗಿಸಿಟ್ಟು ಎಂಡಿಎಂಎ (MDMA) ಮಾದಕವಸ್ತುವನ್ನು ಮಂಗಳೂರಿಗೆ ಸಾಗಿಸಿ, ಕೇರಳ ಸೇರಿದಂತೆ ವಿವಿಧ ಪ್ರದೇಶಗಳಲ್ಲಿ ಮಾರಾಟ ಮಾಡಲು ಸಂಚು ರೂಪಿಸಿದ್ದ ಜಾಲವನ್ನು ಮಂಗಳೂರು ಸಿಸಿಬಿ ಪೊಲೀಸರು ಪತ್ತೆಹಚ್ಚಿದ್ದಾರೆ. ಕಾರ್ಯಾಚರಣೆಯಲ್ಲಿ ಮೂವರು ಆರೋಪಿಗಳನ್ನು ಬಂಧಿಸಿ,  ಒಟ್ಟು 1.58 ಕೋಟಿ ರೂ. ಮೌಲ್ಯದ 1 ಕೆಜಿ 796.96 ಗ್ರಾಂ ಎಂಡಿಎಂಎ ವಶ ಪಡಿಸಿಕೊಂಡಿದ್ದಾರೆ.

ಬಂಧಿತರನ್ನು ಕೇರಳದ ಕಾಸರಗೋಡು ಜಿಲ್ಲೆಯ ಮಂಗಳ್ಪಾಡಿ ಅಂಚೆ ವ್ಯಾಪ್ತಿಯ ಬೈದಲಾದ ಅನೀಸಾ ಮಂಜಿಲ್ ನಿವಾಸಿ ಅಬ್ದುಲ್ ಹಾಪೀಲ್ (25), ಮಂಗಳೂರಿನ ಕೂಳೂರು ಕಸಬಾ ಬೆಂಗ್ರೆಯ ಪಿ. ಬಾವ ಹೌಸ್ ನಿವಾಸಿ ಜಿಯಾವುಲ್ ಹಕ್ (30) ಹಾಗೂ ಮಂಗಳೂರಿನ ಪಾಂಡೇಶ್ವರದ ಓಲ್ಡ್ ಕೆಂಟ್ ರಸ್ತೆಯ ಆಯಿಷಾ ಅಪಾರ್ಟ್‌ಮೆಂಟ್‌ನ ಫ್ಲ್ಯಾಟ್ ಸಂಖ್ಯೆ 201ರಲ್ಲಿ ವಾಸವಿರುವ ಅಲ್ತಾಫ್ (28) ಎಂದು ಗುರುತಿಸಲಾಗಿದೆ. ಅಲ್ತಾಫ್‌ನ ಸ್ವಂತ ವಿಳಾಸ ಮಂಗಳೂರಿನ ಬಜಾಲ್ ಗ್ರಾಮದ ಜಲ್ಲಿಗುಡ್ಡೆ ಅಂಚೆ ವ್ಯಾಪ್ತಿಯ ಫೈಸಲ್ ನಗರದ ಸಿರಿಸೀಮೆ ನರ್ಸರಿ ಬಳಿಯಾಗಿದೆ.

ಮಂಗಳೂರು ನಗರದಲ್ಲಿ ಸಾರ್ವಜನಿಕರನ್ನು ಗುರಿಯಾಗಿಸಿಕೊಂಡು ನಿಷೇಧಿತ ಎಂಡಿಎಂಎ ಮಾದಕವಸ್ತುವನ್ನು ಮಾರಾಟ ಮಾಡಲಾಗುತ್ತಿದೆ ಎಂಬ ಖಚಿತ ಮಾಹಿತಿಯ ಮೇರೆಗೆ ಸಿಸಿಬಿ ಪೊಲೀಸರು ಅಕ್ಟೋಬರ್ 8ರಂದು ರಾತ್ರಿ 10 ಗಂಟೆಗೆ ಉಳ್ಳಾಲ ತಾಲೂಕಿನ ಕುಂಪಲದ ಡಿಮಾರ್ಟ್ ಬಳಿ ಕಾರ್ಯಾಚರಣೆ ನಡೆಸಿ ಆರೋಪಿಗಳನ್ನು ಬಂಧಿಸಿದ್ದಾರೆ.

ಆರೋಪಿಗಳಿಂದ 1 ಕೆಜಿ 796.96 ಗ್ರಾಂ ಎಂಡಿಎಂಎ, ಮೂರು ಮೊಬೈಲ್ ಫೋನ್‌ಗಳು, ಮಾದಕವಸ್ತು ಸಾಗಾಟಕ್ಕೆ ಬಳಸಿದ ಮಾರುತಿ ಸುಜುಕಿ ಸ್ವಿಫ್ಟ್ ಕಾರು ಮತ್ತು ಆಟೋರಿಕ್ಷಾ, ಕೋರಿಯರ್ ರಟ್ಟಿನ ಬಾಕ್ಸ್ ಹಾಗೂ ವಾಟರ್ ಪ್ಯೂರಿಫೈಯರ್ ಅನ್ನು ವಶಪಡಿಸಿಕೊಳ್ಳಲಾಗಿದೆ. ವಶಪಡಿಸಿಕೊಂಡ ಸೊತ್ತುಗಳ ಒಟ್ಟು ಮೌಲ್ಯ ₹1,63,84,000 ಎಂದು ಪೊಲೀಸರು ತಿಳಿಸಿದ್ದಾರೆ. ಎಂಡಿಎಂಎ ಮಾದಕವಸ್ತುವಿನ ಮೌಲ್ಯ ಸುಮಾರು ₹1.58 ಕೋಟಿ ಎಂದು ಅಂದಾಜಿಸಲಾಗಿದೆ.

ಪೊಲೀಸರ ಪ್ರಾಥಮಿಕ ತನಿಖೆಯ ಪ್ರಕಾರ, ಆರೋಪಿಗಳು ಪಂಜಾಬ್ ರಾಜ್ಯದ ಅಮೃತಸರದಿಂದ ಎಂಡಿಎಂಎ ಖರೀದಿಸಿ, ಅದನ್ನು ವಾಟರ್ ಪ್ಯೂರಿಫೈಯರ್‌ನ ನೀರು ಸಂಗ್ರಹವಾಗುವ ಭಾಗದಲ್ಲಿ ಭದ್ರವಾಗಿ ಅಡಗಿಸಿಡುತ್ತಿದ್ದರು. ಬಳಿಕ ಕೋರಿಯರ್ ಮೂಲಕ ಮಂಗಳೂರಿಗೆ ಕಳುಹಿಸಿ, ಇಲ್ಲಿಂದ ಕೇರಳ ರಾಜ್ಯ ಹಾಗೂ ಮಂಗಳೂರು ನಗರದ ವಿವಿಧ ಪ್ರದೇಶಗಳಿಗೆ ಪೂರೈಕೆ ಮಾಡಿ ಮಾರಾಟ ಮಾಡಲು ಸಂಚು ರೂಪಿಸಿದ್ದರು ಎನ್ನಲಾಗಿದೆ. ಈ ಜಾಲವನ್ನು ಆರಂಭಿಕ ಹಂತದಲ್ಲೇ ಪತ್ತೆಹಚ್ಚಿ ತಡೆಯುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.

ಆರೋಪಿ ಅಬ್ದುಲ್ ಹಾಪೀಲ್ ವಿರುದ್ಧ ಈ ಹಿಂದೆ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಮಾದಕವಸ್ತು ಸೇವನೆಗೆ ಸಂಬಂಧಿಸಿದ ಪ್ರಕರಣ ದಾಖಲಾಗಿತ್ತು. ಜಿಯಾವುಲ್ ಹಕ್ ದುಬೈನ ರಾಸ್ ಅಲ್ ಖೈಮಾದಲ್ಲಿ ಮಾದಕವಸ್ತು ಮಾರಾಟ ಪ್ರಕರಣದಲ್ಲಿ ಭಾಗಿಯಾಗಿ ಮೂರು ವರ್ಷಗಳ ಜೈಲು ಶಿಕ್ಷೆ ಅನುಭವಿಸಿ ಬಳಿಕ ಭಾರತಕ್ಕೆ ಮರಳಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಆರೋಪಿ ಅಲ್ತಾಫ್ ವಿರುದ್ಧವೂ ಈ ಹಿಂದೆ ಪಾಂಡೇಶ್ವರ ಪೊಲೀಸ್ ಠಾಣೆಯಲ್ಲಿ ಮಾದಕವಸ್ತು ಸೇವನೆಗೆ ಸಂಬಂಧಿಸಿದ ಪ್ರಕರಣ ದಾಖಲಾಗಿತ್ತು.

ಮೂವರು ಆರೋಪಿಗಳನ್ನು ವಿಚಾರಣೆಗೊಳಪಡಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ. ಈ ಸಂಬಂಧ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.

Vishwa News 24

Recent Posts

ನೋಯ್ಡಾ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ‘ನರೇಂದ್ರ ಮೋದಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ’ ಎಂದು ಮರುನಾಮಕರಣ: ಯೋಗಿ ಆದಿತ್ಯನಾಥ್ ಘೋಷಣೆ – vishwanews24

ನೊಯ್ಡಾ ವಿಮಾನ ನಿಲ್ದಾಣಕ್ಕೆ ನರೇಂದ್ರ ಮೋದಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಎಂದು ಮರುನಾಮಕರಣ ನವದೆಹಲಿ: ಉತ್ತರ ಪ್ರದೇಶದ ಜೆವಾರ್‌ನಲ್ಲಿರುವ ನೋಯ್ಡಾ…

8 minutes ago

ಮಂಗಳೂರು: MRPL ಅಪಘಾತದಲ್ಲಿ ಮೃತಪಟ್ಟ ಮನೀಶ್ ಕರ್ಕಡ ಕುಟುಂಬಕ್ಕೆ ಸಾಮಾಜಿಕ ಭದ್ರತಾ ಸೌಲಭ್ಯಗಳನ್ನು ಒದಗಿಸಿದ EPFO – vishwanews24

ಮಂಗಳೂರು: MRPL ಅಪಘಾತದಲ್ಲಿ ಮೃತಪಟ್ಟ ಮನೀಶ್ ಕರ್ಕಡ ಕುಟುಂಬಕ್ಕೆ ಸಾಮಾಜಿಕ ಭದ್ರತಾ ಸೌಲಭ್ಯಗಳನ್ನು ಒದಗಿಸಿದ EPFO ಮಂಗಳೂರು: ರಿಫೈನರಿ &…

36 minutes ago

ಗೃಹಲಕ್ಷ್ಮಿ ಯೋಜನೆ ಮರುಪರಿಶೀಲನೆ : ಹೊಸ ಅರ್ಜಿ, ಹೊಸ ಷರತ್ತುಗಳು ; ಈ ದಾಖಲೆಗಳು ಕಡ್ಡಾಯ – vishwanews24

ಗೃಹಲಕ್ಷ್ಮಿ ಯೋಜನೆ ಮರುಪರಿಶೀಲನೆ : ಹೊಸ ಅರ್ಜಿ, ಹೊಸ ಷರತ್ತುಗಳು ; ಈ ದಾಖಲೆಗಳು ಕಡ್ಡಾಯ  ಬೆಂಗಳೂರು: ಕರ್ನಾಟಕ ಸರ್ಕಾರದ…

44 minutes ago

ಉಡುಪಿ: ಉದ್ಯೋಗಕ್ಕಾಗಿ ಅಲೆದಾಡುವ ಯುವಜನರ ಬಳಿಗೇ ಉದ್ಯೋಗಾವಕಾಶ : ಡಾ. ಕೆ. ಪ್ರಕಾಶ್ ಶೆಟ್ಟಿ – vishwanews24

ಉಡುಪಿ: ಉದ್ಯೋಗಕ್ಕಾಗಿ ಅಲೆದಾಡುವ ಯುವಜನರ ಬಳಿಗೇ ಉದ್ಯೋಗಾವಕಾಶ : ಡಾ. ಕೆ. ಪ್ರಕಾಶ್ ಶೆಟ್ಟಿ ಉಡುಪಿ: ಯುವಜನರು ನಿರಂತರ ಪ್ರಯತ್ನದ…

58 minutes ago

ಮಂಗಳೂರು:  ಅನುಮಾನಾಸ್ಪದ ಸಾವು ಪ್ರಕರಣ ; ಎರಡು ತಿಂಗಳ ಬಳಿಕ ಸಮಾಧಿಯಿಂದ ಶವ ಹೊರತೆಗೆದು ಮರಣೋತ್ತರ ಪರೀಕ್ಷೆ – vishwanews24

ಮಂಗಳೂರು:  ಅನುಮಾನಾಸ್ಪದ ಸಾವು ಪ್ರಕರಣ ; ಎರಡು ತಿಂಗಳ ಬಳಿಕ ಸಮಾಧಿಯಿಂದ ಶವ ಹೊರತೆಗೆದು ಮರಣೋತ್ತರ ಪರೀಕ್ಷೆ ಮಂಗಳೂರು: ಅನುಮಾನಾಸ್ಪದ…

1 hour ago

ಸರ್ಕಾರಿ ನೌಕರರ ಬಡ್ತಿಗೆ ಆಸ್ತಿ ವಿವರ ಸಲ್ಲಿಕೆ ಕಡ್ಡಾಯ: ತಮಿಳುನಾಡು ಸರ್ಕಾರದಿಂದ ಮಹತ್ವದ ಆದೇಶ – vishwanews24

ಸರ್ಕಾರಿ ನೌಕರರ ಬಡ್ತಿಗೆ ಆಸ್ತಿ ವಿವರ ಸಲ್ಲಿಕೆ ಕಡ್ಡಾಯ: ತಮಿಳುನಾಡು ಸರ್ಕಾರದಿಂದ ಮಹತ್ವದ ಆದೇಶ ಚೆನ್ನೈ,: ರಾಜ್ಯದ ಎಲ್ಲಾ ಸರ್ಕಾರಿ…

4 hours ago