ಮಂಗಳೂರು: ಕೋವಿಡ್ ಸೋಂಕು ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ಸೋಂಕು ನಿಯಂತ್ರಿಸುವ ನಿಟ್ಟಿನಲ್ಲಿ ಈಗಾಗಲೇ ದ.ಕ. ಜಿಲ್ಲೆಯಲ್ಲಿ ಕೆಲವೊಂದು ನಿರ್ಬಂಧ ಹೇರಲಾಗಿದ್ದು, ಈ ನಡುವೆ ಯಕ್ಷಗಾನ, ಕೋಲ, ನೇಮ, ಪೂಜೆ, ಪುನಸ್ಕಾರಗಳು ಮತ್ತು ಸಾಂಪ್ರದಾಯಿಕ ಧಾರ್ಮಿಕ ಕಾರ್ಯಕ್ರಮಗಳನ್ನು ಕೋವಿಡ್ ನಿಯಮ ಪಾಲನೆಯೊಂದಿಗೆ ನಡೆಸಬಹುದೆಂದು ದ.ಕ. ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ್ ಪೂಜಾರಿ ಸ್ಪಷ್ಟಪಡಿಸಿದ್ದಾರೆ.
ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿರುವ ಅವರು, ದ.ಕ. ಜಿಲ್ಲಾಧಿಕಾರಿಯವರು ಹೊರಡಿಸಿರುವ ಆದೇಶಕ್ಕೆ ಸಾರ್ವಜನಿಕರು ಆತಂಕ ವ್ಯಕ್ತಪಡಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಮರು ಸ್ಪಷ್ಟನೆ ನೀಡಲು ಜಿಲ್ಲಾಧಿಕಾರಿಯವರಿಗೆ ತಿಳಿಸಿದ್ದೇನೆ. ಈಗಾಗಲೇ ಹಮ್ಮಿಕೊಂಡಿರುವ ಯಕ್ಷಗಾನ, ಕೋಲ, ನೇಮ, ಪೂಜೆ ಪುನಸ್ಕಾರ ಮತ್ತು ಸಾಂಪ್ರದಾಯಿಕ ಧಾರ್ಮಿಕ ಕಾರ್ಯಕ್ರಮಗಳು ಕೋವಿಡ್ ನಿಯಮ ಪಾಲನೆಯೊಂದಿಗೆ ನಡೆಸಬಹುದೆಂದು ಜಿಲ್ಲಾ ಉಸ್ತುವಾರಿ ಸಚಿವರು ಸ್ಪಷ್ಟಪಡಿಸಿದ್ದಾರೆ.
ಅಲ್ಲದೆ, ಬಯಲು ಪ್ರದೇಶ, ಮೈದಾನ ಪ್ರದೇಶದಲ್ಲಿ ಕಾರ್ಯಕ್ರಮ ನಡೆಸುವ ಸಂದರ್ಭ ಗರಿಷ್ಟ ೫೦೦ ಜನಕ್ಕಿಂತ ಜಾಸ್ತಿ ಜನ ಸೇರಿಸದಂತೆ ಉಲ್ಲೇಖಿಸಿದ್ದಾರೆ. ಕಡ್ಡಾಯವಾಗಿ ಮಾಸ್ಕ್ ಧರಿಸುವುದು, ಸಾಮಾಜಿಕ ಅಂತರ ಕಾಪಾಡಿಕೊಳ್ಳುವುದು ಸಾರ್ವಜನಿಕರ ಜವಾಬ್ದಾರಿಯಾಗಿದೆ ಎಂದು ಸಚಿವರು ತಿಳಿಸಿದ್ದಾರೆ.
ಉಡುಪಿ ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಅತ್ಯಂತ ಖಂಡನೀಯ ಕೃತ್ಯ : ರೆನೋಲ್ಡ್ ಪ್ರವೀಣ್ ಕುಮಾರ್ ಉಡುಪಿ: ಜಿಲ್ಲಾ ನ್ಯಾಯಾಲಯಕ್ಕೆ…
ಉಡುಪಿ : ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಸಂದೇಶ ; ಪೊಲೀಸರು, ಶ್ವಾನ ದಳದಿಂದ ಶೋಧ ಕಾರ್ಯಾಚರಣೆ ಉಡುಪಿ: ಉಡುಪಿ…
ಇಂದಿನಿಂದ ಟೆಲಿಗ್ರಾಮ್ ಮೇಲಿನ ನಿಷೇಧ ತೆರವು: ಮೆಸೇಜ್ ಎಡಿಟಿಂಗ್ ನಿರ್ಬಂಧ ಜೂ. 30ರವರೆಗೆ ಮುಂದುವರಿಕೆ ನವದೆಹಲಿ : ನೀಟ್ -ಯುಜಿ…
246 ಕೋಟಿ ರೂ.ಗಳ 46 ಯೋಜನೆಗಳು ರದ್ದು; ದೇವಸ್ಥಾನಗಳ ಹಣ ಬೇರೆ ಕೆಲಸಕ್ಕೆ ಬಳಸುವಂತಿಲ್ಲ: ಸಿಎಂ ವಿಜಯ್ ಚೆನ್ನೈ: ತಮಿಳುನಾಡಿನಾದ್ಯಂತ…
ಅಯೋಧ್ಯೆಯ ಹಣ ದುರುಪಯೋಗ ಆರೋಪ ; ಧರ್ಮದ ಹೆಸರಿನಲ್ಲಿ ಲೂಟಿ ನಡೆದಿದೆ : ಮಲ್ಲಿಕಾರ್ಜುನ ಖರ್ಗೆ ಆಕ್ರೋಶ ಬೆಂಗಳೂರು :…
ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಿಗೆ ನೂತನ ಬೆಳ್ಳಿರಥ ಸಮರ್ಪಣೆ ಕೊಲ್ಲೂರು: ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಿಗೆ ಪದ್ಮಶ್ರೀ ಆರ್.ಎಂ.ಬಿ. ಆರಾಧ್ಯ…