ಮಂಗಳೂರು: ನರ್ಸಿಂಗ್ ಕಾಲೇಜಿನ ಹಾಸ್ಟೆಲ್‌ನ 89ಕ್ಕೂ ಹೆಚ್ಚು ವಿದ್ಯಾರ್ಥಿಗಳು ಫುಡ್ ಪಾಯಿಸನ್ ಸಮಸ್ಯೆಯಿಂದ ಆಸ್ಪತ್ರೆಗೆ ದಾಖಲಾಗಿರುವ ಘಟನೆ ಮಂಗಳೂರಿನಲ್ಲಿ ನಡೆದಿದೆ.
ಮಂಗಳೂರು ಹೊರವಲಯದ ಶಕ್ತಿ ನಗರದಲ್ಲಿರುವ ಪ್ರತಿಷ್ಠಿತ ಸಿಟಿ ಆಸ್ಪತ್ರೆಯ ನರ್ಸಿಂಗ್ ವಿದ್ಯಾರ್ಥಿಗಳು ಹಾಸ್ಟೆಲ್‌ನಲ್ಲಿ ಚಿಕನ್, ಗೀರೈಸ್ ತಿಂದು ಫುಡ್ ಪಾಯಿಸನ್ ಆಗಿ ಅನಾರೋಗ್ಯದಿಂದ ಆಸ್ಪತ್ರೆ ಸೇರಿದ್ದಾರೆ. ನಗರದ ಸಿಟಿ ಆಸ್ಪತ್ರೆ, ಎ.ಜೆ. ಆಸ್ಪತ್ರೆ, ಕೆಎಂಸಿ ಆಸ್ಪತ್ರೆಗಳಿಗೆ ವಿದ್ಯಾರ್ಥಿಗಳು ದಾಖಲಾಗಿದ್ದಾರೆ.
ಆಸ್ಪತ್ರೆಯಲ್ಲಿ ವಿದ್ಯಾರ್ಥಿಗಳು ಚಿಕಿತ್ಸೆ ಪಡೆಯುತ್ತಿದ್ದಾರೆ. ಕಾಲೇಜು ಆಡಳಿತ ಮಂಡಳಿ ವಿರುದ್ಧ ನಿರ್ಲಕ್ಷ್ಯದ ಆರೋಪ ಕೇಳಿಬಂದಿದೆ. ವಿದ್ಯಾರ್ಥಿಗಳು ದಾಖಲಾಗಿರುವ ಆಸ್ಪತ್ರೆಗಳಿಗೆ ಮಂಗಳೂರು ಪೊಲೀಸ್ ಆಯುಕ್ತ ಶಶಿಕುಮಾರ್ ಭೇಟಿ ನೀಡಿದ್ದಾರೆ.
ಫುಡ್ ಪಾಯಿಸನ್ ಆದ ಕಾರಣ ಅವರನ್ನು ದಾಖಲು ಮಾಡಲಾಗಿದೆ. ಆತಂಕ ಪಡುವ ಅಗತ್ಯವಿಲ್ಲ. ಹಾಸ್ಟೆಲ್‌ಗೆ ಭೇಟಿ ನೀಡಿ ವಾರ್ಡನ್ ಜತೆ ಸಂವಾದ ನಡೆಸಿ ಎಲ್ಲವನ್ನೂ ತಿಳಿದುಕೊಳ್ಳುತ್ತೇವೆ. ಎಲ್ಲಾ ವಿದ್ಯಾರ್ಥಿಗಳು ಅಪಾಯದಿಂದ ಪಾರಾಗಿದ್ದಾರೆ. ಯಾವುದೇ ಪ್ರಾಣಹಾನಿಯಾಗಿಲ್ಲ ಎಂದು ಜಿಲ್ಲಾ ಆರೋಗ್ಯಾಧಿಕಾರಿ ಡಾ.ಅಶೋಕ್ ತಿಳಿಸಿದ್ದಾರೆ.
ಮಧ್ಯರಾತ್ರಿ 2 ಗಂಟೆಯಿಂದ ವಿದ್ಯಾರ್ಥಿಗಳು ಹೊಟ್ಟೆ ನೋವು, ಭೇದಿ, ವಾಂತಿಯಿಂದ ಆಸ್ಪತ್ರೆಗಳಿಗೆ ದಾಖಲಾಗಿದ್ದಾರೆ ಎಂದು ನಮಗೆ ತಿಳಿದು ಬಂದಿದೆ. ನಾವು ಕಾರಣವನ್ನು ಕಂಡುಹಿಡಿಯಲು ಪ್ರಯತ್ನಿಸುತ್ತಿದ್ದೇವೆ ಎಂದು ಪೊಲೀಸ್ ಆಯುಕ್ತರು ಹೇಳಿದ್ದಾರೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…