ಮಂಗಳೂರು: ಅಕ್ರಮ ಗಣಿಗಾರಿಕೆಯಲ್ಲಿ ತೊಡಗಿದ್ದ ಬಿಜೆಪಿಯ ಯುವಮೋರ್ಚಾ ನಾಯಕರ ವಿರುದ್ಧ ಪ್ರಕರಣ ದಾಖಲಿಸಿ ಪೊಲೀಸರು ಕಾನೂನು ಕ್ರಮ ಕೈಗೊಂಡಿರುದ್ದಾರೆ. ಆದರೆ ಬಿಜೆಪಿ ಶಾಸಕ ಹರೀಶ್ ಪೂಂಜ ಅವರು ಗೂಂಡಾ ವರ್ತನೆ ತೋರಿದ್ದು, ಇದು ಅಕ್ಷಮ್ಯ ಎಂದು ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ.
ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಬೆಳ್ತಂಗಡಿ ಪೊಲೀಸ್ ಠಾಣೆ ಎದುರು ಹರೀಶ್ ಪೂಂಜಾ ಅವರು ಪೊಲೀಸ್ ಅಧಿಕಾರಿಗಳಿಗೆ ಧಮ್ಕಿ ಹಾಕುತ್ತಿರುವ ವಿಡಿಯೋವನ್ನು ಹಂಚಿಕೊಂಡಿರುವ ಅವರು, ಹರೀಶ್ ಪೂಂಜ ಅವರು ಅಕ್ರಮ ಲೂಟಿಕೋರರ ಪರ ನಿಂತು ಸಮಾಜದ ಶಾಂತಿ ಸುವ್ಯವಸ್ಥೆ ಕಾಪಾಡುವ ಪೊಲೀಸರ ವಿರುದ್ಧವೇ ಗೂಂಡಾ ವರ್ತನೆ ತೋರಿದ್ದಾರೆ. ಸಮಾಜದ ಕಾನೂನು ಸುವ್ಯವಸ್ಥೆ ಬಗ್ಗೆ ಕಾಳಜಿ ಇಲ್ಲ. ಶಾಸಕರಾಗಿ ಪೊಲೀಸರ ಕಾರ್ಯಕ್ಕೆ ಅಡ್ಡಿ ಪಡಿಸಿ ಈ ರೀತಿ ಗೂಂಡಾಗಿರಿ ತೋರಿರುವುದು ಎಷ್ಟು ಸರಿ ಎಂದು ಪ್ರಶ್ನೆ ಮಾಡಿದ್ದಾರೆ.
ಸ್ವತಃ ಬಿಜೆಪಿ ಶಾಸಕರೇ ಮುಂದೆ ನಿಂತು ಸರ್ಕಾರಿ ಅಧಿಕಾರಿಗಳಿಗೆ ಕಾನೂನಾತ್ಮಕವಾಗಿ ಕೆಲಸ ಮಾಡಲು ಅಡ್ಡಿಪಡಿಸುವ ಈ ವರ್ತನೆಯನ್ನು ಸಹಿಸಲು ಸಾಧ್ಯವಿಲ್ಲ. ಬಿಜೆಪಿಗೆ ಸಂವಿಧಾನದ ಬಗ್ಗೆ ಗೌರವವಿಲ್ಲ. ಸಮಾಜಘಾತುಕರ ಪರ ನಿಂತು ಬಿಜೆಪಿ ಶಾಸಕರು ರಾಜಕಾರಣ ಮಾಡುತ್ತಿರುವುದು ಈ ಪ್ರಕರಣದಲ್ಲಿ ಸ್ಪಷ್ಟವಾಗಿ ಗೋಚರಿಸುತ್ತಿದೆ ಎಂದು ಬರೆದುಕೊಂಡಿದ್ದಾರೆ.
ಧರ್ಮಸ್ಥಳ ಪ್ರಕರಣ : ವಿಠಲ್ ಗೌಡ ವಿರುದ್ಧ ಅರೆಸ್ಟ್ ವಾರಂಟ್: ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…
ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ ಬೆಂಗಳೂರು: ಕನ್ನಡ ಸಿನಿಮಾ ರಂಗದ ಖ್ಯಾತ ನಿರ್ಮಾಪಕ ಬಾ.ಮಾ.…
ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ ಬೆಂಗಳೂರು: ಶ್ರೀರಾಮನನ್ನು ರಾಜಕೀಯವಾಗಿ ಬಳಸಿಕೊಡವರು, ಶ್ರೀರಾಮನ ಹೆಸರಿನಲ್ಲಿ ಒಂದೊಂದು…
ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು ಉಡುಪಿ: ಕಠಿಣ ಕಾನೂನು ಕ್ರಮ ಮತ್ತು ಜಾಗೃತಿ…
ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ ಚೆನ್ನೈ: ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ,…
ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ ಶಿವಮೊಗ್ಗ: ಅಯೋಧ್ಯೆ ರಾಮಮಂದಿರದ ದೇಣಿಗೆ ಲೂಟಿ ಆಗಿರುವ…