Featured

ಮಂಗಳೂರು,:ನಾಳೆಯಿಂದ ಜಿಲ್ಲೆಯಲ್ಲಿ ಶಾಲಾ ಕಾಲೇಜು ಆರಂಭ ; ಮಕ್ಕಳ ಸುರಕ್ಷತೆಗೆ ಅಗತ್ಯ ಕ್ರಮ : ಜಿಲ್ಲಾಧಿಕಾರಿ -Vishwanews24

ಮಂಗಳೂರು,:ನಾಳೆಯಿಂದ ಜಿಲ್ಲೆಯಲ್ಲಿ ಶಾಲಾ ಕಾಲೇಜು ಆರಂಭ ; ಮಕ್ಕಳ ಸುರಕ್ಷತೆಗೆ ಅಗತ್ಯ ಕ್ರಮ : ಜಿಲ್ಲಾಧಿಕಾರಿ -Vishwanews24

ಮಂಗಳೂರು,: ಜನವರಿ 1 ರಿಂದ ಶಾಲೆಗಳ ಪುನರಾಂಭವಾಗುವ ಹಿನ್ನೆಲೆ ಮಕ್ಕಳ ಸುರಕ್ಷತೆಗೆ ಸಂಬಂಧಿಸಿದಂತೆ ಅಗತ್ಯ ಕ್ರಮಗಳನ್ನು ಜಿಲ್ಲೆಯ ಎಲ್ಲಾ ಪ್ರಾಥಮಿಕ ಶಾಲಾ ಮತ್ತು ಪ್ರೌಢ ಶಾಲೆಗಳಲ್ಲಿ ಕೈಗೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ತಿಳಿಸಿದ್ದಾರೆ. ಜಿಲ್ಲೆಯ ಎಲ್ಲಾ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಲ್ಲಿ ಸ್ವಚ್ಛತಾ ಕಾರ್ಯ ಕೈಗೊಂಡು ಶಾಲಾ ಆವರಣ ತರಗತಿ ಕೊಠಡಿಗಳನ್ನು ಸ್ವಚ್ಛಗೊಳಿಸಲು ಕ್ರಮ ವಹಿಸಲಾಗಿದೆ. ಈಗಾಗಲೇ ಗ್ರಾಮೀಣ ಪ್ರದೇಶಗಳಲ್ಲಿ ಗ್ರಾಮ ಪಂಚಾಯತ್, ನಗರ ಪ್ರದೇಶದ ಶಾಲೆಗಳಲ್ಲಿ ನಗರಪಾಲಿಕೆ, ಪುರಸಭೆ, ಪಟ್ಟಣ ಪಂಚಾಯತ್ ವತಿಯಿಂದ ಸ್ಯಾನಿಟೈಸ್ ಮಾಡಲು ಅಗತ್ಯ ಕ್ರಮ ವಹಿಸಲಾಗಿದೆ.

ಪ್ರತೀ ಶಾಲೆಯಲ್ಲಿ ದೈಹಿಕ ಉಷ್ಣಾಂಶ ಪರೀಕ್ಷೆ ನಡೆಸಲು ಥರ್ಮಲ್ ಸ್ಕ್ಯಾನರ್ ಉಪಕರಣ ವ್ಯವಸ್ಥೆ ಮಾಡಲಾಗಿದೆ. ಶಾಲೆಗಳಲ್ಲಿ ಎಲ್ಲಾ ಶಿಕ್ಷಕರು ಮತ್ತು ಭೋಧಕೇತರ ಶಾಲಾ ಸಿಬ್ಬಂದಿಗಳಿಗೆ ಆರ್.ಟಿ.ಪಿ.ಸಿಆರ್ ಕೋವಿಡ್ ಪರೀಕ್ಷೆ ಕಡ್ಡಾಯವಾಗಿದ್ದು ಈಗಾಗಲೇ ಎಲ್ಲಾ ಪ್ರಾಥಮಿಕ ಆರೋಗ್ಯ ಕೇಂದ್ರ, ಸಮುದಾಯ ಕೇಂದ್ರ, ತಾಲೂಕು ಆಸ್ಪತ್ರೆ, ಜಿಲ್ಲಾ ವೆನ್ಲಾಕ್ ಆಸ್ಪತ್ರೆಯಲ್ಲಿ ಪರೀಕ್ಷೆಗೆ ಈಗಾಗಲೇ ವ್ಯವಸ್ಥೆ ಮಾಡಲಾಗಿದೆ. ಮಕ್ಕಳ ಹಾಜರಾತಿ ಕಡ್ಡಾಯವಲ್ಲ. ಆದರೆ ಶಾಲೆಗೆ ಬರುವ ವಿದ್ಯಾರ್ಥಿಗಳು ಪೋಷಕರಿಂದ ಒಪ್ಪಿಗೆ ಪತ್ರ ಪಡೆದು ಶಾಲಾ ಮುಖ್ಯೋಪಾಧ್ಯಾಯರಿಗೆ ಸಲ್ಲಿಸಬೇಕು. ಶಿಕ್ಷಣ ಇಲಾಖೆಯ ಎಲ್ಲಾ ಉಸ್ತುವಾರಿ ಅಧಿಕಾರಿಗಳು ಜನವರಿ 1 ರಿಂದ 8 ರವರೆಗೆ ಜಿಲ್ಲೆಯ ಎಲ್ಲಾ ಶಾಲೆಗಳಿಗೆ ಭೇಟಿ ನೀಡಿ ಮೇಲ್ವಿಚಾರಣೆ ನಡೆಸಲು ಸೂಚಿಸಲಾಗಿದೆ.

ಕೋವಿಡ್-19ರ ಮಾರ್ಗಸೂಚಿಯಂತೆ ಹಾಗೂ ಇಲಾಖೆಯು ನೀಡಿರುವ ಎಸ್.ಓ.ಪಿ.ಯಂತೆ ಕಾರ್ಯನಿರ್ವಹಿಸಬೇಕು. ಉಲ್ಲಂಘನೆಯಾದರೆ ಸಂಬಂಧಪಟ್ಟ ಶಿಕ್ಷಣ ಸಂಸ್ಥೆಗಳ ಮೇಲೆ ಕ್ರಮ ಕೈಗೊಳ್ಳಲಾಗುತ್ತದೆ. ಎಲ್ಲಾ 7 ವಲಯ ಕ್ಷೇತ್ರ ಶಿಕ್ಷಣಾಧಿಕಾರಿಗಳ ಹಂತದಲ್ಲಿ ಶಾಲಾ ಮುಖ್ಯೋಪಾಧ್ಯಾಯರುಗಳು ಹಾಗೂ ಆಡಳಿತ ಮಂಡಳಿಗಳ ಮುಖ್ಯಸ್ಥರ ಸಭೆ ನಡೆಸಿ ಅಗತ್ಯ ಸಲಹೆ ಸೂಚನೆ ನೀಡಲಾಗಿರುತ್ತದೆ. ಹಾಸ್ಟೆಲ್‍ಗಳಲ್ಲಿ ವಾಸಿಸುವ ವಿದ್ಯಾರ್ಥಿಗಳಿಗೆ ಕಡ್ಡಾಯವಾಗಿ ಕೋವಿಡ್ ಪರೀಕ್ಷೆಗೆ ಒಳಪಡಿಸಲು ಅಗತ್ಯ ಕ್ರಮ ವಹಿಸಲು ಮೇಲ್ವಿಚಾರಕರಿಗೆ ಈಗಾಗಲೇ ಸೂಚನೆ ನೀಡಲಾಗಿದೆ.

ಶಾಲೆಗಳಲ್ಲಿ ಮಧ್ಯಾಹ್ನದ ಉಪಹಾರದ ವ್ಯವಸ್ಥೆ ಇರುವುದಿಲ್ಲ, ಆದುದರಿಂದ ಮಕ್ಕಳು ಬಿಸಿ ನೀರು ಹಾಗೂ ಉಪಹಾರದ ವ್ಯವಸ್ಥೆಯನ್ನು ತಮ್ಮ ಮನೆಯಿಂದ ತರಲು ಅವಕಾಶ ಕಲ್ಪಿಸಲಾಗಿದೆ. ಶಾಲಾ ಮುಖ್ಯೋಪಾಧ್ಯಾಯರು ಶಾಲೆಗಳಲ್ಲಿ ಸಾಮಾಜಿಕ ಅಂತರ ಕಾಪಾಡಿಕೊಂಡು ತರಗತಿಗಳನ್ನು ನಡೆಸಬೇಕು, ಶಾಲೆಗಳಲ್ಲಿ ಆಟೋಟ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸಬಾರದು. ವಿದ್ಯಾರ್ಥಿಗಳು ಸುರಕ್ಷತೆಗೆ ಸಂಬಂಧಿಸಿದಂತೆ ಎಲ್ಲಾ ಅಗತ್ಯ ಕ್ರಮ ವಹಿಸಲಾಗಿದ್ದು ಪೋಷಕರು ಯಾವುದೇ ಆತಂಕವಿಲ್ಲದೆ ತಮ್ಮ ಮಕ್ಕಳನ್ನು ಶಾಲಾ ಕಾಲೇಜುಗಳಿಗೆ ಕಳುಹಿಸಬಹುದು ಎಂದು ಜಿಲ್ಲಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Vishwa News 24

Recent Posts

ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ – vishwanews24

 ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ ನಟ ದರ್ಶನ್ ರೇಣುಕಾ…

1 day ago

ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ : ಬೆಸ್ಕಾಂ ಸ್ಪಷ್ಟನೆ – vishwanews24

ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ ಬೆಂಗಳೂರು: ರಾಜ್ಯಾದ್ಯಂತ ಜುಲೈ 1 ರಿಂದ ಆರಂಭಗೊಂಡಿರುವ ಗೃಹ ಜ್ಯೋತಿ…

2 days ago

ಎಸ್‌ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ – vishwanews24

ಎಸ್‌ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ ನವದೆಹಲಿ: ರಾಮನಗರ ಜಿಲ್ಲೆಯಲ್ಲಿ ನಡೆದ ಮತದಾರರ…

2 days ago

ಅಕ್ರಮ ಎಸ್‌ಐಆರ್‌ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್‌ ಸಂಚು : ಶೋಭಾ ಕರಂದ್ಲಾಜೆ ಆರೋಪ – vishwanews24

ಅಕ್ರಮ ಎಸ್‌ಐಆರ್‌ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್‌ ಸಂಚು : ಶೋಭಾ ಕರಂದ್ಲಾಜೆ ಗಂಭೀರ…

2 days ago

ಮೈಸೂರು ದಸರಾದಲ್ಲಿ ಕಂಬಳ ಆಯೋಜನೆ: ಸಂಸದ ಯದುವೀರ್ ಒಡೆಯರ್ ಆಕ್ಷೇಪ – vishwanews24

ಮೂಲ ನೆಲದಿಂದ ಬೇರ್ಪಡಿಸಿ ಕರಾವಳಿಯ ಮಣ್ಣಿನ ಸಂಸ್ಕೃತಿಯ ಪಾವಿತ್ರ್ಯಕ್ಕೆ ಧಕ್ಕೆ ತರಬೇಡಿ .. ಕರಾವಳಿ ಕಂಬಳವು ತನ್ನದೇ ಆದ ಆಳವಾದ ಸಾಂಪ್ರದಾಯಿಕ…

2 days ago

ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ – vishwanews24

ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ ಮಂಗಳೂರು: ಖಾಸಗಿ ಸಾರಿಗೆ ಸಂಸ್ಥೆಯಾದ…

2 days ago